Wednesday, April 10, 2024

ಮಾ.12ರಂದು ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸರಳ ಸಾಮೂಹಿಕ ವಿವಾಹ ‘ಸಪ್ತಪದಿ’ : ಇಲ್ಲಿದೆ ವಿವರ

ಸುಬ್ರಹ್ಮಣ್ಯ: ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಯ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಮಾ.12ರಂದು ಸರಳ ಸಾಮೂಹಿಕ ವಿವಾಹ “ಸಪ್ತಪದಿ” ನಡೆಯಲಿದೆ.

ವಿವಾಹವಾಗಲು ಬಯಸುವವರು ದೇವಸ್ಥಾನದ ಕಚೇರಿಯಿಂದ ಅರ್ಜಿ ಫಾರಂ ಪಡೆದು ಭರ್ತಿ ಮಾಡಿ ಫೆ. 15ರೊಳಗೆ ಮರಳಿಸಬೇಕು. ವಿವಾಹಕ್ಕೆ ಆಗಮಿಸುವ ಬಂಧುಗಳಿಗೆ, ಸಾರ್ವಜನಿಕರಿಗೆ ಊಟೋಪಚಾರ ವ್ಯವಸ್ಥೆ ಇರಲಿದೆ. ಹೆಚ್ಚಿನ ಮಾಹಿತಿಗೆ 08257-281224 ಕರೆ ಮಾಡಬಹುದು ಎಂದು ಪ್ರಕಟನೆ ತಿಳಿಸಿದ್ದಾರೆ.

ವರನಿಗೆ ಹೂವಿನ ಹಾರ, ಪಂಚೆ, ಅಂಗಿ, ಶಲ್ಯ, ಪೇಟ, ಬಾಸಿಂಗ ಇತ್ಯಾದಿಗಳಿಗಾಗಿ ದೇವಸ್ಥಾನದಿಂದ 5 ಸಾವಿರ ರೂ. ಹಾಗೂ ವಧುವಿಗೆ ಹೂವಿನ ಹಾರ, ಧಾರೆ ಸೀರೆ, ರವಿಕೆ ಕಣ, ಕಾಲುಂಗುರ ಇತ್ಯಾದಿಗಳಿಗೆ 10 ಸಾವಿರ ರೂ. ನೀಡಲಾಗುವುದು. 40 ಸಾವಿರ ರೂ. ಮೌಲ್ಯದಲ್ಲಿ ವಧುವಿಗೆ ಚಿನ್ನದ ತಾಳಿ, ಎರಡು ಚಿನ್ನದ ಗುಂಡುಗಳನ್ನು ನೀಡಲಾಗುವುದು.

ವಧುವಿಗೆ ಕಂದಾಯ ಇಲಾಖೆಯ ವತಿಯಿಂದ ಆದರ್ಶ ವಿವಾಹ ಯೋಜನೆಯಡಿ 10 ಸಾವಿರ ರೂ. ನಿಶ್ಚಿತ ಠೇವಣಿ ಸೌಲಭ್ಯ ಒದಗಿಸಲಾಗುವುದು. ಪರಿಶಿಷ್ಟ ಜಾತಿಯ ಜೋಡಿಗೆ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಸರಳ ವಿವಾಹ ಯೋಜನೆಯಡಿ 50 ಸಾವಿರ ರೂ. ಒದಗಿಸಲಾಗುವುದು.

More from the blog

ಹಿತೈಷಿ ತರಬೇತಿ ಕೇಂದ್ರದ ಎಲ್ಲಾ ವಿದ್ಯಾರ್ಥಿಗಳು ಉತ್ತಮ ಫಲಿತಾಂಶದೊಂದಿಗೆ ತೇರ್ಗಡೆ

2023-24ನೇ ಸಾಲಿನ ದ್ವಿತೀಯ ಪಿ.ಯು.ಸಿ ಪರೀಕ್ಷೆಯಲ್ಲಿ ಪಾಣೆಮಂಗಳೂರು, ನರಿಕೊಂಬುವಿನಲ್ಲಿರುವ ಹಿತೈಷಿ ತರಬೇತಿ ಕೇಂದ್ರದ ಎಲ್ಲಾ ವಿದ್ಯಾರ್ಥಿಗಳು ಉತ್ತಮ ಅಂಕಗಳೊಂದಿಗೆ ತೇರ್ಗಡೆಯಾಗಿದ್ದಾರೆ. ಕು.ಕೀರ್ತನ ಶೇ.95.6% ಅಂಕಗಳೊಂದಿಗೆ ಅತ್ಯುತ್ತಮ ಶ್ರೇಣಿಯಲ್ಲಿ ತೇರ್ಗಡೆಯಾಗಿರುತ್ತಾರೆ ಎಂದು ಸಂಸ್ಥೆಯ ಪ್ರಕಟನೆಯಲ್ಲಿ ತಿಳಿಸಲಾಗಿದೆ. 2024-25ನೇ...

ಬಂಟ್ವಾಳದ ಉಳಿ ಗ್ರಾಮದಲ್ಲಿ ಮತದಾರರ ಮನೆಗೆ ಭೇಟಿ ನೀಡಿ ಮತಯಾಚನೆ ನಡೆಸಿದ ಶಾಸಕ ರಾಜೇಶ್ ನಾಯ್ಕ್

ಲೋಕ ಸಭಾ ಚುನಾವಣೆಯ ಹಿನ್ನಲೆಯಲ್ಲಿ ಕ್ಯಾ.ಬ್ರಿಜೇಶ್ ಚೌಟ ಅವರ ಗೆಲುವಿಗಾಗಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರ ಗ್ರಾಮ,ಮನೆ,ಮನ ಅಭಿಯಾನದ ಅಂಗವಾಗಿ ಬಂಟ್ವಾಳದ ಉಳಿ ಗ್ರಾಮದಲ್ಲಿ ಮತದಾರರ ಮನೆಗೆ ಬೇಟಿ ನೀಡಿ...

ವಿಟ್ಲ ಕೇಂದ್ರ ಜುಮಾ ಮಸೀದಿ, ಈದುಲ್ ಫಿತರ್

ವಿಟ್ಲ; ವಿಟ್ಲ ಕೇಂದ್ರ ಜುಮಾ ಮಸೀದಿಯಲ್ಲಿ ಈದುಲ್ ಫಿತರ್ ನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಖತೀಬ್ ಮಹಮ್ಮದ್ ನಸೀಹ್ ದಾರಿಮಿ ಉಸ್ತಾದ್ ರವರು ಖುತುಬಾ ಹಾಗೂ ಈದ್ ನಮಾಝ್ ನಿರ್ವಹಿಸಿದರು. ಈದ್ ಸಂಸೇಶ ನೀಡಿದ ಖತೀಬರು "...

ನೋಟ ಮತದಾನ ಅಭಿಯಾನ ಮಾಡುವವರ ವಿರುದ್ಧ ಕಾನೂನು ಕ್ರಮಕ್ಕೆ ತಾ.ಪಂ.ಸದಸ್ಯ ಪ್ರಭಾಕರ್ ಪ್ರಭು ಒತ್ತಾಯ…

ನೋಟ (NOTA) ಮತದಾನ ಅಭಿಯಾನ ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಮಾಜಿ ತಾ.ಪಂ‌.ಸದಸ್ಯ ಪ್ರಭಾಕರ್ ಪ್ರಭು ಜಿಲ್ಲಾಧಿಕಾರಿಗೆ ಮನವಿ ಮಾಡಿದ್ದಾರೆ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕೆಲವೊಂದು ವ್ಯಕ್ತಿಗಳು ಮತ್ತು ಸಂಘಟನೆಗಳು...