Friday, April 5, 2024

ಶ್ರೀ ಧಾಮ ಮಾಣಿಲ ಶ್ರೀ ಮಹಾಲಕ್ಷ್ಮೀ ಕ್ಷೇತ್ರದಲ್ಲಿ ಪ್ರತಿಷ್ಠಾ ವರ್ಧಂತ್ಯುತ್ಸವ

ವಿಟ್ಲ: ಶ್ರೀ ಧಾಮ ಮಾಣಿಲ ಶ್ರೀ ಮಹಾಲಕ್ಷ್ಮೀ ಕ್ಷೇತ್ರದಲ್ಲಿ ಪ್ರತಿಷ್ಠಾ ವರ್ಧಂತ್ಯುತ್ಸವ ನಡೆಯಿತು.

ಧಾರ್ಮಿಕ ಸಭೆಯಲ್ಲಿ ಆಶೀರ್ವಚನ ನೀಡಿದ ಮಾಣಿಲ ಶ್ರೀ ಮಹಾಲಕ್ಷ್ಮೀ ಕ್ಷೇತ್ರದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಯಾಂತ್ರಿಕ ಬದುಕಿನ ಸೋಗಿನಲ್ಲಿ ಮನಸ್ಸು ವಿಚಲಿತಗೊಳ್ಳುವ ಸನ್ನಿವೇಶ ಬಂದಿದೆ. ದೇಗುಲ, ಭಜನಾ ಮಂದಿರಗಳು ಪುಣ್ಯ ಸಂಚಯನ ಕ್ಷೇತ್ರಗಳು. ಇತರರ ಒಳಿತಿಗಾಗಿ ಪ್ರಾರ್ಥಿಸಬೇಕು. ದೇವಸ್ಥಾನದಲ್ಲಿ ಪಾವಿತ್ರ್ಯತೆ ಉಳಿಸಿಕೊಳ್ಳಬೇಕು. ಎಲ್ಲರನ್ನೂ ಪ್ರೀತಿಸಬೇಕು. ಪ್ರಾಣಿ ಪಕ್ಷಿಗಳನ್ನು ವೃಕ್ಷಗಳನ್ನು ಪ್ರೀತಿಸಬೇಕು. ಸಂತರಿಗೆ ಆಸೆ ಆಕಾಂಕ್ಷೆಗಳಿಲ್ಲ. ನಿರೀಕ್ಷೆಗಳಿಲ್ಲ. ದೇಹಕ್ಕೆ ದಣಿವಿಲ್ಲ. ಸಮಾಜದಲ್ಲಿ ಜಾತಿ ಸಂಘರ್ಷ ನಡೆಯುತ್ತಿರುವುದು ದುರಂತ ಎಂದರು.

 

ಚಿಕ್ಕಮಗಳೂರಿನ ಶ್ರೀ ಸತ್ಯಶನೀಶ್ವರ ಕ್ಷೇತ್ರದ ಶ್ರೀ ಚಿದಾನಂದ ಗುರೂಜಿ, ಉದ್ಯಮಿಗಳಾದ ಬೆಂಗಳೂರಿನ ಸೌಂದರ್ಯ ರಮೇಶ್, ಬೆಂಗಳೂರಿನ ಲಕ್ಷ್ಮಣ ಗೌಡ, ಭಾಸ್ಕರ ಶೆಟ್ಟಿ ಪುಣೆ, ಅಳಿಕೆ ನಾಗಬ್ರಹ್ಮ ಕ್ಷೇತ್ರದ ಟ್ರಸ್ಟಿ ಕೃಷ್ಣ ಪ್ರಸಾದ್ ಮಂಗಳೂರು, ಸಮಾಜ ಸೇವಕ ರಾಮಣ್ಣ ಉಪ್ಪಿನಂಗಡಿ, ಉಡುಪಿ ನಿತ್ಯಾನಂದ ಮಠದ ಮಹಾಬಲ ಕುಂದರ್, ಕಾಸರಗೋಡು ಜಿ.ಪಂ. ಸದಸ್ಯೆ ಕಮಲಾಕ್ಷಿ ವಿನೋದ್‌ ವರ್ಕಾಡಿ ಮೊದಲಾದವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

More from the blog

ಸೌಜನ್ಯ ಹೋರಾಟ ಸಮಿತಿಯಿಂದ ನೋಟ ಅಭಿಯಾನ

ಮಂಗಳೂರು: ರಾಜಕೀಯ ಪಕ್ಷಗಳು ಮತ್ತು ನ್ಯಾಯಾಂಗ ವ್ಯವಸ್ಥೆಯ ಗಮನ ಸೆಳೆಯುವ ಉದ್ದೇಶದಿಂದ ಸೌಜನ್ಯ ಪರ ಹೋರಾಟ ಸಮಿತಿ ವತಿಯಿಂದ ಮುಂಬರುವ‌ ಲೋಕಸಭಾ ಚುನಾವಣೆಯಲ್ಲಿ ನೋಟಕ್ಕೆ ಮತ ಚಲಾಯಿಸಲು ಜನ ಸಾಮಾನ್ಯರನ್ನು ಪ್ರೇರೇಪಿಸಲು ನೋಟ...

ಕಲ್ಲಡ್ಕ ಶ್ರೀರಾಮ ಭಜನಾ ಮಂದಿರಕ್ಕೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಭೇಟಿ

ಬಂಟ್ವಾಳ ತಾಲೂಕಿನ ಶಕ್ತಿಕೇಂದ್ರವಾದ ಕಲ್ಲಡ್ಕ ಶ್ರೀರಾಮ ಭಜನಾ ಮಂದಿರಕ್ಕೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಆಗಮಿಸಿ ಪ್ರಾರ್ಥನೆ ಸಲ್ಲಿಸಿ ಪ್ರಸಾದ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಕಲ್ಲಡ್ಕ ಡಾ| ಪ್ರಭಾಕರ್ ಭಟ್ ಬಿಜೆಪಿ...

ಬೆಳ್ತಂಗಡಿ: ಆನ್ ಲೈನ್ ಮೂಲಕ ಸಾಲ ನೀಡುವುದಾಗಿ ನಂಬಿಸಿ ವಂಚನೆ : ದೂರು ದಾಖಲು

ಬೆಳ್ತಂಗಡಿ: ಮಹಿಳೆಯೊಬ್ಬರಿಗೆ ಫೇಸ್‌ಬುಕ್‌ ಆಪ್‌ ಮೂಲಕ ಸಾಲ ನೀಡುವುದಾಗಿ ಅಪರಿಚಿತರರು ನಂಬಿಸಿ ವಂಚನೆ ಮಾಡಿದ ಘಟನೆ ಬೆಳ್ತಂಗಡಿ ತಾಲೂಕಿನ ತೆಂಕಕಾರಂದೂರು ಗ್ರಾಮದಲ್ಲಿ ನಡೆದಿದೆ. ವಂಚನೆಗೊಳಗಾದ ಮಹಿಳೆ ನೆಬಿಸಾ ಅವರು ಈ ಬಗ್ಗೆ ವೇಣೂರು ಪೋಲಿಸ್‌...

ಕುಕ್ಕಾಜೆ ಜಂಕ್ಷನ್ ನ ಬ್ಲೀಸ್ ಫುಲ್ ಆರ್ಕೆಡ್ ನಲ್ಲಿ ನೂತನ ಶುದ್ಧ ಸಸ್ಯಹಾರಿ ಫ್ಯಾಮಿಲಿ ರೆಸ್ಟೋರೆಂಟ್ “ಹೋಟೆಲ್ ಅನ್ನಪೂರ್ಣ” ಶುಭಾರಂಭ

ಬಂಟ್ವಾಳ ತಾಲೂಕಿನ ಕುಕ್ಕಾಜೆ ಜಂಕ್ಷನ್ ನ ಬ್ಲೀಸ್ ಫುಲ್ ಆರ್ಕೆಡ್ ನಲ್ಲಿ ಅರುಣ್ ಕುಮಾರ್, ಮಹೇಶ್ ಕುಮಾರ್, ಜನಾರ್ಧನ್ ಪೊಸೊಳಿಗೆ ಮಾಲಕತ್ವದ ನೂತನ ಶುದ್ಧ ಸಸ್ಯಹಾರಿ ಫ್ಯಾಮಿಲಿ ರೆಸ್ಟೋರೆಂಟ್. "ಹೋಟೆಲ್ ಅನ್ನಪೂರ್ಣ" ಶುಭಾರಂಭಗೊಂಡಿತು. ಶ್ರೀ...