Sunday, April 7, 2024

ಸಿದ್ಧಕಟ್ಟೆ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸ್ವಾಮಿ ವಿವೇಕಾನಂದರ ಜಯಂತಿ ಆಚರಣೆ

ಸಿದ್ಧಕಟ್ಟೆ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಾಷ್ಟ್ರೀಯ ಯುವ ದಿನಾಚರಣೆಯ ಅಂಗವಾಗಿ ಸ್ವಾಮಿ ವಿವೇಕಾನಂದರ ಜಯಂತಿಯನ್ನು ಆಚರಿಸಲಾಯಿತು.

ಪ್ರಾಧ್ಯಾಪಕರು ಡಾ.ಗಿರೀಶ್ ಭಟ್ ಮಾತನಾಡಿ, ಕನ್ನಡ ಭಾಷಾ ವಿಭಾಗ ಇವರು ವಿದ್ಯಾರ್ಥಿಗಳಿಗೆ ಭಾರತದ ಬಗ್ಗೆ ಅರಿತುಕೊಳ್ಳಬೇಕಾದರೆ ವಿವೇಕಾನಂದರ ಜೀವನ ಸಂದೇಶ ಹಾಗೂ ಸಾಧನೆ ಅರ್ಥಮಾಡಿಕೊಂಡರೆ ಸಾಕು. ಭಾರತದ ಹಲವು ನಾಯಕರು, ಸಾಧಕರು ಹಾಗೂ ಯಶಸ್ವಿ ವ್ಯಕ್ತಿಗಳ ಹಿಂದಿರುವುದು ವಿವೇಕಾನಂದರ ಆದರ್ಶಗಳು. ನಿಶ್ಚಲತೆ, ನಿರ್ಭಯತೆ ಹಾಗೂ ಆಶಾವಾದದ ಸಾಕಾರ ಮೂರ್ತಿಯಾದ ಸ್ವಾಮಿ ವಿವೇಕಾನಂದರ ಸಂದೇಶಗಳು ಇಂದಿನ ವಿದ್ಯಾರ್ಥಿಗಳು ಹಾಗೂ ಯುವ ಮನಸ್ಸುಗಳಿಗೆ ಆದರ್ಶವಾಗಬೇಕು. ವಿವೇಕಾನಂದರ ಜೀವನದಲ್ಲಿ ನಡೆದ ಹಲವು ಘಟನೆಗಳನ್ನು ಉಲ್ಲೇಖಿಸಿ ವಿದ್ಯಾರ್ಥಿಗಳಿಗೆ ಸವಿವರ ಮಾಹಿತಿ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ಡಾ.ಶ್ರೀನಿವಾಸ ಇವರು ವಿದ್ಯಾರ್ಥಿಗಳನ್ನುದ್ದೇಶಿಸಿ ೧೯ನೇ
ಶತಮಾನದ ಭಾರತ ಹಾಗೂ ಪ್ರಪಂಚ ಕಂಡ ಅತ್ಯಂತ ಸುಪ್ರಸಿದ್ಧ ಸನ್ಯಾಸಿ ಹಾಗೂ ಚತುರ, ತತ್ತ÷್ವಜ್ಞಾನಿಯಾದ ವಿವೇಕಾನಂದರ ಜನ್ಮ ಜಯಂತಿಯನ್ನು ಆಚರಿಸಿರುವುದು ಬಹಳ ಸಂತಸ ತಂದಿದೆ. ಯೋಗ, ತತ್ವ ಜ್ಞಾನ ಹಾಗೂ ವೇದಾಂತಗಳನ್ನು ಪ್ರಪಂಚದಾದ್ಯಂತ ಪಸರಿಸಿ ಆದರ್ಶ ಸಮಾಜದ ಕನಸು ಕಂಡ ಧೀಮಂತ ಕರ್ಮಯೋಗಿ ಸ್ವಾಮಿ ವಿವೇಕಾನಂದರ ತತ್ವ ದರ್ಶಗಳನ್ನು ನಮ್ಮ ವಿದ್ಯಾರ್ಥಿಗಳು ಜೀವನದಲ್ಲಿ ಅಳವಡಿಸಿಕೊಂಡು ಯಶಸ್ಸು ಗಳಿಸಿ ಎಂದರು. ನಿಮ್ಮ ಎಲ್ಲಾ ಕನಸುಗಳು ನನಸಾಗಲಿ ಸ್ವಾಮಿ ವಿವೇಕಾನಂದರ ಸಂದೇಶಗಳು ದಾರಿದೀಪವಾಲಿ ಎಂದು ಶುಭ ಹಾರೈಸಿದರು.

ಸುಂದ್ರೇಶ ಎನ್ ಸಹಾಯಕ ಪ್ರಾಧ್ಯಾಪಕರು ಸ್ವಾಗತಿಸಿ, ಹನುಮಂತಯ್ಯ ಜಿ.ಹೆಚ್, ಸಹಾಯಕ ಪ್ರಾಧ್ಯಾಪಕರು ವಂದಿಸಿದ ಕಾರ್ಯಕ್ರಮವನ್ನು ದೀಕ್ಷಾ ತೃತೀಯ ಬಿಕಾಂ ನಿರೂಪಿಸಿದರು. ಈ ಕಾರ್ಯಕ್ರಮದಲ್ಲಿ ಕಾಲೇಜಿನ ಎಲ್ಲಾ ಬೋಧಕ ಹಾಗೂ ಬೋಧಕೇತರ ವರ್ಗದವರು ಉಪಸ್ಥಿತರಿದ್ದರು.

More from the blog

ಬಂಟ್ವಾಳ: ನಿಯಮ ಮೀರಿ ಚಾಲನೆ ಮಾಡಿ ಪೋಲೀಸರ ಕೈಗೆ ಸಿಕ್ಕಿಬಿದ್ದರೆ ದಂಡ ಗ್ಯಾರಂಟಿ….

ಬಂಟ್ವಾಳ: ರಸ್ತೆಯಲ್ಲಿ ಟ್ರಾಫಿಕ್ ಪೋಲೀಸರು ದಂಡ ವಸೂಲಿ ಮಾಡುವ ವೇಳೆ ಸುಳ್ಳು ಹೇಳಿಬಚಾವಾಗಲು ಸಾಧ್ಯವಿಲ್ಲ, ಜೊತೆಗೆ ಅಸಭ್ಯ ವರ್ತನೆ ಮಾಡಿದರೆ ಜೋಕೆ, ಅವರ ಶರೀರದಲ್ಲಿ ಕಣ್ಗಾವಲು ಕ್ಯಾಮರಾ ಅಳವಡಿಸಿಲಾಗಿದ್ದು, ಸೂಕ್ಷ್ಮವಾಗಿ ಎಲ್ಲವನ್ನು ಸೆರೆ...

ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ : ಚೆಂಡಿನ ಗದ್ದೆಯಲ್ಲಿ ಪ್ರಥಮ ಚೆಂಡು

ಇತಿಹಾಸ ಪ್ರಸಿದ್ಧ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಅಂಗವಾಗಿ ದೇವಳದ ಚೆಂಡಿನ ಗದ್ದೆಯಲ್ಲಿ ಇಂದು ಪ್ರಥಮ ಚೆಂಡು ನಡೆಯಿತು. ‌ ಇವತ್ತಿನಿಂದ ಮುಂದಿನ ಐದು ದಿನಗಳ ಕಾಲ ಇಲ್ಲಿ ಚೆಂಡು...

ಏಪ್ರಿಲ್ 7ರಂದು ಕರ್ನಾಟಕ ಜಾನಪದ ಪರಿಷತ್ತು ದ.ಕ.ಜಿಲ್ಲಾ ಬಂಟ್ವಾಳ ತಾಲೂಕು ಘಟಕದ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭ

ಬಂಟ್ವಾಳ: ಏಪ್ರಿಲ್ 7ರಂದು ಅಪರಾಹ್ನ 3 ಗಂಟೆಗೆ ಬಿ.ಸಿ.ರೋಡು ರಂಗೋಲಿ ಸಭಾಂಗಣದಲ್ಲಿ ಕರ್ನಾಟಕ ಜಾನಪದ ಪರಿಷತ್ತು ದ.ಕ.ಜಿಲ್ಲಾ ಬಂಟ್ವಾಳ ತಾಲೂಕು ಘಟಕದ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭ ನಡೆಯಲಿದೆ ಎಂದು ತಾಲೂಕು ಘಟಕದ...

ದ್ವಿಚಕ್ರ ವಾಹನಕ್ಕೆ ರಿಕ್ಷಾ ಡಿಕ್ಕಿ : ಸಹಸವಾರ ಸ್ಥಳದಲ್ಲೇ ಮೃತ್ಯು

ಬಂಟ್ವಾಳ: ರಿಕ್ಷಾ ಡಿಕ್ಕಿಯಾಗಿ ದ್ವಿಚಕ್ರ ವಾಹನದಲ್ಲಿ ಸಂಚಾರ ಮಾಡುತ್ತಿದ್ದ ಸಹಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನರಿಕೊಂಬು ಎಂಬಲ್ಲಿ ನಡೆದಿದೆ. ನರಿಕೊಂಬು ನಿವಾಸಿ ನೀಲಪ್ಪ ಪೂಜಾರಿ ಅವರ ಮಗ ಪವನ್ ( 17) ಮೃತಪಟ್ಟ ಬಾಲಕ. ಮನೆಯಿಂದ...