ಉಪ್ಪಿನಂಗಡಿ: ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಪರಿಣಾಮ ಸುಮಾರು 10ಕ್ಕೂ ಅಧಿಕ ಮಂದಿ ಗಾಯಗೊಂಡ ಘಟನೆ ನೆಲ್ಯಾಡಿ ಬಳಿ ನಡೆದಿದೆ.
ಬೆಂಗಳೂರಿನಿಂದ ಮಂಗಳೂರು ಮೂಲಕವಾಗಿ ಕುಮಟಾಕ್ಕೆ ತೆರಳುತ್ತಿದ್ದ ಖಾಸಗಿ ಬಸ್, ಚಾಲಕನ ನಿಯಂತ್ರಣ ತಪ್ಪಿ ನೆಲ್ಯಾಡಿಯ ಮಣ್ಣಗುಂಡಿ ಬಳಿ ಪಲ್ಟಿಯಾಗಿದೆ.
ಘಟನೆಯಿಂದ ಗಂಭೀರ ಗಾಯಗೊಂಡ ಇಬ್ಬರನ್ನು ಪುತ್ತೂರಿಗೆ ಹಾಗೂ ಮತ್ತಿಬ್ಬರನ್ನು ಮಂಗಳೂರಿಗೆ ಚಿಕಿತ್ಸೆಗೆಂದು ಕರೆದೊಯ್ಯಲಾಗಿದೆ. ಸಣ್ಣಪುಟ್ಟ ಗಾಯಗೊಂಡವರು ನೆಲ್ಯಾಡಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ಬರಬೇಕಾಗಿದೆ.