Saturday, April 6, 2024

ಆಟೋ ಚಾಲಕನ ಮೃತದೇಹ ಕೆರೆಯಲ್ಲಿ ಪತ್ತೆಯಾದ ಪ್ರಕರಣಕ್ಕೆ ಟ್ವಿಸ್ಟ್

ಬೆಳ್ತಂಗಡಿ: ರಿಕ್ಷಾ ಚಾಲಕನ ಮೃತದೇಹ ಕೆರೆಯಲ್ಲಿ ಪತ್ತೆಯಾದ ಪ್ರಕರಣಕ್ಕೆ ಇದೀಗ ಹೊಸ ತಿರುವು ಲಭಿಸಿದ್ದು, ಈ ಬಗ್ಗೆ ತನಿಖೆ ನಡೆಸುವಂತೆ ಮೃತ ಪ್ರವೀಣ್ ಪಿಂಟೋ ಅವರ ಪತ್ನಿ ಬೆಳ್ತಂಗಡಿ ಪೊಲೀಸರಿಗೆ ದೂರು ನೀಡಿದ್ದು ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಪ್ರವೀಣ್ ಪತ್ನಿ ನೀಡಿರುವ ದೂರಿನಲ್ಲಿ ಏನಿದೆ?

ಗುರುವಾಯನಕೆರೆಯಲ್ಲಿ ರಿಕ್ಷಾ ಚಾಲಕನಾಗಿ ಕೆಲಸ ಮಾಡುತ್ತಿರುವ ಪ್ರವೀಣ್ ಪಿಂಟೋ ಅವರು ಮಂಗಳವಾರ ರಾತ್ರಿ ಮನೆಯಿಂದ ಓಡಿಲ್ನಾಳ ಗ್ರಾಮದ ಅಮರ್ ಜಾಲ್ ಎಂಬಲ್ಲಿಗೆ ಮೆಹಂದಿ ಕಾರ್ಯಕ್ರಮಕ್ಕೆಂದು ಹೋಗಿದ್ದ. ಮೆಹಂದಿ ಕಾರ್ಯಕ್ರಮದ ಮನೆಯಲ್ಲಿ ಪ್ರವೀಣ್ ಹಾಗೂ ಪ್ರದೀಪ್ ಶೆಟ್ಟಿ ಎಂಬವರ ಮಧ್ಯೆ ಮಾತಿನ ಚಕಮಕಿ ಹಾಗೂ ಹೊಡೆದಾಟ ನಡೆದಿರುವ ವಿಚಾರ ಬಳಿಕ ತಿಳಿದು ಬಂದಿದೆ. ಮಾತ್ರವಲ್ಲದೇ ರಾತ್ರಿ 3 ಗಂಟೆಯ ಸುಮಾರಿಗೆ ತಮ್ಮ ಮನೆಯ ಸಮೀಪ ಕಾರೊಂದು ಬಂದು ಹೋಗಿದ್ದು, ಮೃತದೇಹದಲ್ಲಿ ಪ್ರವೀಣ್ ಧರಿಸಿದ್ದ ಕೆಂಪು ಟೀ ಶರ್ಟ್ ಇರಲಿಲ್ಲ. ಪ್ರವೀಣ್ ಅವರ ಅಸಹಜ ಸಾವಿನ ಬಗ್ಗೆ ಹಲವಾರು ಅನುಮಾನವಿದ್ದು ಕ್ರಮ ಕೈಗೊಳ್ಖುವಂತೆ ಮೃತನ ಪತ್ನಿ ರೇಷ್ಮಾ ಬೆಳ್ತಂಗಡಿ ಪೊಲೀಸರಿಗೆ ನೀಡಿರುವ ದೂರಿನಲ್ಲಿ ಮಾಹಿತಿ ನೀಡಿದ್ದಾರೆ.

ಇನ್ನು ಈ ದೂರಿನ ಆಧಾರದ ಮೇಲೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಮೃತದೇಹದ ಮರಣೋತ್ತರ ಪರೀಕ್ಷೆಯನ್ನು ಮಂಗಳೂರಿನಲ್ಲಿ ನಡೆಸಲಾಗಿದ್ದು ಇದರಿಂದ ಹೆಚ್ಚಿನ ಮಾಹಿತಿಗಳು ಲಭಿಸುವ ನಿರೀಕ್ಷೆಯಿದೆ.

More from the blog

ಮಂಗಳೂರು: ‘ಸ್ವೀಟ್ ಸಿಂಫನಿ ಇನ್ಸ್ಟಿಟ್ಯೂಟ್ ಆಫ್ ಮ್ಯೂಸಿಕ್’ ಸಂಸ್ಥೆಯ ಸಂಗೀತ ಕ್ಷೇತ್ರದಲ್ಲಿ ಸಂಪುಟ 2′ ರ ನೂತನ ಕೃತಿ ಲೋಕಾರ್ಪಣೆ

ಮಂಗಳೂರು: ಮಂಗಳೂರಿನ ಕುಲಶೇಖರದಲ್ಲಿರುವ 'ಸ್ವೀಟ್ ಸಿಂಫನಿ ಇನ್ಸ್ಟಿಟ್ಯೂಟ್ ಆಫ್ ಮ್ಯೂಸಿಕ್' ಸಂಸ್ಥೆಯ ಪ್ರಕಾಶನದಲ್ಲಿ ಇಂಗ್ಲಿಷ್, ಹಿಂದಿ ಮತ್ತು ಕನ್ನಡದ ಜನಪ್ರಿಯ ಹಾಡುಗಳನ್ನು ಪಾಶ್ಚಿಮಾತ್ಯ ನೊಟೇಶನ್ ಮೂಲಕ ವಯಲಿನ್, ಗಿಟಾರ್ ಮತ್ತು ಕೀಬೋರ್ಡ್ ನಲ್ಲಿ...

ಹೆರಿಗೆ ವೇಳೆ ವಿಪರೀತ ರಕ್ತಸ್ರಾವ : ಲಾಯಿಲದ ಮಹಿಳೆ ಸಾವು

ಬೆಳ್ತಂಗಡಿ: ಹೆರಿಗೆಗೆಂದು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆಯೊಬ್ಬರು ತೀವ್ರ ರಕ್ತ ಸ್ರಾವದಿಂದ ಸಾವನ್ನಪ್ಪಿದ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಬದ್ಯಾರ್ ಖಾಸಗಿ ಆಸ್ಪತ್ರೆಯಲ್ಲಿ ಲಾಯಿಲ ಗ್ರಾಮದ ಗಾಂಧಿನಗರ ನಿವಾಸಿ ಗಾಯತ್ರಿ ಎಂಬವರು ಎರಡನೇ...

ಆಭರಣ ಪ್ರಿಯರಿಗೆ ಗುಡ್‌ನ್ಯೂಸ್‌ : ವಾರಾಂತ್ಯದಲ್ಲಿ ಚಿನ್ನದ ದರ ತುಸು ಇಳಿಕೆ…

ಬೆಂಗಳೂರು: ಚಿನ್ನದ ದರದಲ್ಲಿ ಮತ್ತೆ ಹಾವು ಏಣಿಯಾಟ ಶುರುವಾಗಿದೆ. ಕಳೆದೆರಡು ದಿನಗಳಿಂದ ನಿರಂತರ ಏರಿಕೆ ಕಂಡಿದ್ದ ಬಂಗಾರದ ಬೆಲೆ ಇದೀಗ ಇಳಿಕೆಯಾಗಿದೆ. ನಿನ್ನೆಯ ದರಕ್ಕೆ ಹೋಲಿಸಿದರೆ 10ಗ್ರಾಂ ಚಿನ್ನದ ಮೇಲೆ 450 ರೂ...

ನೀತಿ ಸಂಹಿತೆ ಇರುವಾಗ ಆಶ್ಲೇಷ ಬಲಿ ಮಂಟಪ ಕಾಮಗಾರಿ ಆರಂಭ ಸಮರ್ಪಕವಲ್ಲ- ಹರೀಶ್ ಇಂಜಾಡಿ

ಸುಬ್ರಹ್ಮಣ್ಯ: ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಈ ಹಿಂದಿನ ಆಡಳಿತ ಮಂಡಳಿಯ ಕೊನೇ ದಿನಗಳಲ್ಲಿ ದಾನಿಗಳು ಕ್ಷೇತ್ರದಲ್ಲಿ ಆಶ್ಲೇಷ ಬಲಿ ಮಂಟಪ ನಿರ್ಮಿಸಲು ಮುಂದೆ ಬಂದರು. ಇದು ಸ್ವಾಗತಾರ್ಹ ಬೆಳವಣಿಗೆ. ಆದರೆ...