ಉಪ್ಪಿನಂಗಡಿ: ಮೂರು ದಿನಗಳ ಹಿಂದೆ ಕಾಡಾನೆ ದಾಳಿಯಲ್ಲಿ ಮೃತಪಟ್ಟ ಶಿರಾಡಿ ಗ್ರಾಮದ ಜನತಾ ಕಾಲೊನಿ ನಿವಾಸಿ ತಿಮ್ಮಪ್ಪ ಅವರ ಕುಟುಂಬಕ್ಕೆ ಅರಣ್ಯ ಇಲಾಖೆಯಿಂದ 15 ಲಕ್ಷ ರೂಪಾಯಿ ಪರಿಹಾರ ಮಂಜೂರಾಗಿದ್ದು, ಈ ಮೊತ್ತದಲ್ಲಿ 5 ಲಕ್ಷ ರೂಪಾಯಿ ಮೊತ್ತದ ಚೆಕ್ ಅನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಕುಟುಂಬಸ್ಥರಿಗೆ ಹಸ್ತಾಂತರಿಸಿದ್ದಾರೆ.
ಬಳಿಕ ಮಾತನಾಡಿದ ಉಪ್ಪಿನಂಗಡಿ ವಲಯ ಅರಣ್ಯ ಅಧಿಕಾರಿ ಜಯಪ್ರಕಾಶ್ ಅವರು ಈಗಾಗಲೇ ಭದ್ರಾ ಟೈಗರ್ ಫೌಂಡಷನ್ ಚಿಕ್ಕಮಗಳೂರು ಇದರ ಸಹಕಾರದೊಂದಿಗೆ 5 ಲಕ್ಷ ರೂಪಾಯಿ ಮೊತ್ತದ ಚೆಕ್ ಅನ್ನು ಸಂತ್ರಸ್ತರಿಗೆ ಹಸ್ತಾಂತರ ಮಾಡಿದ್ದೇವೆ. ಉಳಿದ 10 ಲಕ್ಷ ರೂಪಾಯಿ ಮೊತ್ತವನ್ನು ದಾಖಲೆ ಪತ್ರಗಳೆಲ್ಲ ಸಮರ್ಪಕವಾಗಿ ತಲುಪಿದ ಕೂಡಲೇ ಮೃತರ ಕುಟುಂಬಕ್ಕೆ ನೀಡಲಾಗುವುದು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಅರಣ್ಯ ಇಲಾಖೆಯ ಡಿಸಿಎಫ್ ಡಾ.ದಿನೇಶ್‌ಕುಮಾರ್, ಎಸಿಎಫ್ ವಿ.ಪಿ.ಕಾರ್ಯಪ್ಪ, ಆರ್‌ಎಫ್ಒ ಜಯಪ್ರಕಾಶ್ ಕೆ.ಕೆ., ಡಿಆರ್‌ಎಫ್ಒ ಧೀರಜ್, ಫಾರೆಸ್ಟರ್ ಸುನಿಲ್ ನಾಯ್ಕ್ ಅವರು ಚೆಕ್ ಉಪಸ್ಥಿತರಿದ್ದರು.