ಮಂಗಳೂರು: ನಗರದ ಮಂಗಳಾ ಕ್ರೀಡಾಂಗಣದಲ್ಲಿ ಬೃಹತ್ ಕಾಂಗ್ರೆಸ್ ಸಮಾವೇಶ ಪ್ರಜಾಧ್ವನಿ ಯಾತ್ರೆ ನಡೆದಿದ್ದು, ಈ ವೇಳೆ ಹಲವು ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆಗೊಂಡಿದ್ದಾರೆ.
ಪ್ರಮುಖವಾಗಿ ಪುತ್ತೂರು ವಿಧಾನಸಭೆಯ ಟಿಕೆಟ್ ಆಕಾಂಕ್ಷಿ ಅಶೋಕ್ ರೈ ಅವರು ನೂರಾರು ಕಾರ್ಯಕರ್ತರ ಜೊತೆ ಕಾಂಗ್ರೆಸ್ ಸೇರ್ಪಡೆಗೊಂಡರು. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಮಾಜಿ ಸಿಎಂ ಸಿದ್ದರಾಮಯ್ಯ, ಮಾಜಿ ಸಚಿವ ರಮಾನಾಥ ರೈ, ಮಾಜಿ ಶಾಸಕಿ ಶಕುಂತಳಾ ಶೆಟ್ಟಿ ಸೇರಿದಂತೆ ಕಾಂಗ್ರೆಸ್ ನ ಹಿರಿಯ ನಾಯಕರು ಅಶೋಕ್ ರೈ ಅವರಿಗೆ ಪಕ್ಷದ ಧ್ವಜನೀಡಿ ಸ್ವಾಗತಿಸಿದರು. ಇನ್ನು ಅಶೋಕ್ ರೈ ಜೊತೆಯಲ್ಲಿ ಸಾಮಾಜಿಕ ಹೋರಾಟಗಾರರಾಗಿ ಗುರುತಿಸಿಕೊಂಡಿದ್ದ ಎಂ.ಜಿ ಹೆಗ್ಡೆ ಸೇರಿದಂತೆ ಹಲವು ಕಾಂಗ್ರೆಸ್ ಗೆ ಸೇರ್ಪಡೆಗೊಂಡಿದ್ದಾ