ಮಂಗಳೂರು: ಜಿಲ್ಲಾಡಳಿತ, ಪ್ರವಾಸೋದ್ಯಮ ಇಲಾಖೆ ಮತ್ತು ಲೋಕೋಪಯೋಗಿ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಸ್ನಾನಘಟ್ಟ ಅಭಿವೃದ್ಧಿ ಕಾಮಗಾರಿಯ ಉದ್ಘಾಟನೆ ಸಮಾರಂಭ ಡಿ. 17ರಂದು ಸ್ಥಾನಘಟ್ಟದಲ್ಲಿ ನೆರವೇರಲಿದೆ.
ರಾಜ್ಯಸಭಾ ಸಂಸದ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿ ಕಾರಿಗಳಾದ ಡಾ.ಡಿ.ವೀರೇಂದ್ರ ಹೆಗ್ಗಡೆ ಭಾಗವಹಿಸಲಿದ್ದಾರೆ.
ಕಾರ್ಯಕ್ರಮವನ್ನು ಸಚಿವ ವಿ.ಸುನಿಲ್ ಕುಮಾರ್ ಉದ್ಘಾಟಿಸಲಿದ್ದಾರೆ. ಸಚಿವ ಆನಂದ್ ಸಿಂಗ್ ನಾಮಫಲಕ ಅನಾವರಣ ಮಾಡಲಿದ್ದಾರೆ. ಶಾಸಕ ಹರೀಶ್ ಪೂಂಜ ಅಧ್ಯಕ್ಷತೆ ವಹಿಸುವರು ಎಂದು ಪ್ರಕಟನೆ ತಿಳಿಸಿದೆ.