ಮಂಗಳೂರು: ತಮಿಳು ಚಿತ್ರರಂಗದ ‘ಸೂಪರ್ ಸ್ಟಾರ್’ ರಜನಿಕಾಂತ್ ಅವರು ಮಂಗಳೂರಿಗೆ ಆಗಮಿಸಿದ್ದಾರೆ.
ನಿನ್ನೆ ರಾತ್ರಿ 9 ಗಂಟೆ ಸುಮಾರಿಗೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಅವರು ಅಲ್ಲಿಂದ ಅಭಿಮಾನಿಗಳಿಗೆ ಕೈಬೀಸುತ್ತಾ ಖಾಸಗಿ ಕಾರಿನಲ್ಲಿ ಅಜ್ಞಾತ ಸ್ಥಳಕ್ಕೆ ತೆರಳಿದ್ದಾರೆ.
ಸಿನೆಮಾ ಚಿತ್ರೀಕರಣಕ್ಕಾಗಿ ಅವರು ಮಂಗಳೂರಿಗೆ ಆಗಮಿಸಿದ್ದು, ಈ ಸಿನೆಮಾ ತಂಡದ ಜೊತೆ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಕೂಡಾ ಸೇರಿಕೊಂಡಿದ್ದಾರೆ.
ಇನ್ನು ಪಿಲಿಕುಳದ ಗುತ್ತಿನಮನೆಯಲ್ಲಿ ಸಿನೆಮಾ ಚಿತ್ರೀಕರಣ ನಡೆಯಲಿದೆ ಎಂದು ತಿಳಿದುಬಂದಿದೆ.