ಬಂಟ್ವಾಳ: ಬಾರಿ ಕುತೂಹಲಕ್ಕೆ ಕಾರಣವಾಗಿದ್ದ ಪುದು ಗ್ರಾ.ಪಂ.ಚುನಾವಣೆಯ ಮತ ಎಣಿಕೆ ಪೂರ್ಣಗೊಂಡಿದ್ದು, ಮತ್ತೊಮ್ಮೆ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಅತೀ ಹೆಚ್ಚು ಸದಸ್ಯ ಸ್ಥಾನವನ್ನು ಪಡೆಯುವ ಮೂಲಕ ಅಧಿಕಾರ ಪಡೆಯಲು ಮುಂದಾಗಿದೆ.
21 ಸದಸ್ಯ ಸ್ಥಾನವನ್ನು ಕಾಂಗ್ರೆಸ್ ಬೆಂಬಲಿತರು ಪಡೆದುಕೊಂಡರೆ ಎಸ್.ಡಿ.ಪಿ.ಐ. ಬೆಂಬಲಿತ 7 ಸದಸ್ಯರನ್ನು ಪಡೆದು ಕೊಂಡರೆ, ಬಿಜೆಪಿ ಬೆಂಬಲಿತ 6 ಸದಸ್ಯ ಸ್ಥಾನವನ್ನು ಪಡೆದಕೊಂಡಿದೆ.
ಕಳೆದ ಬಾರಿ 27 ಸದಸ್ಯ ರನ್ಹು ಪಡೆದುಕೊಂಡಿದ್ದ ಕಾಂಗ್ರೆಸ್ ಪಕ್ಷ ಈ ಬಾರಿ ಆರು ಸ್ಥಾನವನ್ನು ಕಳೆದುಕೊಂಡಿದೆ.
ಅ ಮೂಲಕ ಕಾಂಗ್ರೆಸ್ ಗೆ ಪರೋಕ್ಷವಾಗಿ ತನ್ನ ಪ್ರಭಾವವನ್ನು ತೋರಿಸಿದ ಎಸ್.ಡಿ.ಪಿ.ಐ. ಒಂದರಿಂದ 7 ಕ್ಕೆರಿದ್ದು ಆರು ಸ್ಥಾನವನ್ನು ಹೆಚ್ಚಿಸಿಕೊಂಡಿದೆ .
ಬಿಜೆಪಿ ಯಥಾ ಸ್ಥಿತಿಯನ್ನು ಕಾಯ್ದುಕೊಂಡು ಆರಕ್ಕೆ ತೃಪ್ತಿಪಡೆದುಕೊಂಡಿದೆ. ಫೆ. 25 ಒಟ್ಟು 10 ವಾರ್ಡ್ ಗಳಲ್ಲಿ 34 ಸ್ಥಾನಗಳಿಗೆ ಚುನಾವಣೆ ನಡೆದಿತ್ತು. ಒಟ್ಟು 99 ಅಭ್ಯರ್ಥಿಗಳು ಕಣದಲ್ಲಿದ್ದರು.