Wednesday, April 10, 2024

ನೆಟ್ಟಣಿಗೆ ಮುಡ್ನೂರು ಗ್ರಾಮದ ಪಳ್ಳತ್ತೂರು-ಬಂಟಕಲ್ಲು-ಬಾರೆಕೊಚ್ಚಿ- ಕಟ್ಟತ್ತಾರಿನ ರಸ್ತೆ ನಿರ್ಮಾಣಕ್ಕೆ ತಹಶೀಲ್ದಾರ್ ಗೆ ಮನವಿ

ಪುತ್ತೂರು: ನೆಟ್ಟಣಿಗೆ ಮುಡ್ನೂರು ಗ್ರಾಮದ ಪಳ್ಳತ್ತೂರು -ಬಂಟಕಲ್ಲು-ಬಾರೆಕೊಚ್ಚಿ-ಕಟ್ಟತ್ತಾರು ಕಾಲನಿಗೆ ರಸ್ತೆ ವ್ಯವಸ್ಥೆ ಕಲ್ಪಿಸುವಂತೆ ಆಗ್ರಹಿಸಿ ರೈತ ಸಂಘ ಹಸಿರು ಸೇನೆ (ವಾಸುದೇವ ಬಣ) ಹಾಗೂ ಸ್ಥಳೀಯ ನಿವಾಸಿಗಳು ಪುತ್ತೂರು ತಹಶೀಲ್ದಾರ್‌ಗೆ ಮನವಿ ಸಲ್ಲಿಸಿದ್ದಾರೆ.

ಈ ಭಾಗದಲ್ಲಿ ಸುಮಾರು 30 ಮನೆಗಳಿಗೆ ಸಂಪರ್ಕ ರಸ್ತೆಯಿಲ್ಲ. ಹಲವು ದಶಕಗಳಿಂದ ಇವರು ವಾಸಿಸುತ್ತಿದ್ದರೂ ಅನಾರೋಗ್ಯದಂತಹ ತುರ್ತು ಸಂದರ್ಭದಲ್ಲಿ ರೋಗಿಯನ್ನು ಹೊತ್ತುಕೊಂಡೇ ಸಾಗಬೇಕಾದ ಸ್ಥಿತಿ ಇದೆ. ಅಗತ್ಯ ಸಾಮಾಗ್ರಿಗಳನ್ನು ಕೊಂಡೊಯ್ಯಲೂ ಸಮಸ್ಯೆ ಇದೆ. ಸುಮಾರು ಅರ್ಧದಷ್ಟು ರಸ್ತೆಯನ್ನು ರೈತ ಸಂಘ ಹಾಗೂ ಸಥಳೀಯರ ನೆರವಿನಿಂದ ನಿರ್ಮಿಸಲಾಗಿದೆ. ಆದರೆ ೩೦-೫೦ ಮೀ. ನಷ್ಟು ರಸ್ತೆ ಬಾಕಿ ಉಳಿದಿದೆ ಎಂದು ರೈತ ಸಂಘ ಜಿಲ್ಲಾಧ್ಯಕ್ಷ ಅಮರನಾಥ ಆಳ್ವ ಕರ್ನೂರುಗುತ್ತು ಹೇಳಿದರು.

ಸರಕಾರಿ ಜಾಗದಲ್ಲಿ ರಸ್ತೆ ನಿರ್ಮಾಣಕ್ಕೆ ಸಂಬಂಧಿಸಿ ಈ ಹಿಂದೆ ತಹಶೀಲ್ದಾರ್ ಗುರುಮಾಡಿಕೊಟ್ಟಿದ್ದಾರೆ. ಆ ರಸ್ತೆ ನಿರ್ಮಾಣಕ್ಕೆ ಕೆಲವು ಅಡ್ಡಿ ಉಂಟುಮಾಡುತ್ತಿದ್ದಾರೆ. ಹಲವು ಕಾಲನಿ ಮಂದಿ ಹಾಗೂ ಇತರ ಹಲವು ಕುಟುಂಬಗಳಿಗೆ ರಸ್ತೆ ನಿರ್ಮಾಣದಿಂದ ಹೆಚ್ಚು ಅನುಕೂಲವಾಗಲಿದೆ. ಹಾಲಿ ಗುರುತಿಸಿರುವ ಸರಕಾರಿ ಜಾಗದಲ್ಲಿ ತಹಶೀಲ್ದಾರ್ ಅವರು ನೇತೃತ್ವ ವಹಿಸಿ ರಸ್ತೆ ನಿರ್ಮಾಣ ಮಾಡಿಕೊಡಬೇಕು ಎಂದು ಅವರು ವಿನಂತಿಸಿದ್ದಾರೆ.

ಈ ಸಂದರ್ಭದಲ್ಲಿ ರೈತ ಸಂಘ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಭಾಸ್ಕರ ರೈ ಕೊಪ್ಪಳ, ಸ್ಥಳೀಯರಾದ ಜಯಾ ಕಟ್ಟತ್ತಾರು, ಸುಬ್ಬಣ್ಣ ಕಟ್ಟತ್ತಾರು, ಪದ್ಮಾವತಿ ಬಾರೆಕೊಚ್ಚಿ, ಸುಧಾಕರ ರೈ, ಶಿವಪ್ರಸಾದ್ ರೈ, ನಾರಾಯಣ ರೈ, ಪ್ರಶಾಂತ್ ರೈ ಮೊದಲಾದವರು ಉಪಸ್ಥಿತರಿದ್ದರು.

ತಂಡದಿಂದ ತಹಶೀಲ್ದಾರ್ ನಿಸರ್ಗಪ್ರಿಯ ಹಾಗೂ ತಾ.ಪಂ. ಕಾರ್ಯನಿರ್ವಹಣಾಧಿಕಾರಿ ನವೀನ್ ಭಂಡಾರಿ ಅವರಿಗೆ ಮನವಿ ನೀಡಲಾಯಿತು.

More from the blog

ಮನೆಗೆ‌ ನುಗ್ಗಿ ಚೂರಿ ಇರಿದ ಪ್ರಕರಣ : ಆರೋಪಿ ಅರೆಸ್ಟ್

ಬಂಟ್ವಾಳ: ಮನೆಯೊಳಗೆ ‌ನುಗ್ಗಿ ವ್ಯಕ್ತಿಯೋರ್ವನಿಗೆ ಚೂರಿ ಹಾಕಿ ಪರಾರಿಯಾಗಿದ್ದ ಆರೋಪಿಯನ್ನು ಬಂಟ್ವಾಳ ‌ಗ್ರಾಮಾಂತರ ಪೋಲೀಸ್ ಬಂಧಿಸಿ ನ್ಯಾಯಲಯಕ್ಕೆ ಹಾಜರುಪಡಿಸಿದ್ದು,ನ್ಯಾಯಾಲಯ ಈತನಿಗೆ 15 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ. ಅಬ್ದುಲ್ ರಹಿಮಾನ್ ಎಂಬಾತ ಬಂಧಿತ...

ಏ.10ರಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ…. ರಿಸಲ್ಟ್​ ಚೆಕ್ ಮಾಡೋದು ಹೇಗೆ?

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು ನಾಳೆ ಪ್ರಕಟಿಸಲಾಗುತ್ತಿದೆ. ಎಲ್ಲ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಮುಕ್ತಾಯವಾದ ಹಿನ್ನಲೆ ನಾಳೆ ಫಲಿತಾಂಶ ಪ್ರಕಟಿಸಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಮುಂದಾಗಿದೆ. ನಾಳೆ...

ಬಿಜೆಪಿ ಬಂಟ್ವಾಳ ಮಂಡಲದ ವತಿಯಿಂದ ನಾರಿಶಕ್ತಿ ಮಹಿಳಾ ಸಮಾವೇಶ

ಬಂಟ್ವಾಳ: ನಾರಿ ಶಕ್ತಿ ಸಶಕ್ತರಾಗಬೇಕು ಎಂಬುದು ಮಹತ್ವದ ಕನಸು ಮತ್ತು ಪರಿಕಲ್ಪನೆಯಾಗಿದ್ದು, ರಾಜಕೀಯವಾಗಿ ಮಹಿಳೆಯರನ್ನು ಸಬಲೀಕರಣ ಮಾಡಿದ ಪಕ್ಷ ಬಿಜೆಪಿಯಾಗಿದ್ದು, ಪ್ರಧಾನಿ ನರೇಂದ್ರ ಮೋದಿಯವರು ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಅಧಿಕಾರದ...

ವಿಕಸಿತ ಭಾರತ ಸಂಕಲ್ಪದೊಂದಿಗೆ ಗ್ರಾಮ, ಮನೆ, ಮನ ಅಭಿಯಾನ ಸಂಪರ್ಕಕ್ಕೆ ಶಾಸಕ ರಾಜೇಶ್ ನಾಯ್ಕ್ ಚಾಲನೆ

ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾಗಬೇಕು, ದ.ಕ.ಜಿಲ್ಲಾ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಪ್ರಚಂಡ ಬಹುಮತದೊಂದಿಗೆ ಗೆಲುವು ಸಾಧಿಸಬೇಕು ಎಂಬ ಯೋಚನೆಯಿಂದ ಶಾಸಕ ರಾಜೇಶ್ ನಾಯ್ಕ್ ಅವರು ವಿಕಸಿತ ಭಾರತ ಸಂಕಲ್ಪದೊಂದಿಗೆ ಗ್ರಾಮ ,ಮನೆ,...