ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಎಂ.ಆರ್.ರವಿಕುಮಾರ್ ಅವರ ಗ್ರಾಮವಾಸ್ತವ್ಯ ಕಾರ್ಯಕ್ರಮ ಬಂಟ್ವಾಳ ತಾಲೂಕಿನ ಮಾಣಿಲದ ಸರಕಾರಿ ಪ್ರೌಢಶಾಲೆಯಲ್ಲಿ ನಡೆಯಿತು.
ಪುತ್ತೂರು ಶಾಸಕ ಸಂಜೀವ ಮಠಂದೂರು ಸಮಾರಂಭ ಉದ್ಘಾಟಿಸಿ ಮಾತನಾಡಿ, ಗಡಿ ಗ್ರಾಮದ ಜನರು ಅನುಭವಿಸುತ್ತಿರುವ ತೊಂದರೆಗಳಿಗೆ ಪರಿಹಾರ ಕಂಡುಕೊಳ್ಳುವ ಕೆಲಸ ಆಗಬೇಕು. ಶಾಸಕರು, ಇಲಾಖೆಗಳಿಗೆ ಗ್ರಾಮದ ಸಂಪರ್ಕ ಕಲ್ಪಿಸಲು ಇದು ಕಾರಣವಾಗಿದೆ, ಅಧಿಕಾರಿ, ಜನಪ್ರತಿನಿಧಿ ಗ್ರಾಮದೆಡೆ ತೆರಳಿದಾಗ ಸಮಸ್ಯೆಗೆ ಪರಿಹಾರ ದೊರಕುವ ಕೆಲಸ ಆಗುತ್ತದೆ. ಅರಣ್ಯ, ಕಂದಾಯ, ಗ್ರಾಮೀಣಾಭಿವೃದ್ಧಿ ಇಲಾಖೆ ಜನರಿಗೆ ಹತ್ತಿರವಾದಷ್ಟು ಸಮಸ್ಯೆ ಪರಿಹಾರ ದೊರಕುತ್ತದೆ ಎಂದರು.
ಜಿಲ್ಲಾಧಿಕಾರಿ ರವಿಕುಮಾರ್ ಮಾತನಾಡಿ, ಎಲ್ಲ ಕಾರ್ಯಗಳಿಗೆ ತಾಲೂಕು ಮಟ್ಟದ ಹಾಗೂ ಅನುಮೋದನೆ ದೊರಕದ ಸಂದರ್ಭದಲ್ಲಿ ಗ್ರಾಮವಾಸ್ತವ್ಯ ಪರಿಣಾಮಕಾರಿಯಾಗಿ ಮೂಡಿಬರುತ್ತದೆ ಎಂದು ಹೇಳಿದರು.
ಉಪಾಧ್ಯಕ್ಷ ರಾಜೇಶ್ ಕುಮಾರ್ ಬಾಳೆಕಲ್ಲು ಮಾತನಾಡಿ, ಹಲವು ಬೇಡಿಕೆಗಳ ಪಟ್ಟಿಯನ್ನು ಮಂಡಿಸಿದರು.
ಮಾಣಿಲ ಗ್ರಾ.ಪಂ.ಅಧ್ಯಕ್ಷೆ ವನಿತಾ, ಉಪಾಧ್ಯಕ್ಷ ರಾಜೇಶ್ ಕುಮಾರ್ ಬಾಳೆಕಲ್ಲು, ಮಂಗಳೂರು ಸಹಾಯಕ ಆಯುಕ್ತ ಮದನ್ ಮೋಹನ್, ಯೋಜನಾ ನಿರ್ದೇಶಕ ಕೆ.ಜಯರಾಮ್, ಡಿಡಿಎಲ್ ಆರ್ ನಿರಂಜನ್, ತಹಸೀಲ್ದಾರ್ ದಯಾನಂದ್ , ಉಪತಹಸೀಲ್ದಾರ್ ವಿಜಯ ವಿಕ್ರಮ ಉಮಾನಾಥ ರೈ ಮೇರಾವು ಉಪಸ್ಥಿತರಿದ್ದರು.
ಈ ಸಂದರ್ಭ ವಿವಿಧ ಇಲಾಖೆಗಳ ಸವಲತ್ತುಗಳನ್ನು ವಿತರಿಸಲಾಯಿತು.