ಬಂಟ್ವಾಳ: ಪುದು ಗ್ರಾಮ ಪಂಚಾಯಿತಿ ಚುನಾವಣಾ ಮತ ಎಣಿಕೆ ಮತ್ತು ಫಲಿತಾಂಶ ಹಿನ್ನೆಲೆಯಲ್ಲಿ ಸೆಕ್ಷನ್ 144ರನ್ವಯ ಪುದು ಗ್ರಾಪಂ ವ್ಯಾಪ್ತಿಯಲ್ಲಿ ಫೆ.28ರ ಮಧ್ಯಾಹ್ನ 12 ಗಂಟೆಯಿಂದ ರಾತ್ರಿ 12 ಗಂಟೆವರೆಗೆ ನಿಷೇಧಾಜ್ಞೆ ಜಾರಿಗೊಳಿಸಿ ತಹಸೀಲ್ದಾರ್ ಕೆ.ಎಸ್. ದಯಾನಂದ ಆದೇಶ ಹೊರಡಿಸಿದ್ದಾರೆ.
ಈ ಅವಧಿಯಲ್ಲಿ ಸಾರ್ವಜನಿಕರು ಐದು ಅಥವಾ ಅದಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕ ಸ್ಥಳದಲ್ಲಿ ಗುಂಪುಗೂಡುವುದು, ಆಯುಧ ಹೊಂದುವುದು, ಮೆರವಣಿಗೆ, ಸಾರ್ವಜನಿಕ ಸಭೆ ಸಮಾರಂಭ ಏರ್ಪಡಿಸುವುದು, ಸ್ಫೋಟಕ ವಸ್ತು ಹೊಂದುವುದು, ಕಲ್ಲುಗಳನ್ನು ಒಟ್ಟುಗೂಡಿಸುವುದು, ಕೋಮು ಸೌಹಾರ್ದಕ್ಕೆ ಧಕ್ಕೆ ಬರುವ ಕೂಗು ಉಚ್ಛರಿಸುವುದು, ಪದ, ಚೇಷ್ಟೆ ಮಾಡುವುದು, ಸಂಜ್ಞೆ ಉಪಯೋಗಿಸುವುದು, ಭಿತ್ತಿಪತ್ರ ಅಂಟಿಸುವುದೇ ಮೊದಲಾದ ಕೃತ್ಯಗಳನ್ನು ಎಸಗುವ ಕ್ರಮಗಳನ್ನು ನಿಷೇಧಿಸಲಾಗಿದೆ