Wednesday, April 10, 2024

ಪುತ್ತೂರು ತಾಲೂಕಿನ ಕಬಕದಲ್ಲಿ ಅಂತರಾಷ್ಟ್ರೀಯ ಮಟ್ಟದ ಕ್ರೀಡಾಂಗಣಕ್ಕೆ ಸರಕಾರದಿಂದ ಹಸಿರು ನಿಶಾನೆ.

ಪುತ್ತೂರು ವಿಧಾನಸಭಾ ಕ್ಷೇತ್ರದ ಕಬಕ ಎಂಬಲ್ಲಿ ಅಂತರರಾಷ್ಟ್ರೀಯ ಮಟ್ಟದ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣಕ್ಕೆ ರಾಜ್ಯ ಸರಕಾರ ಹಸಿರು ನಿಶಾನೆ ತೋರಿದೆ ಎಂದು ಪುತ್ತೂರು ಶಾಸಕ ಸಂಜೀವ ಮಠಂದೂರು ಹೇಳಿದರು.

ಪುತ್ತೂರಿನಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು ರಾಜ್ಯ ಸರಕಾರ ಈ ನಿಟ್ಟಿನಲ್ಲಿ ಕರ್ನಾಟಕ ಕ್ರಿಕೆಟ್ ಬೋರ್ಡ್ ಗೆ ಸೂಚನೆಯನ್ನೂ ನೀಡಿದೆ ಎಂದ ಅವರು ಸುಮಾರು 50 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಕ್ರಿಕೆಟ್ ಕ್ರೀಡಾಂಗಣದ ಕಾಮಗಾರಿ ನಡೆಯಲಿದೆ ಎಂದ ಅವರು ಕಡಬ ಎಂಬಲ್ಲಿ ಕ್ರೀಡಾಂಗಣಕ್ಕೆ ಬೇಕಾದ ಜಮೀನನ್ನು ಗುರುತಿಸುವ ಕಾರ್ಯವೂ ಮುಕ್ತಾಯಗೊಂಡಿದೆ ಎಂದ ಅವರು ಕ್ರಿಕೆಟ್‌ ಕ್ರಿಕೆಟ್‌‌ ಆಟಗಾರರಿಗೆ ತರಭೇತಿ, ರಣಜಿ ಪಂದ್ಯ ಸೇರಿದಂತೆ ಕ್ರಿಕೆಟ್ ಗೆ ಸಂಬಂಧಿಸಿದ ಎಲ್ಲಾ ವ್ಯವಸ್ಥೆಗಳೂ ಇಲ್ಲಿರಲಿದೆ ಎಂದರು.

ಗ್ರಾಮಪಂಚಾಯತ್ ಗಳ ಅಧಿಕಾರ ಮೊಟಕು ವಿಚಾರದ ಕಾಂಗ್ರೆಸ್ ಪಕ್ಷದ ಆರೋಪಗಳಿಗೆ ಉತ್ತರಿಸಿಸ ಅವರು ಕೆಲವರಿಗೆ ಚುನಾವಣೆ ಬಂತೆಂದರೆ ಈ ಎಲ್ಲಾ ವಿಚಾರಗಳು ನೆನಪಿಗೆ ಬರುತ್ತದೆ. ಆದರೆ ಈ ಆರೋಪಗಳಲ್ಲಿ ಯಾವುದೇ ಹುರುಳಿಲ್ಲ. ಸರಕಾರದ ಮುಂದೆ ಇಂಥ ಯಾವುದೇ ಪ್ರಸ್ತಾಪವೂ ಇಲ್ಲ. ಪಂಚಾಯತ್ ರಾಜ್ ತಿದ್ದುಪಡಿಯಾಗುವುದು ಕ್ಯಾಬಿನೆಟ್ ಕಮಿಟಿ ಮೂಲಕವಾಗಿದ್ದು, ಈವರೆಗೆ ಈ ವಿಚಾರದಲ್ಲಿ ಚರ್ಚೆಯೇ ನಡೆದಿಲ್ಲ ಎಂದ ಅವರು ಪರಿಶಿಷ್ಟ ಜಾತಿ ಮತ್ತು ಪಂಗಡದವರ ಭೂ ಪರಿವರ್ತನೆಗೆ ಇರುವ ಸಮಸ್ಯೆಯನ್ನು ರಾಜ್ಯಸರಕಾರ ಬಗೆಹರಿಸಿದ್ದು, ಇನ್ನು ಮುಂದೆ ಈ ಜನ ತಮ್ಮ ಜಾಗದಲ್ಲಿ ಮನೆ, ವಾಣಿಜ್ಯ ಮೊದಲಾದ ವ್ಯವಸ್ಥೆಗಳನ್ನು ಮಾಡಲು ಅವಕಾಶ ನೀಡಲಾಗಿದೆ ಎಂದು ಅವರು ಹೇಳಿದರು.

More from the blog

ಎ.14ರ ಪ್ರಧಾನಿ ಮೋದಿ ಸಮಾವೇಶ ರದ್ದು : ರೋಡ್ ಶೋದಲ್ಲಿ ಮಾತ್ರ ಭಾಗಿ

ಮಂಗಳೂರು: ಏಪ್ರಿಲ್ 14 ರಂದು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಪ್ರಧಾನಿ ಮೋದಿ ಬೃಹತ್ ಸಮಾವೇಶಕ್ಕೆ ಆಯೋಜನೆ ಮಾಡಲಾಗಿತ್ತು. ಆದರೆ ಇದೀಗ ಕೊನೆ ಕ್ಷಣದಲ್ಲಿ ಈ ಸಮಾವೇಶ ರದ್ದುಪಡಿಸಲಾಗಿದೆ. ಏಪ್ರಿಲ್ 14ರಂದು ಮಂಗಳೂರಿನಲ್ಲಿ...

ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸುವುದು ಹೇಗೆ….?​ ಇಲ್ಲಿದೆ ಮಾಹಿತಿ

ಬೆಂಗಳೂರು: ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು, ಶೇ 81.15 ಮಂದಿ ಉತ್ತೀರ್ಣಗೊಂಡಿದ್ದಾರೆ. 2024ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ ವಿಭಾಗದಲ್ಲಿ 1,28,448 ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ...

ದ್ವಿತೀಯ ಪಿಯು ಫಲಿತಾಂಶ ಪ್ರಕಟ : ದಕ್ಷಿಣ ಕನ್ನಡ ಜಿಲ್ಲೆಗೆ ಮೊದಲ ಸ್ಥಾನ

ಬೆಂಗಳೂರು: ಮಾರ್ಚ್ 1ರಿಂದ ಮಾರ್ಚ್ 22ರವರೆಗೆ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಬುಧವಾರ ಪ್ರಕಟಗೊಂಡಿದೆ. ಬೆಂಗಳೂರಿನಲ್ಲಿ ಶಿಕ್ಷಣ ಇಲಾಖೆ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದೆ. ಈ ಬಾರಿ, ಶೇ 81.15 ಮಂದಿ ಉತ್ತೀರ್ಣರಾಗಿದ್ದಾರೆ....

ಶಾಲಾ ಸಮುದಾಯದತ್ತ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

ಮಾಣಿ: ಶೈಕ್ಷಣಿಕ ವಿಚಾರಗಳ ಸಂಬಂಧಿತವಾದ ಒಳ್ಳೆಯ ಚಚೆ೯ಗಳು ಮೂಡಿಬಂದಾಗ ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ಧಿಗೆ ಪೂರಕವಾದ ಕೆಲಸಗಳು ಮೂಡಲು ಸಾಧ್ಯ ‌. ಪ್ರತಿಯೊಬ್ಬ ವಿದ್ಯಾರ್ಥಿ, ಪೋಷಕರು,ತನ್ನ ಶಾಲೆಯ ಬಗ್ಗೆ ಒಳ್ಳೆಯ ಭಾವನೆ, ಸಂಬಂಧ ಇರಬೇಕು...