Friday, April 12, 2024

ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ : ದ.ಕ., ಉಡುಪಿಯಿಂದ 49,975 ಮಂದಿ ಪರೀಕ್ಷೆಗೆ

ಮಂಗಳೂರು/ಉಡುಪಿ: ರಾಜ್ಯಾದ್ಯಂತ ಇಂದಿನಿಂದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಆರಂಭವಾಗಿದ್ದು, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 49,975 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.

ಬೆಳಗ್ಗೆ 10.30ರಿಂದ ಪರೀಕ್ಷೆಗಳು ಆರಂಭವಾಗಲಿದ್ದು, ಮಧ್ಯಾಹ್ನ 1.30ರ ತನಕ ನಡೆಯಲಿದೆ. ಪರೀಕ್ಷೆಗಳಲ್ಲಿ ಯಾವುದೇ ಗೊಂದಲಗಳಾಗದಂತೆ ಪಾರದರ್ಶಕವಾಗಿ ನಡೆಯಲು ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿಯೂ ಸಿಸಿ ಕ್ಯಾಮರಾ ಮೂಲಕ ನಿಗಾ ಇಡುವ ಪ್ರಕ್ರಿಯೆ ನಡೆಯಲಿದೆ. ಪ್ರತೀ ಕೊಠಡಿಗಳಲ್ಲಿ ನೀರಿನ ವ್ಯವಸ್ಥೆ ಮಾಡಲಾಗಿದ್ದು, ಮೇಲ್ವಿಚಾರಕರ ಅನುಮತಿಯೊಂದಿಗೆ ನೀರು ಪಡೆದು ಕುಡಿಯಲು ಅವಕಾಶ ಕಲ್ಪಿಸಲಾಗಿದೆ. ವಿದ್ಯಾರ್ಥಿಗಳು, ನಿಯೋಜಿತ ಸಿಬಂದಿ ಹೊರತುಪಡಿಸಿ ಹೊರಗಿನವರಿಗೆ ಪರೀಕ್ಷಾ ಕೇಂದ್ರದೊಳಗೆ ಪ್ರವೇಶ ನಿರ್ಬಂಧಿಸಲಾಗಿದೆ. ಪರೀಕ್ಷಾ ಕೇಂದ್ರಗಳ ಸುತ್ತಲೂ ಪೊಲೀಸ್ ಬಿಗಿ ಬಂದೋಬಸ್ತ್ ಇದ್ದು, ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ದ.ಕ. ಜಿಲ್ಲೆಯಲ್ಲಿ ಒಟ್ಟು 52 ಪರೀಕ್ಷಾ ಕೇಂದ್ರಗಳಿದ್ದು, ಈ ಪೈಕಿ ಮಂಗಳೂರು, ಮೂಡುಬಿದಿರೆ, ಮೂಲ್ಕಿ, ಉಳ್ಳಾಲದಲ್ಲಿ 28 ಪರೀಕ್ಷಾ ಕೇಂದ್ರಗಳಿವೆ. ಪ್ರತಿ ಕೊಠಡಿಯಲ್ಲಿ ಗರಿಷ್ಠ30 ಕನಿಷ್ಠ20 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಅವಕಾಶವಿದೆ. ಜಿಲ್ಲೆಯಲ್ಲಿ ಒಟ್ಟು 34340 ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದು, ಈ ಪೈಕಿ 31222 ಮಂದಿ ರೆಗ್ಯುಲರ್, 2016 ಖಾಸಗಿ ಹಾಗೂ 1102 ಮಂದಿ ಪುನರಾವರ್ತಿತ ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.

ಉಡುಪಿ ಜಿಲ್ಲೆಯ 28 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. 15634 ವಿದ್ಯಾರ್ಥಿಗಳು ಜಿಲ್ಲೆಯಲ್ಲಿ ಪರೀಕ್ಷೆ ಬರೆಯಲಿದ್ದಾರೆ. ರೆಗ್ಯುಲರ್ 14,341, ಖಾಸಗಿ 719 ಹಾಗೂ 575 ಪುನರಾವರ್ತಿತರು ಪರೀಕ್ಷೆ ಬರೆಯಲಿದ್ದಾರೆ. ಈ ಪೈಕಿ 7.739 ವಿದ್ಯಾರ್ಥಿಗಳು ಹಾಗೂ 7896 ವಿದ್ಯಾರ್ಥಿನಿಯರು. ವಿಜ್ಞಾನ ವಿಭಾಗದಲ್ಲಿ 6303, ವಾಣಿಜ್ಯ ವಿಭಾಗದಲ್ಲಿ 7673, ಕಲಾ ವಿಭಾಗದಲ್ಲಿ 1658 ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳು.

More from the blog

ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನ ವಾರ್ಷಿಕ ಜಾತ್ರೆ..ಮಹಾರಥೋತ್ಸವ ಕಣ್ಣುಂಬಿಕೊಂಡ ಸಾವಿರಾರು ಭಕ್ತರು

ಬಂಟ್ವಾಳ: ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರೆಯಲ್ಲಿ ಎ. ೧೧ರಂದು ಸಂಜೆ ರಥೋತ್ಸವ ನಡೆಯಿತು. ಜಾತ್ರೆಯಲ್ಲಿ ಸಹಸ್ರಾರು ಭಕ್ತರು ಪಾಲ್ಗೊಂಡಿದ್ದರು. ಮಹಾಪೂಜೆಯ ಬಳಿಕ ದೇವರು ರಥಾರೋಹಣಗೊಂಡು ಸಾಂಕೇತಿಕವಾಗಿ ರಥವನ್ನು ಎಳೆಯಲಾಯಿತು. ಮಧ್ಯಾಹ್ನ ರಥಕ್ಕೆ...

ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆಯ ನಕಲಿ ಸುದ್ದಿ ಪ್ರಕಟ : ಕ್ರಮ ಕೈಗೊಳ್ಳುವಂತೆ ಸುಬ್ರಹ್ಮಣ್ಯ ಕಾಂಗ್ರೆಸ್ ವತಿಯಿಂದ ಪೊಲೀಸ್ ದೂರು

ಮುಖ್ಯಮಂತ್ರಿ ಸಿದ್ದರಾಮಯ್ಯ ರವರು ಕೋಮು ಭಾವನೆಯ ಹೇಳಿಕೆ ನೀಡಿದ್ದಾರೆಂಬ ನಕಲಿ ಸುದ್ದಿಯನ್ನು ವಾಟ್ಸಾಪ್ ಗ್ರೂಪ್ ಗಳಲ್ಲಿ ಪ್ರಚಾರ ಮಾಡುತ್ತಿರುವವರ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಸುಬ್ರಹ್ಮಣ್ಯ ಕಾಂಗ್ರೆಸ್ ವತಿಯಿಂದ ಸುಬ್ರಹ್ಮಣ್ಯ ಪೊಲೀಸ್ ಠಾಣೆಗೆ...

ಬಂಟ್ವಾಳದ ಬಡಗಕಜೆಕಾರು, ತೆಂಕಕಜೆಕಾರು ಗ್ರಾಮದಲ್ಲಿ ಮತದಾರರ ಮನೆಗೆ ಭೇಟಿ ನೀಡಿ ಮತಯಾಚನೆ ನಡೆಸಿದ ಶಾಸಕ ರಾಜೇಶ್ ನಾಯ್ಕ್

ಲೋಕ ಸಭಾ ಚುನಾವಣೆಯ ಹಿನ್ನಲೆಯಲ್ಲಿ ಕ್ಯಾ.ಬ್ರಿಜೇಶ್ ಚೌಟ ಅವರ ಗೆಲುವಿಗಾಗಿ "ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರ ಗ್ರಾಮ,ಮನೆ,ಮನ ಸಂಪರ್ಕ ಅಭಿಯಾನ"ದ ಅಂಗವಾಗಿ ಬಂಟ್ವಾಳದ ಬಡಗಕಜೆಕಾರು, ತೆಂಕಕಜೆಕಾರು ಗ್ರಾಮದಲ್ಲಿ ಮತದಾರರ ಮನೆಗೆ...

ಲೋಕಸಭಾ ಚುನಾವಣೆಯ ಹಿನ್ನೆಲೆ : ಚಾರ್ಮಾಡಿಯ ಮೂವರು ಗಡಿಪಾರು

ಬೆಳ್ತಂಗಡಿ: ಚುನಾವಣ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವ ಹಾಗೂ ಕೋಮು ಗಲಭೆಗಳಲ್ಲಿ ಭಾಗವಹಿಸುವ ಸಾಧ್ಯತೆ ಇರುವ ಕಾರಣ ಮೂವರು ರೌಡಿಶೀಟರ್‌ಗಳನ್ನು ಧರ್ಮಸ್ಥಳ ಪೊಲೀಸರು ಗಡಿಪಾರು ಮಾಡಿದ್ದಾರೆ. ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಗ್ರಾಮದ ನಿವಾಸಿಗಳಾದ...