Wednesday, April 10, 2024

ಮನೆ ಮನೆಯಲ್ಲಿ ಧಾರ್ಮಿಕ ಶಿಕ್ಷಣದ ಪಾಠ ಆಗಬೇಕು- ಒಡಿಯೂರು ಶ್ರೀ  

ವಿಟ್ಲ: ಭಾರತ ದೇಶದ ಅಂತಸತ್ವ ಎಂದರೆ ಆಧ್ಯಾತ್ಮ ಎಂದು ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನಂನ ಒಡಿಯೂರು ಶ್ರೀ ಗುರುದೇವಾನಂದ ಸ್ವಾಮಿಗಳವರು ನುಡಿದರು.

ಅವರು ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನಂ, ಶ್ರೀ ದತ್ತಾಂಜನೇಯ ಕ್ಷೇತ್ರದಲ್ಲಿ ಮಂಗಳವಾರ ತುಳುಸಾಹಿತ್ಯ ಸಮ್ಮೇಳನದ ಧರ್ಮ ಸಭೆಯಲ್ಲಿ ಆಶೀರ್ವಚನ ನೀಡಿದರು.

ದುಶ್ಚಟಮುಕ್ತ ಸಮಾಜ ನಿರ್ಮಾಣ ಆಗಬೇಕು, ಜೀವನದಲ್ಲಿ ಮೊದಲು ಪರೀಕ್ಷೆ ಮತ್ತು ಪಾಠ ಇರುತ್ತದೆ, ಮನೆ ಮನೆಯಲ್ಲಿ ಧಾರ್ಮಿಕ ಶಿಕ್ಷಣದ ಪಾಠ ಆಗಬೇಕು, ಆರೋಗ್ಯಪೂರ್ಣ ಬದುಕು ನಮಗೆ ಆಗಬೇಕು ಎಂದಾದರೆ, ಶ್ರದ್ಧಾಕೇಂದ್ರ ಬಲಗೊಳ್ಳಬೇಕು ಎಂದರು. 108 ಅಡಿ ಎತ್ತರದ ಹನುಮಾನ್ ವಿಗ್ರಹದ ನಿರ್ಮಾಣ ಸಹಿತ ಪ್ರಮುಖ ಯೋಜನೆಗಳ ಕುರಿತು ಮಾಹಿತಿ ನೀಡಿದರು.

ಸಾಧ್ವಿ ಶ್ರೀ ಮಾತಾನಂದಮಯೀ ದಿವ್ಯ ಸಾನಿಧ್ಯ ವಹಿಸಿದ್ದರು. ಅಧ್ಯಕ್ಷತೆಯನ್ನು ಹಿರಿಯ ಸಾಹಿತಿ ಡಾ.ವಸಂತಕುಮಾರ ಪೆರ್ಲ ವಹಿಸಿದ್ದರು.

ಈ ಸಂದರ್ಭದಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್ ಮಾತನಾಡಿ, ಮನೆಮನೆಗಳಲ್ಲಿ ರಾವಣ ಸೃಷ್ಟಿ ಆಗುವ ಕಾರಣ ಮನೆಮನೆಗಳಲ್ಲಿ ರಾಮನ ಸೃಷ್ಟಿ ಆಗಬೇಕು ಎಂಬ ಗಾಂಧೀಜಿ ಅವರ ಗ್ರಾಮರಾಜ್ಯದ ಪರಿಕಲ್ಪನೆ ಗ್ರಾಮಸ್ವರಾಜ್ಯ ಮೂಲಕ ಒಡಿಯೂರು ಶ್ರೀಗಳಿಂದ ನನಸಾಗಿದೆ, ಭಾರತವಿಂದು ಸಾಂಸ್ಕೃತಿಕವಾಗಿ ಎದ್ದು ನಿಲ್ಲುವ ಕಾಲಘಟ್ಟದಲ್ಲಿ ನಾವಿದ್ದೇವೆ, ತುಳು, ಭಾಷೆ, ಪರಂಪರೆಗೆ ಧರ್ಮಸ್ಥಳ ಮತ್ತು ಒಡಿಯೂರು ಅಪಾರ ಕೊಡುಗೆ ನೀಡಿದೆ ಎಂದು ಹೇಳಿದರು.

ತುಳು ರಾಜ್ಯಭಾಷೆ ಆಗಬೇಕು, ತುಳುವನ್ನು ಎಂಟನೇ ಪರಿಚ್ಛೇದ ಸೇರ್ಪಡೆಗೆ ಪ್ರಯತ್ನಗಳು ಆಗಿವೆ ಎಂದು ಹೇಳಿದ ನಳಿನ್, ಮುಂದೆಯೂ ನಮ್ಮದೇ ಸರಕಾರ ಬರಲಿದ್ದು, ನಾನು ಮತ್ತು ರಾಜೇಶ್ ನಾಯ್ಕ್ ಅವರು ಕ್ಷೇತ್ರದ ಆಶಯಗಳನ್ನು ಈಡೇರಿಸುತ್ತೇವೆ ಎಂದರು.

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಮಾತನಾಡಿ, ಬಂಟ್ವಾಳ ಕ್ಷೇತ್ರದಾದ್ಯಂತ ಧಾರ್ಮಿಕ ಕ್ಷೇತ್ರಗಳ ರಸ್ತೆ ಸಂಪರ್ಕ ಆಗಿದೆ ಎಂದರು.

ಹೇರಂಭ ಇಂಡಸ್ಟ್ರೀಸ್ ಮುಂಬೈನ ಮಾಲೀಕ ಸದಾಶಿವ ಶೆಟ್ಟಿ ಕುಳೂರು ಕನ್ಯಾನ, ಮುಂಬೈ ಸಂಜೀವಿನಿ ಆಸ್ಪತ್ರೆ ಆಡಳಿತ ನಿರ್ದೇಶಕ ಡಾ.ಸುರೇಶ್ ರಾವ್, ವಿಜಯಲಕ್ಷ್ಮಿ ರಾವ್, ಉದ್ಯಮಿ ವಾಮಯ್ಯ ಬಿ.ಶೆಟ್ಟಿ, ಉದ್ಯಮಿ ದಯಾನಂದ ಹೆಗ್ಡೆ, ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷ ಎ.ಸುರೇಶ್ ರೈ ಉಪಸ್ಥಿತರಿದ್ದರು.

ರೇಣುಕಾ ಎಸ್. ರೈ ಪ್ರಾರ್ಥಿಸಿದರು. ಪ್ರಕಾಶ್ ಕೆ. ಶೆಟ್ಟಿ ಪೇಟೆಮನೆ ಸ್ವಾಗತಿಸಿದರು. ಯಶವಂತ ವಿಟ್ಲ ಕಾರ್ಯಕ್ರಮ ನಿರೂಪಿಸಿದರು.

ಒಡಿಯೂರು ಶ್ರೀ ಗುರುದೇವ ವಿದ್ಯಾಪೀಠದ ಸಂಚಾಲಕರಾದ ಮಾತೇಶ್ ಭಂಡಾರಿ ವಂದಿಸಿದರು. ಇದೇ ಸಂದರ್ಭದಲ್ಲಿ ಮಲಾರು ಜಯರಾಮ ರೈ ಬರೆದ ಒಡಿಯೂರು ಶ್ರೀಗಳ ಪ್ರವಚನಗಳ ದೃಷ್ಟಾಂತ ಕತೆಗಳ ಮಾಲಿಕೆ ‘ಕತೆ ಪಂಡೆನ ಜೋಗಿ’ ಪುಸ್ತಕವನ್ನು ಬಿಡುಗಡೆಗೊಳಿಸಲಾಯಿತು.

ತುಳುಸಿರಿ ಮಾನಾದಿಗೆ: 

ಇದೇ ಸಂದರ್ಭದಲ್ಲಿ ಹಿರಿಯ ಮೃದಂಗ ವಾದಕ ವಿದ್ವಾನ್ ಬಾಬು ರೈ ಕಾಸರಗೋಡು, ತುಳು ಸಾಹಿತಿ ಡಾ. ಸಾಯಿಗೀತಾ ತೋಕೂರುಗುತ್ತು, ಸಹಕಾರಿಯ ಸಾಧಕ ಎಸ್.ಬಿ. ಜಯರಾಮ ರೈ, ತುಳುನಾಡಿನ ಹಳೆಯ ವಸ್ತುಗಳ ಸಂಗ್ರಹಕ್ಕಾಗಿ ಸುಧಾಕರ ಶೆಟ್ಟಿ ಹಿರ್ಗಾನ, ಸಾವಯವ ಕೃಷಿಗಾಗಿ ರಾಮಣ್ಣ ಗೌಡ ಕಣಿಯೂರು ಅವರಿಗೆ ತುಳುಸಿರಿ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಇದೇ ಸಂದರ್ಭದಲ್ಲಿ ತುಳುನಾಟಕೋತ್ಸವ – ತುಳು ನಾಟಕ ಸ್ಪರ್ಧೆಯ ಬಹುಮಾನ ವಿತರಣೆ ಕಾರ್ಯಕ್ರಮ ನಡೆಯಿತು. ಪ್ರಶಸ್ತಿ ಪ್ರದಾನ ಕಾರ್ಯಕ್ರಮವನ್ನು ಕದ್ರಿ ನವನೀತ ಶೆಟ್ಟಿ ನಿರೂಪಿಸಿದರು.

More from the blog

ಹಿತೈಷಿ ತರಬೇತಿ ಕೇಂದ್ರದ ಎಲ್ಲಾ ವಿದ್ಯಾರ್ಥಿಗಳು ಉತ್ತಮ ಫಲಿತಾಂಶದೊಂದಿಗೆ ತೇರ್ಗಡೆ

2023-24ನೇ ಸಾಲಿನ ದ್ವಿತೀಯ ಪಿ.ಯು.ಸಿ ಪರೀಕ್ಷೆಯಲ್ಲಿ ಪಾಣೆಮಂಗಳೂರು, ನರಿಕೊಂಬುವಿನಲ್ಲಿರುವ ಹಿತೈಷಿ ತರಬೇತಿ ಕೇಂದ್ರದ ಎಲ್ಲಾ ವಿದ್ಯಾರ್ಥಿಗಳು ಉತ್ತಮ ಅಂಕಗಳೊಂದಿಗೆ ತೇರ್ಗಡೆಯಾಗಿದ್ದಾರೆ. ಕು.ಕೀರ್ತನ ಶೇ.95.6% ಅಂಕಗಳೊಂದಿಗೆ ಅತ್ಯುತ್ತಮ ಶ್ರೇಣಿಯಲ್ಲಿ ತೇರ್ಗಡೆಯಾಗಿರುತ್ತಾರೆ ಎಂದು ಸಂಸ್ಥೆಯ ಪ್ರಕಟನೆಯಲ್ಲಿ ತಿಳಿಸಲಾಗಿದೆ. 2024-25ನೇ...

ಬಂಟ್ವಾಳದ ಉಳಿ ಗ್ರಾಮದಲ್ಲಿ ಮತದಾರರ ಮನೆಗೆ ಭೇಟಿ ನೀಡಿ ಮತಯಾಚನೆ ನಡೆಸಿದ ಶಾಸಕ ರಾಜೇಶ್ ನಾಯ್ಕ್

ಲೋಕ ಸಭಾ ಚುನಾವಣೆಯ ಹಿನ್ನಲೆಯಲ್ಲಿ ಕ್ಯಾ.ಬ್ರಿಜೇಶ್ ಚೌಟ ಅವರ ಗೆಲುವಿಗಾಗಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರ ಗ್ರಾಮ,ಮನೆ,ಮನ ಅಭಿಯಾನದ ಅಂಗವಾಗಿ ಬಂಟ್ವಾಳದ ಉಳಿ ಗ್ರಾಮದಲ್ಲಿ ಮತದಾರರ ಮನೆಗೆ ಬೇಟಿ ನೀಡಿ...

ವಿಟ್ಲ ಕೇಂದ್ರ ಜುಮಾ ಮಸೀದಿ, ಈದುಲ್ ಫಿತರ್

ವಿಟ್ಲ; ವಿಟ್ಲ ಕೇಂದ್ರ ಜುಮಾ ಮಸೀದಿಯಲ್ಲಿ ಈದುಲ್ ಫಿತರ್ ನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಖತೀಬ್ ಮಹಮ್ಮದ್ ನಸೀಹ್ ದಾರಿಮಿ ಉಸ್ತಾದ್ ರವರು ಖುತುಬಾ ಹಾಗೂ ಈದ್ ನಮಾಝ್ ನಿರ್ವಹಿಸಿದರು. ಈದ್ ಸಂಸೇಶ ನೀಡಿದ ಖತೀಬರು "...

ನೋಟ ಮತದಾನ ಅಭಿಯಾನ ಮಾಡುವವರ ವಿರುದ್ಧ ಕಾನೂನು ಕ್ರಮಕ್ಕೆ ತಾ.ಪಂ.ಸದಸ್ಯ ಪ್ರಭಾಕರ್ ಪ್ರಭು ಒತ್ತಾಯ…

ನೋಟ (NOTA) ಮತದಾನ ಅಭಿಯಾನ ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಮಾಜಿ ತಾ.ಪಂ‌.ಸದಸ್ಯ ಪ್ರಭಾಕರ್ ಪ್ರಭು ಜಿಲ್ಲಾಧಿಕಾರಿಗೆ ಮನವಿ ಮಾಡಿದ್ದಾರೆ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕೆಲವೊಂದು ವ್ಯಕ್ತಿಗಳು ಮತ್ತು ಸಂಘಟನೆಗಳು...