ಮಂಗಳೂರು,: ಮಂಗಳೂರಿನಲ್ಲಿ ಮಾದಕ ವಸ್ತು ದಂಧೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಇಬ್ಬರು ಆರೋಪಿಗಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.
ಬಂಧಿತರನ್ನು ಆಂಧ್ರ ಪ್ರದೇಶದ ಅನಂತಪುರದ ನಿವಾಸಿ ಹಾಗೂ ಹಾಲಿ ಅತ್ತಾವರದ ಅಪಾರ್ಟ್ ಮೆಂಟ್ನಲ್ಲಿ ವಾಸವಿರುವ ಡಾ| ರಾಘವ ದತ್ತಾ, ಇನ್ನೋರ್ವ ಆರೋಪಿ ಬೆಂಗಳೂರು ಹಲ್ಸೂರು ಜೋಡುಪಾಲ್ಯದ ನಿವಾಸಿ ಹಾಗೂ ಹಾಲಿ ಮಂಗಳೂರಿನ ಫಳ್ನೀರ್ ನಲ್ಲಿ ವಾಸವಿರುವ ಡಾ. ಬಾಲಾಜಿ ಎಂದು ಗುರುತಿಸಲಾಗಿದೆ.
ಇನ್ನು ಪ್ರಕರಣದ ತನಿಖೆ ಮುಂದವರಿಸಲಾಗಿದ್ದು, ಮತ್ತಷ್ಟು ಜನರ ಬಂಧನದ ಸಾಧ್ಯತೆ ಇದೆ ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.
ಕಳೆದ 10 ದಿನಗಳಲ್ಲಿ ಡ್ರಗ್ಸ್ ಮಾರಾಟ ಜಾಲದ ವಿವಿಧ ಪ್ರಕರಣಗಳಿಗೆ ಸಂಬಂಧಿಸಿ ಸುಮಾರು 100 ಕೆಜಿಗೂ ಅಧಿಕ ಗಾಂಜಾ ವಶಪಡಿಸಿಕೊಳ್ಳಲಾಗಿದೆ. ವಿವಿಧ ಪ್ರಕರಣಗಳಲ್ಲಿ 20ಕ್ಕೂ ಅಧಿಕ ಮಂದಿಯ ಬಂಧನವಾಗಿದೆ ಎಂದು ಅವರು ಹೇಳಿದ್ದಾರೆ.
ಈಗಾಗಲೇ ಈ ಪ್ರಕರಣಕ್ಕೆ ಸಂಬಂಧಿಸಿ 13 ಮಂದಿ ಆರೋಪಿಗಳನ್ನು ಈ ಹಿಂದೆಯೇ ಬಂಧಿಸಲಾಗಿದ್ದು, ಮತ್ತೆ ಇಬ್ಬರ ಬಂಧನದೊಂದಿಗೆ ಈ ಪ್ರಕರಣದಲ್ಲಿ ಒಟ್ಟು ಬಂಧಿತರ ಸಂಖ್ಯೆ 15ಕ್ಕೇರಿದೆ