ಬಂಟ್ವಾಳ: ಬಂಟ್ವಾಳ ತಾಲೂಕು ಅಮ್ಟಾಡಿ ವ್ಯವಸಾಯ ಸೇವಾ ಸಹಕಾರ ಸಂಘದ ವತಿಯಿಂದ ರೈತ ಸದಸ್ಯರಿಗಾಗಿ ಸುಧಾರಿತ ಅಡಿಕೆ ಸಸಿ ತಳಿಗಳು, ಅಡಿಕೆಯಲ್ಲಿ ಕೀಟ ಮತ್ತು ರೋಗಗಳ ಸಮಗ್ರ ನಿರ್ವಹಣೆಗಾಗಿ ಮಾಹಿತಿ ಕಾರ್ಯಾಗಾರ ಸಂಘದ ಕೇಂದ್ರ ಕಚೇರಿ ಅಮ್ಟಾಡಿಯಲ್ಲಿ ಜರಗಿತು.
ಸಂಘದ ಅಧ್ಯಕ್ಷೆ ಮಲ್ಲಿಕಾ ವಿ.ಶೆಟ್ಟಿ ಅವರಿ ಕಾರ್ಯಗಾರವನ್ನು ಉದ್ಘಾಟಿಸಿ ಮಾತನಾಡಿ, ವಿವಿಧ ಕೀಟ ಮತ್ತು ರೋಗಗಳ ಬಾಧೆಯಿಂದ ಅಡಿಕೆ ಬೆಳೆಗಾರರು ತೊಂದರೆಗೊಳಗಾಗಿದ್ದು, ಇಂತಹ ಸಂದರ್ಭದಲ್ಲಿ ಅವರಿಗೆ ಸಮರ್ಪಕ ಮಾಹಿತಿ ನೀಡಿ ಅವರನ್ನು ಸಂಕಷ್ಟದಿಂದ ಪಾರು ಮಾಡುವ ಉದ್ಧೇಶದಿಂದ ಕಾರ್ಯಾಗಾರ ನಡೆಸಲಾಗುತ್ತಿದೆ. ರೈತ ಸದಸ್ಯರು ಇದರ ಸದುಪಯೋಗ ಪಡೆದುಕೊಂಡು ಅಭಿವೃದ್ಧಿ ಸಾಧಿಸಬೇಕು ಎಂದು ಹೇಳಿದರು.
ವಿಟ್ಲ ಸಿಪಿಸಿಆರ್‌ಐ ನ ಹಿರಿಯ ವಿಜ್ಞಾನಿ ಡಾ| ನಾಗರಾಜ ಎನ್.ಆರ್. ಅವರು ಸಂಪನ್ಮೂಲ ವ್ಯಕ್ತಿಯಾಗಿ ಮಾಹಿತಿ ನೀಡಿದರು. ಕೃಷಿಕರ ಸಮಸ್ಯೆಗಳಿಗೆ ಪರಿಹಾರ ಸೂಚಿಸಿದರು. ಬಂಟ್ವಾಳ ತೋಟಗಾರಿಕಾ ಹಿರಿಯ ಸಹಾಯಕ ಜೋ ಪ್ರದೀಪ್ ಡಿಸೋಜ ಅವರು ಮಾತನಾಡಿದರು.
ಸಂಘದ ಉಪಾಧ್ಯಕ್ಷ ಆಲ್ವಿನ್ ವಿನಯ್ ಲೋಬೊ, ಮುಕ್‌ಯ ಕಾರ್ಯ ನಿರ್ವಹಣಾದಿಕಾರಿ ಅಜಯ್ ಕುಮಾರ್ ಅಜಿಲ ಮತ್ತು ನಿರ್ದೇಶಕರು, ಸಿಬಂದಿ ವರ್ಗ ಉಪಸ್ಥಿತರಿದ್ದರು.
ಸಂಘದ ಸಿಬಂದಿ ಆಲ್ವಿನ್ ವೇಗಸ್ ಸ್ವಾಗತಿಸಿ, ವಂದಿಸಿದರು. ಲೊರೆಟ್ಟೊ ಶಾಖೆಯ ವ್ಯವಸ್ಥಾಪಕ ದಿನೇಶ್ ಅಮೀನ್ ಕಾರ್ಯಕ್ರಮ ನಿರೂಪಿಸಿದರು.