Wednesday, April 17, 2024

ಕಣ್ಣು, ದಂತ, ವೈದ್ಯಕೀಯ ಶಿಬಿರ ಹಾಗೂ ಕೇಂದ್ರ ಸರ್ಕಾರದ ನಿಕ್ಷಯ ಮಿತ್ರ ಯೋಜನೆಯಡಿ ಕ್ಷಯ ರೋಗಿಗಳಿಗೆ ಆಹಾರ ಧಾನ್ಯ ವಿತರಣಾ ಕಾರ್ಯಕ್ರಮ

ಬಂಟ್ವಾಳ: ಸೇವಾಂಜಲಿ ಪ್ರತಿಷ್ಠಾನ ಫರಂಗಿಪೇಟೆ, ದ.ಕ. ಕೃಷಿ ಅಭಿವೃದ್ಧಿ ಸಹಕಾರಿ ಸಂಘ ಮಂಗಳೂರು, ಬಂಟ್ವಾಳ ತಾಲೂಕು ಕೃಷಿ ಉತ್ಪನ್ನ ಸಹಕಾರಿ ಮಾರಾಟ ಸಂಘ ಇದರ ಆಶ್ರಯದಲ್ಲಿ ಕೆ.ಎಸ್ ಹೆಗ್ಡೆ ಚಾರಿಟೇಬಲ್ ಆಸ್ಪತ್ರೆ ದೇರಳಕಟ್ಟೆ ಇವರಿಂದ ಕಣ್ಣು, ದಂತ, ವೈದ್ಯಕೀಯ ಶಿಬಿರ ಹಾಗೂ ಕೇಂದ್ರ ಸರ್ಕಾರದ ನಿಕ್ಷಯ ಮಿತ್ರ ಯೋಜನೆಯಡಿ ಕ್ಷಯ ರೋಗಿಗಳಿಗೆ ಆಹಾರ ಧಾನ್ಯ ವಿತರಣಾ ಕಾರ್ಯಕ್ರಮ ಮಂಗಳವಾರ ಫರಂಗಿಪೇಟೆಯ ಸೇವಾಂಜಲಿ ಸಭಾಂಗಣದಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಅವರು ಉದ್ಘಾಟಿಸಿದರು. ಸ್ಕ್ಯಾಡ್ಸ್ ಅಧ್ಯಕ್ಷ ರವೀಂದ್ರ ಕಂಬಳಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ ಪ್ರಧಾನಿ ನರೆಂಧ್ರ ಮೋದಿಯವರ ಪರಿಕಲ್ಪನೆಯಂತೆ ಭಾರತವನ್ನು ಕ್ಷಯ ಮುಕ್ತ ರಾಷ್ಟ್ರವನ್ನಾಗಿ ರೂಪಿಸುವ ನಿಟ್ಟಿನಲ್ಲಿ ಸೇವಾಂಜಲಿ ಪ್ರತಿಷ್ಠಾನದ ಜೊತೆಗೂಡಿ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ಕ್ಷಯ ರೋಗಿಗಳು ರೋಗ ಮುಕ್ತರಾಗಿ ಸಮಾಜದ ಜನರೊಂದಿಗೆ ಬೆರೆತು ಬಾಳುವ ಉದ್ದೇಶದೊಂದಿಗೆ ಹಮ್ಮಿಕೊಂಡಿರುವ ಈ ಕಾರ್ಯಕ್ರಮದಲ್ಲಿ ಸಹಕಾರಿ ಸಂಘಗಳು ಸೇರಿಕೊಂಡಿರುವು ವಿಶೇಷ. ಜನರಿಗೆ ಆರ್ಥೀಕ ಸೇವೆ ನೀಡುವ ಸಹಕಾರಿ ಸಂಸ್ಥೆಗಳು ಇಂದು ಸಾರ್ವಜನಿಕರಿಗೆ ಆರೋಗ್ಯ ಸೇವೆ ನೀಡುವ ಸಮಾಜಮುಖಿ ಸೇವೆಯಲ್ಲೂ ತೊಡಗಿಸಿಕೊಂಡು ಸೇವಾಂಜಲಿಯ ಜೊತೆಗೂಡಿ ಆಹಾರದ ಕಿಟ್ ವಿತರಿಸಲಾಗುತ್ತಿದೆ ಎಂದರು.

ಮುಖ್ಯ ಅತಿಥಿ ಮೇರಮಜಲು ಗ್ರಾ.ಪಂ. ಅಧ್ಯಕ್ಷೆ ಜಯಶ್ರೀ ಕರ್ಕೆರಾ ಮಾತನಾಡಿ ಕೃಷ್ಣ ಕುಮಾರ್ ಪೂಂಜ ಅವರ ನೇತೃತ್ವದಲ್ಲಿ ಸೇವಾಂಜಲಿ ಸಂಸ್ಥೆಯು ಜನರಿಗೆ ವಿವಿಧ ರೀತಿಯ ಸೇವೆಗಳನ್ನು ನೀಡುತ್ತಾ ಬಡಜನರ ಕಣ್ಣೀರೊರೆಸುವ ಕಾರ್ಯವನ್ನು ನಡೆಸಿಕೊಂಡು ಬರುತ್ತಿದೆ ಎಂದರು.

ಟ್ರಸ್ಟಿಗಳಾದ ತಾರಾನಾಥ ಕೊಟ್ಟಾರಿ ತೇವು ಪ್ರಾಸ್ತವಿಕವಾಗಿ ಮಾತನಾಡಿದರು.

ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್, ಕಿಯೋನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ, ತಾ.ಪಂ. ಮಾಜಿ ಉಪಾಧ್ಯಕ್ಷ ಮಾಧವ ಮಾವೆ, ಮಂಗಳೂರಿನ ಅಂಬಾ ಭವಾನಿ ಭಜನಾ ಮಂದಿರದ ಅಧ್ಯಕ್ಷ ಸೀತಾರಾಮ ಎ., ದ.ಕ. ಕೃಷಿ ಅಭಿವೃದ್ಧಿ ಸಹಕಾರಿ ಸಂಘ ಮಂಗಳೂರು ಇದರ ಕಾರ್ಯನಿರ್ವಾಹಣಾಧಿಕಾರಿ ಪ್ರೇಮರಾಜ್ ಭಂಡಾರಿ, ಬಂಟ್ವಾಳ ತಾಲೂಕು ಕೃಷಿ ಉತ್ಪನ್ನ ಸಹಕಾರಿ ಮಾರಾಟ ಸಂಘ ಇದರ ಕಾರ್ಯ ನಿರ್ವಾಹಣಾಧಿಕಾರಿ ಧರ್ಮಪಾಲ್ ಭಂಡಾರಿ, ತಾ.ಪಂ. ಮಾಜಿ ಸದಸ್ಯ ಗಣೇಶ್ ಸುವರ್ಣ ತುಂಬೆ, ರೋಟರಿ ಕ್ಲಬ್ ಫರಂಗಿಪೇಟೆ ಅಧ್ಯಕ್ಷ ಜಯರಾಂ ಶೇಖ, ಜಯರಾಜ್ ಕರ್ಕೆರ, ಸೇವಾಂಜಲಿ ಆರೋಗ್ಯ ಕೇಂದ್ರದ ವೈದ್ಯ ಡಾ. ಚೇತನ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಪ್ರಮುಖರಾದ ಪುಂಚಮೆ ಪದ್ಮನಾಭ ಶೆಟ್ಟಿ, ಎಂ.ಕೆ. ಖಾದರ್, ಪ್ರಕಾಶ್ ಕೆ., ಪ್ರಶಾಂತ್ ತುಂಬೆ ಮತ್ತಿತರರು ಉಪಸ್ಥಿತರಿದ್ದರು.

ಸೇವಾಂಜಲಿ ಪ್ರತಿಷ್ಠಾನದ ಆಡಳಿತ ಟ್ರಸ್ಟಿ ಕೆ. ಕೃಷ್ಣಕುಮಾರ್ ಪೂಂಜ ಸ್ವಾಗತಿಸಿದರು. ದೇವದಾಸ್ ಶೆಟ್ಟಿ ಕೊಡ್ಮಾಣ್ ಕಾರ್ಯಕ್ರಮ ನಿರೂಪಿಸಿದರು.

More from the blog

ವೋಟ್ ಮಾಡಿದ ಕೆಲವೇ ಕ್ಷಣದಲ್ಲಿ ಪ್ರಾಣಬಿಟ್ಟ ಹಿರಿಯ ಜೀವ

ಉಡುಪಿ: ಮತದಾನ ಮಾಡಿದ ಕೆಲವೇ ಕ್ಷಣದಲ್ಲಿ ವೃದ್ಧೆಯೊಬ್ಬರು ಕೊನೆಯುಸಿರೆಳೆದಿರುವ ಘಟನೆ ಬ್ರಹ್ಮಾವರ ತಾಲೂಕಿನ ಸಾಸ್ತಾನ ಪಾಂಡೇಶ್ವರ ಚಡಗರ ಅಗ್ರಹಾರದಲ್ಲಿ ನಡೆದಿದೆ. ಚಡಗರ ಅಗ್ರಹಾರದ ನಿವಾಸಿ ಪಿ.ಯಶೋಧಾ ನಾರಾಯಣ ಉಪಾಧ್ಯ ಮೃತಪಟ್ಟವರು. ಯಶೋಧಾ ಅವರು ನಿವೃತ್ತ ಗ್ರಾಮ...

ಏ.21 ರಂದು ಆದಿದ್ರಾವಿಡ ಸಮಾಜ ಬಾಂಧವರ ಕ್ರೀಡಾಕೂಟ ಹಾಗೂ ಸಾಧಕರಿಗೆ ಸನ್ಮಾನ

ಬಂಟ್ವಾಳ ತಾಲೂಕು ಆದಿದ್ರಾವಿಡ ಸಮಾಜ ಸೇವಾ ಸಂಘ(ರಿ.)S74 ಇದರ ವತಿಯಿಂದ ವಿಶ್ವಜ್ಞಾನಿ ಡಾ| ಬಿ. ಆರ್ ಅಂಬೇಡ್ಕರ್ ರವರ 133ನೇ ಜನ್ಮ ದಿನಾಚರಣೆಯ ಅಂಗವಾಗಿ ಸಂಘದ ದಶಮಾನೋತ್ಸವ ಕಾರ್ಯಕ್ರಮದ ಪ್ರಯುಕ್ತ ಆದಿದ್ರಾವಿಡ ಸಮಾಜ...

ಎಸ್.ಎಸ್.ಎಲ್.ಸಿ ಮೌಲ್ಯಮಾಪನ : ನಿಷೇಧಾಜ್ಞೆ ಜಾರಿ

ಮಂಗಳೂರು: ಮಂಗಳೂರಿನ ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಏಪ್ರಿಲ್ 15ರಿಂದ ಎಸ್.ಎಸ್.ಎಲ್.ಸಿ ಮುಖ್ಯ ಪರೀಕ್ಷೆಯ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ನಡೆಯಲಿದ್ದು, ಮೌಲ್ಯಮಾಪನ ಕಾರ್ಯವನ್ನು ಸುಸೂತ್ರವಾಗಿ ಹಾಗೂ ಪಾರದರ್ಶಕವಾಗಿ ನಡೆಸಲು ಮತ್ತು ಕಾನೂನುಬಾಹಿರ...

ಲೋಕಸಭಾ ಚುನಾವಣೆ : ಬಂಟ್ವಾಳದ ಕಳ್ಳಿಗೆ ಗ್ರಾಮದಲ್ಲಿ ಮತಯಾಚನೆ ನಡೆಸಿದ ಶಾಸಕ ರಾಜೇಶ್ ನಾಯ್ಕ್

2024 ರ ಎ. 26 ರಂದು ನಡೆಯುವ ಲೋಕಸಭಾ ಚುನಾವಣೆಯಲ್ಲಿ ಕ್ಯಾ.ಬ್ರಿಜೇಶ್ ಚೌಟ ಅವರನ್ನು ಬಹುಮತದಿಂದ ಗೆಲ್ಲಿಸಿಕೊಡುವ ನಿಟ್ಟಿನಲ್ಲಿ "ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಗ್ರಾಮ,ಮನೆ,ಮನ ಸಂಪರ್ಕ ಅಭಿಯಾನ" ಎಂಬ...