Monday, April 8, 2024

ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಸಾಮಾಜಿಕ ಚಟುವಟಿಕೆಗಳ ಮೂಲಕ‌ ಮಾದರಿಯಾಗಿದೆ : ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ.ಸಿ.ಟ್ರಸ್ಟ್ (ರಿ.) ಬಂಟ್ವಾಳ, ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಬಂಟ್ವಾಳ ವಲಯ ಇದರ ಸಹಯೋಗದೊಂದಿಗೆ, ಪದ್ಮವಿಭೂಷಣ, ರಾಜಶ್ರೀ ಡಾ! ಡಿ.ವೀರೇಂದ್ರ ಹೆಗ್ಗಡೆ ಹಾಗೂ ಹೇಮಾವತಿ ವಿ.ಹೆಗ್ಗಡೆ ಅವರ ಅಶ್ರೀರ್ವಾದದೊಂದಿಗೆ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಪ್ರಗತಿ ಬಂಧು ಸ್ವಸಹಾಯ ಸಂಘಗಳ ಸಾಧನಾ ಸಮಾವೇಶ ಕಾರ್ಯಕ್ರಮ ನಾವೂರ ಶ್ರೀ ವಿಷ್ಣು ಮೂರ್ತಿ ದೇವಸ್ಥಾನದ ವಠಾರದಲ್ಲಿ ಜ. 10 ರಂದು ಮಂಗಳವಾರ ನಡೆಯಿತು.

ಮುಖ್ಯ ಅತಿಥಿ ಬಂಟ್ವಾಳ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಇವರು ಮಾತನಾಡಿ, ಖಾವಂದರ ದೂರದೃಷ್ಟಿಯ ಯೋಜನೆಯಾದ ಸ್ವಸಹಾಯ ಗುಂಪುಗಳ ಶಿಸ್ತುಬಧ್ದವಾದ ಕಾರ್ಯಚಟುವಟಿಕೆಗಳಿಂದ ಆರ್ಥಿಕ ಚಟುವಟಿಕೆ ಮೂಲಕ ಗ್ರಾಮಗಳ ಅಭಿವೃದ್ಧಿಗೆ ಕಾರಣವಾಗಿದೆ. ಸ್ವಸಹಾಯ ಗುಂಪಿನ ಸದಸ್ಯರನ್ನು ಮುಖ್ಯವಾಹಿನಿಗೆ ತರುವ ಜೊತೆಯಲ್ಲಿ ಸಾಮಾಜಿಕ ಚಟುವಟಿಕೆಗಳ ಮೂಲಕ ಮಾದರಿಯಾಗಿ ಗುರುತಿಸಿಕೊಂಡಿದೆ ಎಂದು ಹೇಳಿದರು. ಸಾಮಾಜಿಕ ಚಿಂತನೆಯ ಮೂಲಕ ಧಾರ್ಮಿಕ ಕಾರ್ಯಕ್ರಮಗಳಿಗೆ ಹೆಚ್ಚಿನ ಒತ್ತು ನೀಡಿದ್ದಲ್ಲದೆ ಸಮಾಜದ ದುರ್ಬಲ ವರ್ಗದ ಜನರ ಕಣ್ಣೀರು ಒರೆಸುವ ಕೆಲಸ ಗ್ರಾಮಾಭಿವೃದ್ದಿ ಯೋಜನೆ ಮೂಲಕ ನಡೆದಿದೆ ಎಂದರು.

ಕಾರ್ಯಕ್ರಮವನ್ನು ಉದ್ಘಾಟಿಸಿದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ.ಸಿ.ಟ್ರಸ್ಟ್ .(ರಿ.) ಧರ್ಮಸ್ಥಳ ಇದರ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ| ಎಲ್.ಎಚ್.ಮಂಜುನಾಥ್ ಮಾತನಾಡಿ, ಆತ್ಮವಿಶ್ವಾಸ, ಬದುಕಿಗೆ ಹೊಸ ದಾರಿಯನ್ನು ಕಂಡುಕೊಳ್ಳಲು ಸಹಾಯ ವಾಗಬೇಕು ಎಂಬ ನಿಟ್ಟಿನಲ್ಲಿ ಖಾವಂದರು ಸ್ವಸಹಾಯ ಗುಂಪು ರಚನೆ, ಚಳುವಳಿಯನ್ನು ಮಾಡಿದ್ದಾರೆ. ಮಹಿಳೆಯರನ್ನು ಮುಖ್ಯವಾಹಿನಿಗೆ ತರುವ ಮೂಲಕ, ಮಹಿಳೆಯರಿಗೆ ಸ್ವಾವಲಂಬನೆ ಸಾಧಿಸುವ ಜೊತೆಗೆ ಸಂಸ್ಕೃತಿ, ಸಂಸ್ಕಾರ, ಶುಚಿತ್ವದ ಮಹತ್ವ ಹಾಗೂ ಆರ್ಥಿಕ ಸುಧಾರಣೆಗಾಗಿ ಒತ್ತು ನೀಡುವ ವಿಶೇಷ ಕಾರ್ಯಕ್ರಮಗಳು ಸ್ವಹಾಯ ಸಂಘದ ಚಳುವಳಿಯ ಮೂಲಕ ನಡೆದಿದೆ ಎಂದರು.
ಆರ್ಥಿಕವಾಗಿ ಸಾಮಾಜಿಕವಾಗಿ ಬದಲಾವಣೆ ನಡೆದಿದೆ ಎಂಬ ಸಂತೋಷ ಇದೆ.
ಆಧುನಿಕ ಕಾಲದಲ್ಲಿ ಅನೇಕ ಪದ್ದತಿಯನ್ನು,ಸಂಸ್ಕೃತಿಯನ್ನು , ಆಚಾರ, ವಿಚಾರಗಳನ್ನು ಕಳೆದುಕೊಂಡಿದ್ದೇವೆ,ಆದರೆ ಇದರ ಮಧ್ಯೆ ಧಾರ್ಮಿಕ ಕಾರ್ಯಕ್ರಮ ಹಾಗೂ ಹಳೇಯ ಸಂಸ್ಕೃತಿಯ ನ್ನು ಬಿಂಬಿಸುವ ಚಪ್ಪರ ಹಾಕಿದ್ದು, ಪಾರಂಪರಿಕ ಸಂಸ್ಕೃತಿಯನ್ನು ನಾವೂರದಲ್ಲಿ ಎತ್ತಿ ತೋರಿಸಿದ್ದೀರಿ ಎಂದು ಸಂತಸ ವ್ಯಕ್ತಪಡಿಸಿದರು.

ಬಂಟ್ವಾಳ ಕೇಂದ್ರ ಸಮಿತಿ ಒಕ್ಕೂಟದ ಅಧ್ಯಕ್ಷ ಚಿದಾನಂದ ರೈ ಕಕ್ಯೆ ಕಾರ್ಯಕ್ರಮ ದ ಅಧ್ಯಕ್ಷ ತೆ ವಹಿಸಿದ್ದರು.
ವೇದಿಕೆಯಲ್ಲಿ ಬಂಟ್ವಾಳ ಜನಜಾಗೃತಿ ವೇದಿಕೆ ಬಂಟ್ವಾಳ ಇದರ ಅಧ್ಯಕ್ಷ ರೊನಾಲ್ಡ್ ಡಿ.ಸೋಜ, ನಾವೂರ ಗ್ರಾ.ಪ‌‌ಂ.ಅಧ್ಯಕ್ಷ ಉಮೇಶ್ ಕುಲಾಲ್, ಮನ್ಮಥ್ ರಾಜ್ ಜೈನ್, ನಾವೂರ ಶ್ರೀ ವಿಷ್ಣು ಮೂರ್ತಿ ದೇವಸ್ಥಾನದ ವ್ಯವಸ್ಥಾಪನ ಅಧ್ಯಕ್ಷ ಮುರಳೀಧರ್ ಭಟ್, ಬಂಟ್ವಾಳ ಶ್ರೀ.ಕ್ಷೇ.ಧ.ಗ್ರಾ.ಯೋ.ರಿ.ಇದರ ವಲಯ ಅಧ್ಯಕ್ಷ ಮನೋಹರ ‌ಕುಲಾಲ್, ಯೋಜನೆಯ ಜಿಲ್ಲಾ ನಿರ್ದೇಶಕ ಸತೀಶ್ ಶೆಟ್ಟಿ ಉಪಸ್ಥಿತರಿದ್ದರು.

ಬಂಟ್ವಾಳ ತಾಲೂಕಿನ ಯೋಜನಾಧಿಕಾರಿ ಜಯಾನಂದ ಪಿ. ಪ್ರಾಸ್ತಾವಿಕವಾಗಿ ಮಾತನಾಡಿ , ಅತಿಥಿಗಳನ್ನು ಸ್ವಾಗತಿಸಿದರು.
ಗುಂಪಿನ ಸದಸ್ಯರಿಗೆ ವಿವಿಧ ಸಲಕರಣೆಗಳನ್ನು ಹಾಗೂ ಸವಲತ್ತುಗಳನ್ನು ವಿತರಿಸಲಾಯಿತು. ಬಂಟ್ವಾಳ ವಲಯ ಮೇಲ್ವಿಚಾರಕ ಕೇಶವ ವಂದಿಸಿದರು. ಮಂಜುನಾಥ್ ಕಾರ್ಯಕ್ರಮ ನಿರೂಪಿಸಿದರು.

More from the blog

ಭಕ್ತರೇ ಗಮನಿಸಿ…. ಈ ದಿನ ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ಆಗೇಲು ಸೇವೆ ಇರುವುದಿಲ್ಲ

ಬಂಟ್ವಾಳ ತಾಲೂಕು ಸಜೀಪಮೂಡ ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ಏ.12, 14, 16 ರಂದು ಆಗೇಲು ಸೇವೆ ಇರುವುದಿಲ್ಲ. ಏ. 19ರಿಂದ ಆಗೇಲು ಸೇವೆ ನಡೆಯುತ್ತದೆ ಹಾಗೂ ಏ.21 ರಂದು ಆಗೇಲು ಸೇವೆ...

ಲೋಕಸಭಾ ಚುನಾವಣೆ : ಅಕ್ರಮ ವ್ಯವಹಾರಿಗಳಿಗೆ ರಹದಾರಿಯಾದ ಸಾಲೆತ್ತೂರು ಬಳಿಯ ಕೂಡುರಸ್ತೆ ಚೆಕ್ ಪೋಸ್ಟ್

ವಿಟ್ಲ: ಲೋಕಸಭಾ ಚುನಾವಣೆಗೆ ಈಗಾಗಲೇ ದಿನ ನಿಗದಿಯಾಗಿದ್ದು, ಜಿಲ್ಲಾಡಳಿತ ಸರ್ವ ಸನ್ನದ್ದವಾಗಿದೆ. ಅಕ್ರಮಗಳನ್ನು ತಡೆಗಟ್ಟುವ ಉದ್ದೇಶದಿಂದ ದಕ್ಷಿಣ ಕನ್ನಡ ಜಿಲ್ಲಾಡಳಿತವು ಗಡಿಪ್ರದೇಶ ಸೇರಿದಂತೆ ಜಿಲ್ಲೆಯಲ್ಲಿ 23 ಕಡೆಗಳಲ್ಲಿ ಚೆಕ್ ಪೋಸ್ಟ್ ಗಳನ್ನು ಸ್ಥಾಪಿಸಿದೆ. ಆದರೆ...

5,8,9,11ನೇ ತರಗತಿ ಪರೀಕ್ಷೆ ಫಲಿತಾಂಶಕ್ಕೆ ಸುಪ್ರೀಂ ತಡೆ

ಹೊಸದಿಲ್ಲಿ: 5, 8, 9 ಮತ್ತು 11 ನೇ ತರಗತಿಗಳ ಬೋರ್ಡ್ ಪರೀಕ್ಷೆಗಳ ಫಲಿತಾಂಶಗಳನ್ನು ಪ್ರಕಟಿಸಲು ಸುಪ್ರೀಂ ಕೋರ್ಟ್ ಸೋಮವಾರ ತಡೆಯಾಜ್ಞೆ ನೀಡಿದೆ. ರಾಜ್ಯದಲ್ಲಿ 5, 8, 9ನೇ ತರಗತಿಗೆ ಬೋರ್ಡ್​ ಪರೀಕ್ಷೆ ಮುಗಿದಿದ್ದು,...

ಮನೆಯೊಳಗೆ ‌ನುಗ್ಗಿ ವ್ಯಕ್ತಿಗೆ ಚೂರಿ ಇರಿತ : ಆರೋಪಿ ಪರಾರಿ

ಬಂಟ್ವಾಳ: ಮನೆಯೊಳಗೆ ‌ನುಗ್ಗಿ ವ್ಯಕ್ತಿಯೋರ್ವನಿಗೆ ಚೂರಿ ಹಾಕಿ ಪರಾರಿಯಾಗಿರುವ ಘಟನೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಪುದು ಎಂಬಲ್ಲಿ ನಡೆದಿದೆ. ಪುದು ಗ್ರಾಮದ 10 ನೇ ಮೈಲಿಕಲ್ಲು ನಿವಾಸಿ...