Saturday, April 6, 2024

ಮೆಲ್ಕಾರ್ ಜಂಕ್ಷನ್‌ನಿಂದ ಮುಡಿಪು ರಸ್ತೆಯ ಇಕ್ಕೆಲಗಳ ಅನಧಿಕೃತ ಅಂಗಡಿಗಳು ಜಿಲ್ಲಾಧಿಕಾರಿಗಳ ಆದೇಶದಂತೆ ತೆರವು

ಬಂಟ್ವಾಳ: ಮೆಲ್ಕಾರ್ ಜಂಕ್ಷನ್‌ನಿಂದ ಮುಡಿಪು ರಸ್ತೆಯ ಇಕ್ಕೆಲಗಳಲ್ಲಿ ಅನಧಿಕೃತವಾಗಿ ಇಟ್ಟಿದ್ದ ಅಂಗಡಿಗಳನ್ನು ಪುರಸಭಾ ಅಧಿಕಾರಿಗಳು ದ.ಕ.ಜಿಲ್ಲಾಧಿಕಾರಿಗಳ ಆದೇಶದಂತೆ ಕಾರ್ಯಾಚರಣೆಯ ನಡೆಸಿ ತೆರವು ಮಾಡಿದ್ದಾರೆ.

ಪುರಸಭೆಯ ಮುಖ್ಯಾಧಿಕಾರಿ ಸ್ವಾಮಿ ಎಂ.ಆರ್., ಕಂದಾಯ ಅಧಿಕಾರಿ ಗೋಪಾಲಕೃಷ್ಣ ಶೆಟ್ಟಿ ಅವರ ನೇತೃತ್ವದ ನಿಯೋಗ ತೆರವು ಕಾರ್ಯ ನಡೆಸಿದೆ. ಪುರಸಭಾ ಎಂಜಿನಿಯರ್ ಡೊಮಿನಿಕ್ ಡಿಮೆಲ್ಲೊ, ಸಮುದಾಯ ಸಂಘಟಕಿ ಉಮಾವತಿ ಹಾಗೂ ಸಿಬಂದಿ, ಲೋಕೋಪಯೋಗಿ ಇಲಾಖೆ ಅಧಿಝೆಡ್ಕಾರಿಗಳು ಉಪಸ್ಥಿತರಿದ್ದರು.

ರಸ್ತೆಯ ಎರಡೂ ಬದಿಯ ಪುಟ್‌ಪಾತ್‌ನಲ್ಲಿ ಅನಧಿಕೃತವಾಗಿ ನಿರ್ಮಿಸಿದ್ದ ಅಂಗಡಿಗಳ ಮೂಲಕ ತರಕಾರಿ, ಹಣ್ಣು ಹಂಪಲು, ಮೀನು, ಕೋಳಿ ವ್ಯಾಪಾರ, ಕ್ಯಾಂಟೀನ್, ಗೂಡಂಗಡಿಗಳಿಂದ ಸಾರ್ವಜನಿಕರು ಹಾಗೂ ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿರುವ ಕುರಿತು ಸಾರ್ವಜನಿಕರು ಜಿಲ್ಲಾಧಿಕಾರಿಗಳಿಗೆ ದೂರು ನೀಡಿದ್ದರು. ಹೀಗಾಗಿ ಇವುಗಳ ತೆರವಿಗೆ ಕ್ರಮಕೈಗೊಳ್ಳಲು ಡಿಸಿಯವರು ಪುರಸಭೆಗೆ ಆದೇಶಿಸಿದ್ದರು.

More from the blog

ಬಂಟ್ವಾಳ: ನಿಯಮ ಮೀರಿ ಚಾಲನೆ ಮಾಡಿ ಪೋಲೀಸರ ಕೈಗೆ ಸಿಕ್ಕಿಬಿದ್ದರೆ ದಂಡ ಗ್ಯಾರಂಟಿ….

ಬಂಟ್ವಾಳ: ರಸ್ತೆಯಲ್ಲಿ ಟ್ರಾಫಿಕ್ ಪೋಲೀಸರು ದಂಡ ವಸೂಲಿ ಮಾಡುವ ವೇಳೆ ಸುಳ್ಳು ಹೇಳಿಬಚಾವಾಗಲು ಸಾಧ್ಯವಿಲ್ಲ, ಜೊತೆಗೆ ಅಸಭ್ಯ ವರ್ತನೆ ಮಾಡಿದರೆ ಜೋಕೆ, ಅವರ ಶರೀರದಲ್ಲಿ ಕಣ್ಗಾವಲು ಕ್ಯಾಮರಾ ಅಳವಡಿಸಿಲಾಗಿದ್ದು, ಸೂಕ್ಷ್ಮವಾಗಿ ಎಲ್ಲವನ್ನು ಸೆರೆ...

ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ : ಚೆಂಡಿನ ಗದ್ದೆಯಲ್ಲಿ ಪ್ರಥಮ ಚೆಂಡು

ಇತಿಹಾಸ ಪ್ರಸಿದ್ಧ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಅಂಗವಾಗಿ ದೇವಳದ ಚೆಂಡಿನ ಗದ್ದೆಯಲ್ಲಿ ಇಂದು ಪ್ರಥಮ ಚೆಂಡು ನಡೆಯಿತು. ‌ ಇವತ್ತಿನಿಂದ ಮುಂದಿನ ಐದು ದಿನಗಳ ಕಾಲ ಇಲ್ಲಿ ಚೆಂಡು...

ಏಪ್ರಿಲ್ 7ರಂದು ಕರ್ನಾಟಕ ಜಾನಪದ ಪರಿಷತ್ತು ದ.ಕ.ಜಿಲ್ಲಾ ಬಂಟ್ವಾಳ ತಾಲೂಕು ಘಟಕದ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭ

ಬಂಟ್ವಾಳ: ಏಪ್ರಿಲ್ 7ರಂದು ಅಪರಾಹ್ನ 3 ಗಂಟೆಗೆ ಬಿ.ಸಿ.ರೋಡು ರಂಗೋಲಿ ಸಭಾಂಗಣದಲ್ಲಿ ಕರ್ನಾಟಕ ಜಾನಪದ ಪರಿಷತ್ತು ದ.ಕ.ಜಿಲ್ಲಾ ಬಂಟ್ವಾಳ ತಾಲೂಕು ಘಟಕದ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭ ನಡೆಯಲಿದೆ ಎಂದು ತಾಲೂಕು ಘಟಕದ...

ದ್ವಿಚಕ್ರ ವಾಹನಕ್ಕೆ ರಿಕ್ಷಾ ಡಿಕ್ಕಿ : ಸಹಸವಾರ ಸ್ಥಳದಲ್ಲೇ ಮೃತ್ಯು

ಬಂಟ್ವಾಳ: ರಿಕ್ಷಾ ಡಿಕ್ಕಿಯಾಗಿ ದ್ವಿಚಕ್ರ ವಾಹನದಲ್ಲಿ ಸಂಚಾರ ಮಾಡುತ್ತಿದ್ದ ಸಹಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನರಿಕೊಂಬು ಎಂಬಲ್ಲಿ ನಡೆದಿದೆ. ನರಿಕೊಂಬು ನಿವಾಸಿ ನೀಲಪ್ಪ ಪೂಜಾರಿ ಅವರ ಮಗ ಪವನ್ ( 17) ಮೃತಪಟ್ಟ ಬಾಲಕ. ಮನೆಯಿಂದ...