Friday, April 19, 2024

ಬಂಟ್ವಾಳ ತಾಲೂಕು ಆಡಳಿತ ಸೌಧದಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆ

ಕೇಂದ್ರ ಚುನಾವಣಾ ‌ ಆಯೋಗದ ಸಂಸ್ಥಾಪನಾ ದಿನದ ಅಂಗವಾಗಿ ಇಂದು ಗುರುವಾರ ಬಂಟ್ವಾಳ ತಾಲೂಕು ಆಡಳಿತದ ವತಿಯಿಂದ ತಾಲೂಕು ಆಡಳಿತ ಸೌಧದ ಸಭಾಂಗಣದಲ್ಲಿ ರಾಷ್ಟ್ರೀಯ ಮತದಾರರ ದಿನವನ್ನು ಆಚರಿಸಲಾಯಿತು.

ಈ ಸಂದರ್ಭದಲ್ಲಿ ಮತದಾರರ ಪ್ರತಿಜ್ಞಾ ವಿಧಿ ಬೋಧಿಸಲಾಯಿತು. ತಹಶೀಲ್ದಾರ್ ದಯಾನಂದ ಕೆ .ಎಸ್ ಪ್ರಾಸ್ತಾವಿಕವಾಗಿ ಮಾತನಾಡಿದರು.

ಇದೇ ಸಂದರ್ಭದಲ್ಲಿ ಮತದಾನದ ಮಹತ್ವದ ಬಗ್ಗೆ ಮಾತನಾಡಿದ ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿ ಜ್ಞಾನೇಶ್ ರವರು ಜಾಗೃತ ಮತದಾರರಾಗಿ ಮತ ಚಲಾಯಿಸಬೇಕು. ಆಗ ಉತ್ತಮ ನಾಯಕರ ಆಯ್ಕೆ ನಡೆದು ಪ್ರಜಾಪ್ರಭುತ್ವ ಯಶಸ್ವಿಯಾಗುತ್ತದೆ ಎಂದರು.

ಮತದಾರರ ದಿನಾಚರಣೆಯ ಬಗ್ಗೆ ಮಾಹಿತಿ ನೀಡಿದ ಉಪನ್ಯಾಸಕ ಹಾಗೂ ತಾಲೂಕು ಚುನಾವಣೆಯ ಮುಖ್ಯ ತರಬೇತುದಾರರಾದ ಅಬ್ದುಲ್ ರಝಾಕ್ ರವರು 18 ವರ್ಷ ಪೂರೈಸಿದ ಎಲ್ಲಾ ಭಾರತೀಯ ಪ್ರಜೆಗಳೂ ಮತದಾನದ ಹಕ್ಕನ್ನು ಪಡೆಯುತ್ತಾರೆ. ಮತದಾನ ಮಾಡುವುದು ಅಭಿಮಾನದ ವಿಷಯ. ಆದ್ದರಿಂದ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರಿದೆಯೇ ಎಂದು ಪರಿಶೀಲಿಸಿ ಖಚಿತಪಡಿಸಿಕೊಂಡು ಎಲ್ಲರೂ ತಪ್ಪದೇ ನಿಮ್ಮ ಹಕ್ಕನ್ನು ಚಲಾಯಿಸಿ ಎಂದು ಕರೆ ನೀಡಿದರು.

ಈ ಸಂದರ್ಭದಲ್ಲಿ ಪಾಣೆಮಂಗಳೂರು ಹೋಬಳಿ ಕಂದಾಯ ನಿರೀಕ್ಷಕರಾದ ವಿಜಯ .ಆರ್ , ಚುನಾವಣೆ ಶಾಖೆಯ ಸಿಬ್ಬಂದಿಗಳು ‌ಕಚೇರಿ ಸಿಬ್ಬಂದಿಗಳು. ಗ್ರಾಮ ಆಡಳಿತ ಅಧಿಕಾರಿಗಳು, ಗ್ರಾಮ ಸಹಾಯಕರು,

ಶಿಕ್ಷಕರು, ವಿದ್ಯಾರ್ಥಿಗಳು, ಬಿ.ಎಲ್.ಓ ಗಳು ಹಾಜರಿದ್ದರು. ಇದೇ ಸಂದರ್ಭದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ವಿಶೇಷ ಸಾಧನೆಗೈದವರಿಗೆ ಮತ್ತು ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಪ್ರಶಂಸಾ ಪತ್ರ ವಿತರಿಸಲಾಯಿತು.

ಚುನಾವಣೆ ಉಪತಹಸೀಲ್ದಾರ್ ನವೀನ್ ಬೆಂಜನಪದವು ಅವರು ಸವಿವವರವಾಗಿ ಮಾಹಿತಿ ನೀಡಿದರು. ಬಂಟ್ವಾಳ ಹೋಬಳಿ ಕಂದಾಯ ನಿರೀಕ್ಷಕರಾದ ಜನಾರ್ಧನ ಜೆ .ಸ್ವಾಗತಿಸಿದರು. ಗ್ರಾಮ ಆಡಳಿತ ಅಧಿಕಾರಿ ಅನಿಲ್. ಕೆ .ಪೂಜಾರಿ ವಂದಿಸಿದರು.

ಚುನಾವಣಾ ಶಾಖೆಯ ವಿಷಯ ನಿರ್ವಾಹಕ ನಾರಾಯಣ ಗೌಡ ಕಾರ್ಯಕ್ರಮ ನಿರೂಪಿಸಿದರು.

More from the blog

ಬಿಸಿರೋಡಿನ ವಾಣಿಜ್ಯ ಕಟ್ಟಡದ ಜಗುಲಿಯಲ್ಲಿ ಚೆಲ್ಲಿರುವ ರಕ್ತ : ಹಲವು ಅನುಮಾನ

ಬಂಟ್ವಾಳ: ಬಿಸಿರೋಡಿನ ವಾಣಿಜ್ಯ ಮಳಿಗೆಯ ಮುಂಭಾಗವೊಂದರಲ್ಲಿ ರಕ್ತ ಚೆಲ್ಲಿರುವುದು ಕಂಡು ಬಂದಿದ್ದು, ಅಂಗಡಿ ಮಾಲಕರಲ್ಲಿ ಒಂದಷ್ಟು ಗೊಂದಲ ಉಂಟಾದ ಘಟನೆ ನಡೆದಿದೆ. ಎ.18 ರಂದು ಬೆಳಿಗ್ಗೆ ತಾ.ಪಂ. ನ ವಾಣಿಜ್ಯ ಕಟ್ಟಡವೊಂದರ ಜಗುಲಿಯಲ್ಲಿ ರಕ್ತ...

ಲೋಕಸಭಾ ಚುನಾವಣೆ : ಎ.20 ರಂದು‌ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ಬೃಹತ್ ಚುನಾವಣಾ ಪ್ರಚಾರ

ಬಂಟ್ವಾಳ: ಲೋಕಸಭಾ ಚುನಾವಣೆಯ ಪ್ರಚಾರ ಬಿರುಸಿನಿಂದ ನಡೆಯುತ್ತಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಎ.20 ರಂದು‌ ಶನಿವಾರ ಮಧ್ಯಾಹ್ನ 2.30 ಕ್ಕೆ ಗಂಟೆಗೆ ಬಿಸಿರೋಡಿನ ಬ್ರಹ್ಮ ಶ್ರೀನಾರಾಯಣ ಗುರು ಮಂದಿರದಲ್ಲಿ ಬೃಹತ್ ಚುನಾವಣಾ...

ಹಿಮ್ಮುಖವಾಗಿ ಚಲಿಸಿದ ಪಿಕಪ್‌… ವ್ಯಕ್ತಿ ಸಾವು

ಬೆಳ್ತಂಗಡಿ: ಶಿಬಾಜೆ ಗ್ರಾಮದ ತಂಬ್ಲಾಜೆಯಲ್ಲಿ ಪಿಕಪ್‌ ವಾಹನವೊಂದು ಹಿಮ್ಮುಖವಾಗಿ ಚಲಿಸಿದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ಘಟನೆ ನಡೆದಿದೆ. ರುಕ್ಮ ಮುಗೇರ ಹಾಗೂ ನಾಗೇಶ್‌ ಅವರು ಪಿಕಪ್‌ ವಾಹನದಲ್ಲಿ...

ಜೀಪ್ ಬೈಕ್ ಗೆ ಡಿಕ್ಕಿ… ಬೈಕ್ ಸವಾರ ಸಾವು : ಇಬ್ಬರು ಮಕ್ಕಳು ಗಂಭೀರ

ಪುತ್ತೂರು: ಜೀಪೊಂದು ಬೈಕ್ ಗೆ ಡಿಕ್ಕಿ ಯಾಗಿ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಕಣಿಯೂರು- ಮಂಜೇಶ್ವರ ಅಂತರಾಜ್ಯ ರಸ್ತೆಯ ನರಿಮೊಗರು ಗ್ರಾಮದ ಪಾಪೆತ್ತಡ್ಕ ಎಂಬಲ್ಲಿ ನಡೆದಿದೆ. ಪುತ್ತೂರು ತಾಲೂಕಿನ ಬಡಕ್ಕೋಡಿ ಕಡ್ಯ ನಿವಾಸಿ...