Sunday, April 21, 2024

ವಿಟ್ಲ ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಶ್ರೀ ದೇವರ ಮಹಾರಥೋತ್ಸವ : ಪುಣ್ಯ ಕ್ಷಣವನ್ನು ಕಣ್ತುಂಬಿಕೊಂಡ ಭಕ್ತಾಧಿಗಳು

ವಿಟ್ಲ: ವಿಟ್ಲ ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಶನಿವಾರ ರಾತ್ರಿ ಶ್ರೀ ದೇವರ ಮಹಾರಥೋತ್ಸವ ‘ಇಟ್ಟೆಲಾಯನೊ’ ವಿಜೃಂಭಣೆಯಿಂದ ನಡೆಯಿತು. ಸಹಸ್ರಾರು ಮಂದಿ ಭಕ್ತಾದಿಗಳ ಭಕ್ತಿಯ ಪರಾಕಾಷ್ಠೆಯೊಂದಿಗೆ ಈ ಪುಣ್ಯ ಕ್ಷಣವನ್ನು ಕಣ್ತುಂಬಿಸಿ ಕೊಂಡರು.

ಕಡಂಬು ಕೊಡಮಣಿತ್ತಾಯ ದೈವದ ಭಂಡಾರ ಆಗಮಿಸಿದ ಬಳಿಕ ದೇವರ ಬಲಿ ಉತ್ಸವ ನಡೆಯಿತು. ನಂತರ ದೇಗುಲದ ಮುಂಭಾಗದ ರಥ ಗದ್ದೆಯಲ್ಲಿ ಅತ್ಯಾಕರ್ಷಕ ಸುಡುಮದ್ದು ಪ್ರದರ್ಶನ ನಡೆಯಿತು. ಸರ್ವಾಲಂಕಾರದ ಬೃಹತ್ ಗಾತ್ರದ ರಥದಲ್ಲಿ ದೇವರ ಉತ್ಸವ ಮೂರ್ತಿಗೆ ಪೂಜೆ ಸಲ್ಲಿಸಿದ ಬಳಿಕ ಶ್ರೀ ಪಂಚಲಿಂಗೇಶ್ವರ ದೇವರ ಮಹಾರಥೋತ್ಸವ ನಡೆಯಿತು. ಸುಮಾರು ಹತ್ತು ಸಾವಿರಕ್ಕೂ ಮಿಕ್ಕಿದ ಭಕ್ತ ಗಡಣ ರಥೋತ್ಸವ ಸಂಭ್ರಮಕ್ಕೆ ಸಾಕ್ಷಿಯಾಯಿತು.ರಥೋತ್ಸವದ ಬಳಿಕ ದೇವರ ಬೀದಿ ಮೆರವಣಿಗೆ, ಶಯನೋತ್ಸವ ನಡೆಯಿತು. ಜಾತ್ರೋತ್ಸವದ ಅಂಗವಾಗಿ ಯಕ್ಷಗಾನ ಬಯಲಾಟ ಪ್ರದರ್ಶನ ಗೊಂಡಿತು.

ಬೆಳಿಗ್ಗೆ ದೇಗುಲದಲ್ಲಿ ದರ್ಶನ ಬಲಿ, ರಾಜಾಂಗಣದ ಬಟ್ಲು ಕಾಣಿಕೆ, ಪ್ರಸಾದ ವಿತರಣೆ ನಡೆಯಿತು.

ದೇಗುಲದ ಅನುವಂಶಿಕ ಮೊಕ್ತೇಸರ ವಿಟ್ಲ ಅರಮನೆಯ ಬಂಗಾರು ಅರಸರ ಮಾರ್ಗದರ್ಶನದಲ್ಲಿ ದೇಗುಲದ ತಂತ್ರಿಗಳ ನೇತೃತ್ವದಲ್ಲಿ ಧಾರ್ಮಿಕ ವಿಧಿ ವಿಧಾನಗಳು ನಡೆದವು.

More from the blog

ಸುಬ್ರಹ್ಮಣ್ಯ : ವೇತನಕ್ಕೆ ನೀತಿ ಸಂಹಿತೆ ಅಡ್ಡಿ ಆಯಿತೇ!! ಮೇಲಧಿಕಾರಿಗಳಿಗೆ ನೌಕರರ ನೋವು ಯಾಕೆ ಅರ್ಥ ಆಗುತ್ತಿಲ್ಲ..!

ಸುಬ್ರಹ್ಮಣ್ಯ: ಕುಕ್ಕೆಸುಬ್ರಹ್ಮಣ್ಯ ದೇವಸ್ಥಾನದಲ್ಲಿ ದೇವರ ರಥ ನಿರ್ಮಾಣ ಮೊದಲಾದ ಪಂಚಪರ್ವದ ಕೆಲಸ ಕಾರ್ಯಗಳನ್ನು ಪಾರಂಪರಿಕವಾಗಿ ನಿರ್ವಹಿಸುತ್ತಿರುವ ಸುಮಾರು 27 ಮಂದಿ ಮಲೆಕುಡಿಯ ಜನಾಂಗದ ನೌಕರರಿಗೆ ಕಳೆದ ಎರಡು ತಿಂಗಳುಗಳಿಂದ ದೇವಸ್ಥಾನದ ಆಡಳಿತ ವೇತನ...

ಬಂಟ್ವಾಳ ಮಿನಿ ವಿಧಾನಸೌಧದಲ್ಲಿ ಮಹಾವೀರ ಜಯಂತಿ ಆಚರಣೆ

ಬಂಟ್ವಾಳ: ಬಂಟ್ವಾಳ ಮಿನಿ ವಿಧಾನಸೌಧದ ಸಭಾಂಗಣದಲ್ಲಿ ಇಂದು ಆದಿತ್ಯವಾರ ಬಂಟ್ವಾಳ ತಾಲೂಕು ಆಚರಣಾ ಸಮಿತಿಯ ವತಿಯಿಂದ ಮಹಾವೀರ ಜಯಂತಿ ಆಚರಿಸಲಾಯಿತು. ತಹಶೀಲ್ದಾರ್ ಅರ್ಚನಾ ಭಟ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ದೀಪ ಪ್ರಜ್ವಲಿಸಿ ಕಾರ್ಯಕ್ರಮವನ್ನು...

ಪಾದಚಾರಿಗೆ ಬೈಕ್ ಡಿಕ್ಕಿ : ವ್ಯಕ್ತಿ ಸಾವು

ಬಂಟ್ವಾಳ: ರಾಷ್ಟ್ರೀಯ ಹೆದ್ದಾರಿ ಮಂಗಳೂರು - ಬೆಂಗಳೂರು ಮಧ್ಯೆ ತುಂಬೆ ಎಂಬಲ್ಲಿ ಬೈಕ್ ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಪಾದಾಚಾರಿಯೋರ್ವರು ಚಿಕಿತ್ಸೆ ಫಲಕಾರಿಯಾಗದೆ ತುಂಬೆ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ...

ಕಾಡಿನಲ್ಲಿ ಕೊಳೆತ ತಲೆಬುರುಡೆ, ಚೀಲ ಪತ್ತೆ

ಸುಳ್ಯ: ಕಾಡಿನಲ್ಲಿ ಕೊಳೆತ ತಲೆಬುರುಡೆ ಹಾಗೂ ಚೀಲ ಪತ್ತೆಯಾಗಿರುವ ಬಗ್ಗೆ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಿಳಿನೆಲೆ ಗ್ರಾಮದ ಚಂದ್ರಶೇಖರ್ ಎಂಬುವರು ದೂರು ದಾಖಲಿಸಿದ್ದಾರೆ. ಚಂದ್ರಶೇಖರ್ ಅವರು ಸ್ಥಳೀಯರೊಂದಿಗೆ ಏ. 19 ರಂದು ಕಾಡಿನಿಂದ...