Saturday, April 13, 2024

“ಕಾಡಾನೆ ಸೆರೆ’ ಕಾರ್ಯಾಚರಣೆ ಸ್ಥಗಿತ.. ಗ್ರಾಮಸ್ಥರಿಂದ ಆಕ್ರೋಶ

ಕಡಬ: ಕಾಡಾನೆ ಅಟ್ಟಹಾಸ ಮೆರೆದು ಎರಡು ಜೀವಗಳನ್ನು ಬಲಿ ಪಡೆದ ಬೆನ್ನಲ್ಲೇ ಕಾಡಾನೆಗಳನ್ನು ಸೆರೆ ಹಿಡಿಯಲು ಕಡಬ ಭಾಗದಲ್ಲಿ ಆರಂಭಗೊಂಡಿದ್ದ “ಕಾಡಾನೆ ಸೆರೆ’ ಕಾರ್ಯಾಚರಣೆ ಇದೀಗ ಸ್ಥಗಿತಗೊಂಡಿದೆ ಎನ್ನಲಾಗಿದೆ.

ರೆಂಜಿಲಾಡಿ ಘಟನೆಯಿಂದ ಆಕ್ರೋಶಗೊಂಡಿದ್ದ ಸ್ಥಳೀಯರು ಕಾಡಾನೆಗಳ ಹಾವಳಿಯನ್ನು ತಡೆಯಲು ಕ್ರಮ ಕೈಗೊಳ್ಳಬೇಕು ಎಂದು ಪಟ್ಟುಹಿಡಿದಿದ್ದ ಹಿನ್ನೆಲೆಯಲ್ಲಿ ಕಾಡಾನೆ ಸೆರೆಗೆ 5 ಆನೆಗಳನ್ನು ಕರೆಸಿ ಕಾರ್ಯಾಚರಣೆಯನ್ನು ಆರಂಭಿಸಲಾಗಿತ್ತು. ಮೂರು ದಿನಗಳ ಕಾರ್ಯಾಚರಣೆ ನಡೆದು ಫೆ.23ರಂದು ಮಂಡೆಕರ ಬಳಿಯ ಅರಣ್ಯದಲ್ಲಿ ಒಂದು ಕಾಡಾನೆಯನ್ನು ಸೆರೆ ಹಿಡಿದು ಎರಡು ಸಾಕಾನೆಗಳ ಜತೆ ನಾಗರಹೊಳೆಯ ಮತ್ತಿಗೋಡು ಆನೆ ಶಿಬಿರಕ್ಕೆ ಸ್ಥಳಾಂತರಿಸಲಾಗಿತ್ತು. ಉಳಿದ 3 ಆನೆಗಳು ನೆಟ್ಟಣದ ಅರಣ್ಯ ಇಲಾಖೆಯ ಡಿಪೋ ಆವರಣದಲ್ಲಿ ವಿಶ್ರಾಂತಿ ಪಡೆಯುತ್ತಿತ್ತು. ಇದೀಗ ಉಳಿದ ಮೂರು ಆನೆಗಳನ್ನು ಫೆ.26ರ ರಾತ್ರಿ ಕೊಂಡೊಯ್ಯಲಾಗಿದೆ.

“ಕಾಡಾನೆ ಸೆರೆ’ ಕಾರ್ಯಾ ಚರಣೆಗೆಯನ್ನು ಸ್ಥಗಿತಗೊಳಿಸಿರುವುದಕ್ಕೆ ಸ್ಥಳೀಯ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆನೆಗಳು ನೂಜಿಬಾಳ್ತಿಲ, ರೆಂಜಿಲಾಡಿ, ಕೊಣಾಜೆ, ಕೊಂಬಾರು, ಸಿರಿಬಾಗಿಲು ಮುಂತಾದ ಪ್ರದೇಶದಲ್ಲಿ ರೈತರ ಜಮೀನುಗಳಿಗೆ ಬಂದು ಕೃಷಿ ನಾಶ ಮಾಡುತ್ತಲೇ ಇದೆ. ನಾವು ಜೀವ ಭಯದಿಂದಲೇ ಬದುಕುವಂತಾಗಿದೆ. ನಮ್ಮ ಅಳಲನ್ನು ಕೇಳುವವರು ಯಾರೂ ಇಲ್ಲ. ಇಲಾಖೆಯವರು ನರಹಂತಕ ಎಂದು ಒಂದು ಆನೆಯನ್ನು ಹಿಡಿದು ಸಾಗಿಸಿದ್ದಾರೆ. ಉಳಿದ ಆನೆಗಳು ಜನವಸತಿ ಪ್ರದೇಶಗಳಲ್ಲಿ ಆಗಾಗ್ಗೆ ಕಾಣಿಸಿಕೊಳ್ಳುತ್ತಿವೆ. ಉಪಟಳ ನೀಡುವ ಆನೆಗಳನ್ನು ಹಿಡಿಯಲಾಗುವುದು ಎಂದು ಸ್ವತಃ ಜಿಲ್ಲಾಧಿಕಾರಿಗಳೇ ಹೇಳಿಕೆ ನೀಡಿದ್ದರು. ಆದರೆ ಇದೀಗ ಏಕಾಏಕಿ ಕಾರ್ಯಾಚರಣೆ ಸ್ಥಗಿತಗೊಂಡಿದೆ ಎಂದು ಜನರು ಆಳಲು ತೋಡಿಕೊಳ್ಳುತ್ತಿದ್ದಾರೆ.

[

More from the blog

ಮಯ್ಯರಬೈಲು: ಏ.14 ರಂದು ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಯುಗಾದಿ ಉತ್ಸವ ಕಾರ್ಯಕ್ರಮ

ಮಾತೃಭೂಮಿ ಯುವ ಬಳಗ ಹಾಗೂ ಮಾತೃಭೂಮಿ ಮಹಿಳಾ ಮಂಡಳಿ ಮಯ್ಯರಬೈಲು ಇವರ ಜಂಟಿ ಅಶ್ರಯದಲ್ಲಿ ಚತುರ್ಥ ವರ್ಷದ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಯುಗಾದಿ ಉತ್ಸವ ಕಾರ್ಯಕ್ರಮ ಏ.14 ರಂದು ಮಯ್ಯರಬೈಲಿನಲ್ಲಿ...

ಇಂದಿನಿಂದ ಅಂಚೆ ಮತದಾನ ಪ್ರಾರಂಭ

ಇಂದಿನಿಂದ 85 ವರ್ಷ ಮೇಲ್ಪಟ್ಟ ಹಾಗೂ ವಿಶೇಷ ಚೇತನರಿಂದ ಅಂಚೆ ಮತದಾನ ನಡೆಯಲಿದೆ. ಏಪ್ರಿಲ್ 18ರವರೆಗೆ ಮನೆಯಿಂದಲೇ ಗೌಪ್ಯ ಮತದಾನಕ್ಕೆ ಅವಕಾಶ ಮಾಡಲಾಗಿದೆ. ಇಂದಿನಿಂದ ಏಪ್ರಿಲ್ 18ರವರೆಗೆ ಮನೆಯಿಂದಲೇ ಗೌಪ್ಯ ಮತದಾನಕ್ಕೆ ಅವಕಾಶವಿದೆ. ಬೆಂಗಳೂರು...

ಕುಮಾರಧಾರಾ ನದಿಯಲ್ಲಿ ಮೊಸಳೆ ಮೃತದೇಹ ಪತ್ತೆ

ಸುಬ್ರಹ್ಮಣ್ಯ: ಕುಮಾರಧಾರಾ ನದಿಯ ಪಂಜ – ಕಡಬ ಸಂಪರ್ಕ ರಸ್ತೆಯಲ್ಲಿ ಸಿಗುವ ಪುಳಿಕುಕ್ಕು ಸೇತುವೆಯ ಕೆಳಭಾಗದಲ್ಲಿ ಮೊಸಳೆಯ ಮೃತದೇಹ ಪತ್ತೆಯಾಗಿದೆ. ಶುಕ್ರವಾರ ನದಿಯ ಒಂದು ಬದಿಯ ನೀರಿನಲ್ಲಿ ಅಂದಾಜು 1.5 – 2 ವರ್ಷದ ಮೊಸಳೆಯ...

ವಿದ್ಯಾರ್ಥಿಗಳಿಗೆ ಜೀವನ ಕೌಶಲ್ಯ ಮತ್ತು ಯುವ ಸ್ಪಂದನ ಸಮಾಲೋಚನೆ ಸೇವೆಗಳ ಕುರಿತು ಕಾರ್ಯಕ್ರಮ

ಸರಕಾರಿ ಪ್ರಥಮ ದರ್ಜೆ ಕಾಲೇಜು ಬಂಟ್ವಾಳ ಕಾಮಾಜೆ ಇಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜನ ಆರೋಗ್ಯ ಕೇಂದ್ರ ಎಪಿಡಿಮಿಯೋಲಜಿ ವಿಭಾಗ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರ ವಿಜ್ಞಾನ ಬೆಂಗಳೂರು,...