Wednesday, April 10, 2024

ಏ.1ರಿಂದ ಶಾಲಾ, ಕಾಲೇಜು ವಿದ್ಯಾರ್ಥಿನಿಯರಿಗೆ ಉಚಿತ ಬಸ್ ಪಾಸ್-ಸಿಎಂ ಬೊಮ್ಮಾಯಿ

ಬೆಂಗಳೂರು: ದುಡಿಯುವ ಹೆಣ್ಣು ಮಕ್ಕಳಿಗೆ ಹಾಗೂ ಶಾಲಾ, ಕಾಲೇಜು ವಿದ್ಯಾರ್ಥಿನಿಯರಿಗೆ ಏಪ್ರಿಲ್ 1ರಿಂದ ಉಚಿತ ಬಸ್ ಪಾಸ್ ವ್ಯವಸ್ಥೆ ಕಲ್ಪಿಸಲು ಎಲ್ಲ ಕ್ರಮ ಕೈಗೊಳ್ಳಬೇಕು ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಇಂದು ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ವೋಲ್ವೋ ಮಲ್ಟಿ ಆಕ್ಸೆಲ್ ಬಿಎಸ್ 4 -9600 ಸ್ಲೀಪರ್ ಬಸ್ಸುಗಳನ್ನು ಲೋಕಾರ್ಪಣೆ ಮಾಡಿ ಮಾತನಾಡಿದ ಅವರು, ಮಿನಿ ಸ್ಕೂಲ್ ಬಸ್ ಗಳನ್ನು ಪರಿಚಯಿಸಬೇಕು. ಇರುವ ಬಸ್ ಗಳ ಸಂಚಾರ ಆರಂಭ ಮಾಡಬೇಕು. ಶಾಲೆ ಆರಂಭವಾಗುವ ಸಂದರ್ಭದಲ್ಲಿ ಪ್ರತಿ ತಾಲೂಕಿನಲ್ಲಿ ಕನಿಷ್ಟ ಐದು ಬಸ್ ಸಂಚಾರ ಆರಂಭ ಮಾಡಬೇಕು. ಇನ್ನು ಆರ್ಥಿಕ ಬೆಳವಣಿಗೆಯಲ್ಲಿ ಸಂಚಾರ ಪ್ರಮುಖ ಪಾತ್ರ ವಹಿಸುತ್ತದೆ. ಅದಕ್ಕೆ ಸರ್ಕಾರ ಆದ್ಯತೆ ನೀಡಿದೆ. ಈ ಬಾರಿಯ ಬಜೆಟ್ ನಲ್ಲಿ ವಿದ್ಯಾರ್ಥಿನಿಯರಿಗೆ ಹಾಗೂ ದುಡಿಯುವ ಹೆಣ್ಣುಮಕ್ಕಳಿಗೆ ಉಚಿತ ಪಾಸ್ ನೀಡುವುದಾಗಿ ಘೋಷಣೆ ಮಾಡಿದ್ದು, ಸರ್ಕಾರ ನೌಕರ ವರ್ಗ ಹಾಗೂ ಆಡಳಿತ ಮಂಡಳಿ ಜೊತೆಗಿರುತ್ತದೆ ಎಂದು ಹೇಳಿದ್ದಾರೆ.

More from the blog

ಹಿತೈಷಿ ತರಬೇತಿ ಕೇಂದ್ರದ ಎಲ್ಲಾ ವಿದ್ಯಾರ್ಥಿಗಳು ಉತ್ತಮ ಫಲಿತಾಂಶದೊಂದಿಗೆ ತೇರ್ಗಡೆ

2023-24ನೇ ಸಾಲಿನ ದ್ವಿತೀಯ ಪಿ.ಯು.ಸಿ ಪರೀಕ್ಷೆಯಲ್ಲಿ ಪಾಣೆಮಂಗಳೂರು, ನರಿಕೊಂಬುವಿನಲ್ಲಿರುವ ಹಿತೈಷಿ ತರಬೇತಿ ಕೇಂದ್ರದ ಎಲ್ಲಾ ವಿದ್ಯಾರ್ಥಿಗಳು ಉತ್ತಮ ಅಂಕಗಳೊಂದಿಗೆ ತೇರ್ಗಡೆಯಾಗಿದ್ದಾರೆ. ಕು.ಕೀರ್ತನ ಶೇ.95.6% ಅಂಕಗಳೊಂದಿಗೆ ಅತ್ಯುತ್ತಮ ಶ್ರೇಣಿಯಲ್ಲಿ ತೇರ್ಗಡೆಯಾಗಿರುತ್ತಾರೆ ಎಂದು ಸಂಸ್ಥೆಯ ಪ್ರಕಟನೆಯಲ್ಲಿ ತಿಳಿಸಲಾಗಿದೆ. 2024-25ನೇ...

ಬಂಟ್ವಾಳದ ಉಳಿ ಗ್ರಾಮದಲ್ಲಿ ಮತದಾರರ ಮನೆಗೆ ಭೇಟಿ ನೀಡಿ ಮತಯಾಚನೆ ನಡೆಸಿದ ಶಾಸಕ ರಾಜೇಶ್ ನಾಯ್ಕ್

ಲೋಕ ಸಭಾ ಚುನಾವಣೆಯ ಹಿನ್ನಲೆಯಲ್ಲಿ ಕ್ಯಾ.ಬ್ರಿಜೇಶ್ ಚೌಟ ಅವರ ಗೆಲುವಿಗಾಗಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರ ಗ್ರಾಮ,ಮನೆ,ಮನ ಅಭಿಯಾನದ ಅಂಗವಾಗಿ ಬಂಟ್ವಾಳದ ಉಳಿ ಗ್ರಾಮದಲ್ಲಿ ಮತದಾರರ ಮನೆಗೆ ಬೇಟಿ ನೀಡಿ...

ವಿಟ್ಲ ಕೇಂದ್ರ ಜುಮಾ ಮಸೀದಿ, ಈದುಲ್ ಫಿತರ್

ವಿಟ್ಲ; ವಿಟ್ಲ ಕೇಂದ್ರ ಜುಮಾ ಮಸೀದಿಯಲ್ಲಿ ಈದುಲ್ ಫಿತರ್ ನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಖತೀಬ್ ಮಹಮ್ಮದ್ ನಸೀಹ್ ದಾರಿಮಿ ಉಸ್ತಾದ್ ರವರು ಖುತುಬಾ ಹಾಗೂ ಈದ್ ನಮಾಝ್ ನಿರ್ವಹಿಸಿದರು. ಈದ್ ಸಂಸೇಶ ನೀಡಿದ ಖತೀಬರು "...

ನೋಟ ಮತದಾನ ಅಭಿಯಾನ ಮಾಡುವವರ ವಿರುದ್ಧ ಕಾನೂನು ಕ್ರಮಕ್ಕೆ ತಾ.ಪಂ.ಸದಸ್ಯ ಪ್ರಭಾಕರ್ ಪ್ರಭು ಒತ್ತಾಯ…

ನೋಟ (NOTA) ಮತದಾನ ಅಭಿಯಾನ ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಮಾಜಿ ತಾ.ಪಂ‌.ಸದಸ್ಯ ಪ್ರಭಾಕರ್ ಪ್ರಭು ಜಿಲ್ಲಾಧಿಕಾರಿಗೆ ಮನವಿ ಮಾಡಿದ್ದಾರೆ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕೆಲವೊಂದು ವ್ಯಕ್ತಿಗಳು ಮತ್ತು ಸಂಘಟನೆಗಳು...