ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಸಂಚಲನ ಮೂಡಿಸಿ ಮಾಧ್ಯಮಗಳಲ್ಲಿ ಬಾರೀ ಸುದ್ದಿಯಾಗಿದ್ದ ಸ್ಯಾಂಟ್ರೋ ರವಿಗಾಗಿ ಪೋಲೀಸರು ದ.ಕ.ಉಡುಪಿ ಜಿಲ್ಲೆಯಲ್ಲಿ ತೀವ್ರ ತಪಾಸಣೆ ನಡೆಸುತ್ತಿದ್ದಾರೆ ಎನ್ನಲಾಗಿದೆ.
ಹಲವು ವಿವಾದಗಳಿಂದ ಸುದ್ದಿಯಾಗಿ ಪ್ರಕರಣ ದಾಖಲಾಗಿದೆ ಅ ಬಳಿಕ ತಲೆಮರೆಸಿಕೊಂಡಿದ್ದಾನೆ ಎನ್ನಲಾಗಿರುವ ಸ್ಯಾಂಟ್ರೋ ರವಿ ಆತ ಕರಾವಳಿಗೆ ಬಂದು ತಲೆಮರೆಸಿಕೊಂಡಿದ್ದಾನೆ ಎಂಬ ಸುದ್ದಿ ಹರಡಿದ್ದು, ಆತನಿಗಾಗಿ ಶೋಧ ಕಾರ್ಯ ಮುಂದುವರಿದಿದೆ.
ದ.ಕ.ಜಿಲ್ಲೆ ಹಾಗೂ ಉಡುಪಿ ಜಿಲ್ಲಾ ಪೋಲೀಸ್ ಉನ್ನತ ಮಟ್ಟದ ಅಧಿಕಾರಿಗಳು ಕಾರ್ಯಪ್ರವೃತ್ತರಾಗಿದ್ದು, ಆಯಕಟ್ಟಿನ ಸ್ಥಳಗಳಲ್ಲಿ ವಾಹನಗಳ ತಪಾಸಣೆ ಕಾರ್ಯ ನಡೆಯುತ್ತಿದೆ.
ದ.ಕ.ಜಿಲ್ಲೆಯಿಂದ ಉಡುಪಿ ಜಿಲ್ಲೆಗೆ ಹೋಗುತ್ತಿದ್ದ ಎನ್ನಲಾಗಿದ್ದು, ಉಡುಪಿ ಜಿಲ್ಲೆಯಲ್ಲಿ ಪೋಲೀಸರು ತಪಾಸಣೆ ನಡೆಸುತ್ತಿದ್ದಾರೆ ಎನ್ನಲಾಗಿದೆ.