ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ.) ವಿಟ್ಲ ತಾಲ್ಲೂಕು, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ವಿಟ್ಲ ತಾಲ್ಲೂಕು, ಪ್ರಗತಿಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟ ವಿಟ್ಲ ತಾಲ್ಲೂಕು ಇದರ ವತಿಯಿಂದ ಕೇಂದ್ರ ಒಕ್ಕೂಟ ಪದಗ್ರಹಣ, ನವಜೀವನ ಸದಸ್ಯರ ಸಮಾವೇಶ ಮತ್ತು ಪ್ರಗತಿಬಂಧು ತಂಡಗಳಿಗೆ ಕೃಷಿ ಸಲಕರಣೆ ವಿತರಣೆ ಹಾಗೂ ಒಕ್ಕೂಟಗಳ ಸಾಧನಾ ಸಮಾವೇಶ ದಿನಾಂಕ 31-1-2023 ನೇ ಮಂಗಳವಾರ ಭಾರತ್ ಆಡಿಟೋರಿಯಂ ಚಂದಳಿಕೆ ವಿಟ್ಲ ಇಲ್ಲಿ ಪ್ರಗತಿಬಂಧು ಸ್ವ- ಸಹಾಯ ಸಂಘಗಳ ಕೇಂದ್ರ ಒಕ್ಕೂಟ ವಿಟ್ಲ ಇದರ ಅಧ್ಯಕ್ಷರಾದ ನವೀನ್ ಚಂದ್ರ ಇವರ ಅಧ್ಯಕ್ಷತೆಯಲ್ಲಿ ನಡೆಯಲಿದೆ.
ಕಾರ್ಯಕ್ರಮದ ಉದ್ಘಾಟನೆಯನ್ನು ಶ್ರೀ ಮಹಾಲಕ್ಷ್ಮಿ ಕ್ಷೇತ್ರ ಶ್ರೀ ದಾಮ ಮಾಣಿಲ ಇಲ್ಲಿನ ಪೂಜ್ಯ ಶ್ರೀ ಶ್ರೀ ಪರಮಹಂಸ ಮೋಹನದಾಸ ಸ್ವಾಮೀಜಿ ನೆರೆವೇರಿಸಲಿದ್ದು, ಪುತ್ತೂರು ವಿಧಾನ ಸಭಾ ಕ್ಷೆತ್ರದ ಶಾಸಕರಾದ ಸಂಜೀವ ಮಠದೂರು ಕೃಷಿ ಸಲಕರಣೆಗಳನ್ನು ವಿತರಣೆ ಮಾಡಲಿದ್ದು, ಬಂಟ್ವಾಳ ವಿಧಾನ ಸಭಾ ಕ್ಷೆತ್ರದ ಶಾಸಕರಾದ ರಾಜೇಶ್ ನಾಯಕ್ ವಿವಿಧ ಅನುಧಾನಗಳ ವಿತರಣೆ ಮಾಡಲಿದ್ದು,
ಮಾಜಿ ಸಚಿವರಾದ ರಮಾನಾಥ ರೈ ಅಯುಷ್ಮಾನು ಕಾರ್ಡ್ ವಿತರಣೆ ಮಾಡಲಿರುವರು.
ಮುಖ್ಯ ಅತಿಥಿಗಳಾಗಿ ಶ್ರೀ ಕ್ಷೆತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ.) ಇದರ ಕರಾವಳಿ ಪ್ರಾದೇಶಿಕ ನಿರ್ದೇಶಕರಾದ ವಸಂತ ಸಾಲಿಯಾನ್, ಶ್ರೀ ಕ್ಷೆತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ.) ಧರ್ಮಸ್ಥಳ ನಿರ್ದೇಶಕರಾದ ಮನೋಜ್ ಮೆನೇಜಸ್, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಬಂಟ್ವಾಳ ತಾಲ್ಲೂಕು ಅಧ್ಯಕ್ಷರಾದ ರೋನಾಲ್ಡ್ ಡಿಸೋಜ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ.) ದಕ್ಷಿಣ ಕನ್ನಡ 2 ಜಿಲ್ಲಾ ನಿರ್ದೇಶಕರಾದ ಪ್ರವೀಣ್ ಕುಮಾರ್, ಜನಜಾಗೃತಿ ವೇದಿಕೆ ವಿಟ್ಲ ವಲಯ ಅಧ್ಯಕ್ಷರಾದ ಕೃಷ್ಣಯ್ಯ ಬಲ್ಲಾಳ್, ಇಕೋ ಗ್ಲಾಸ್ ಕಂಪನಿ ಮಾಲಕರದ ರಾಜಾರಾಮ್ ಸಿ ಜಿ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಬಂಟ್ವಾಳ ತಾಲೂಕಿನ ನಿಕಟಪೂರ್ವ ಅಧ್ಯಕ್ಷರಾದ ಬಾಲಕೃಷ್ಣ ಆಳ್ವಾ ಕೊಡಾಜೆ ಮೊದಲದವರು ಭಾಗವಹಿಸಲಿದರೆ ಎಂದು ಗ್ರಾಮಾಭಿವೃದ್ಧಿ ಯೋಜನೆಯ ವಿಟ್ಲ ತಾಲ್ಲೂಕು ಯೋಜನಾಧಿಕಾರಿ ಚೆನ್ನಪ್ಪ ಗೌಡ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.