Sunday, April 7, 2024

ಮಾ.27 ರಂದು ರಾಯಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಶಿಲಾನ್ಯಾಸ ಮತ್ತು ವಿಜ್ಞಾಪನಾ ಪತ್ರ ಬಿಡುಗಡೆ ಕಾರ್ಯಕ್ರಮ

ಬಂಟ್ವಾಳ: ಇತಿಹಾಸ ಪ್ರಸಿದ್ಧ ಕ್ಷೇತ್ರವಾದ ಬಂಟ್ವಾಳ ತಾಲೂಕಿನ ರಾಯಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಪುನರ್ ನಿರ್ಮಾಣಗೊಳ್ಳುತ್ತಿದ್ದು, ಶಿಲಾಮಯ ಗರ್ಭಗುಡಿ, ತೀರ್ಥಮಂಟಪ ಹಾಗೂ ಸುತ್ತು ಪೌಳಿಯ ಶಿಲಾನ್ಯಾಸ ಮತ್ತು ವಿಜ್ಞಾಪನಾ ಪತ್ರ ಬಿಡುಗಡೆ ಕಾರ್ಯಕ್ರಮ ಮಾ.27ರಂದು ನಡೆಯಲಿದೆ.

ಉಡುಪಿ ಪೇಜಾವರ ಅಧೋಕ್ಷಜ ಮಠ ಶ್ರೀ ವಿಶ್ವಪ್ರಸನ್ನ ತೀರ್ಥ ಪಾದಂಗಳವರು ಶಿಲಾನ್ಯಾಸ ನೆರೆವೇರಿಸಿ ಆಶೀರ್ವಚನ ನೀಡುವರು. ಶ್ರೀ ಕ್ಷೇತ್ರ ಕಟೀಲಿನ ಆನುವಂಶಿಕ ಅರ್ಚಕ ಕಮಲಾದೇವಿ ಆಸ್ರಣ್ಣ ಆಶೀರ್ವಚನ ನೀಡಲಿರುವರು.ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್‌ ಉಳಿಪ್ಪಾಡಿಗುತ್ತು ಅಧ್ಯಕ್ಷತೆ ವಹಿಸುವರು. ಸಂಸದ ನಳಿನ್ ಕುಮಾರ್ ಕಟೀಲು ಅವರು ವಿಜ್ಞಾಪನಾ ಪತ್ರ ಬಿಡುಗಡೆಗೊಳಿಸುವರು. ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್ ಕಲ್ಲಡ್ಕ ಅವರು ಉದ್ಘಾಟಸಲಿರುವರು. ಶಾಸಕರಾದ ಹರೀಶ್ ಪೂಂಜ, ಉಮಾನಾಥ ಕೋಟ್ಯಾನ್, ಆಳ್ವಾಸ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ, ಮಾಜಿ ಸಚಿವರಾದ ಬಿ.ರಮಾನಾಥ ರೈ, ಬಿ.ನಾಗರಾಜ ಶೆಟ್ಟಿ, ಮತ್ತಿತರರು ಅತಿಥಿಗಳಾಗಿ ಭಾಗವಹಿಸಲಿವರು ಎಂದು ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ರಶ್ಮಿತ್ ಶೆಟ್ಟಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

More from the blog

ಬಂಟ್ವಾಳ: ನಿಯಮ ಮೀರಿ ಚಾಲನೆ ಮಾಡಿ ಪೋಲೀಸರ ಕೈಗೆ ಸಿಕ್ಕಿಬಿದ್ದರೆ ದಂಡ ಗ್ಯಾರಂಟಿ….

ಬಂಟ್ವಾಳ: ರಸ್ತೆಯಲ್ಲಿ ಟ್ರಾಫಿಕ್ ಪೋಲೀಸರು ದಂಡ ವಸೂಲಿ ಮಾಡುವ ವೇಳೆ ಸುಳ್ಳು ಹೇಳಿಬಚಾವಾಗಲು ಸಾಧ್ಯವಿಲ್ಲ, ಜೊತೆಗೆ ಅಸಭ್ಯ ವರ್ತನೆ ಮಾಡಿದರೆ ಜೋಕೆ, ಅವರ ಶರೀರದಲ್ಲಿ ಕಣ್ಗಾವಲು ಕ್ಯಾಮರಾ ಅಳವಡಿಸಿಲಾಗಿದ್ದು, ಸೂಕ್ಷ್ಮವಾಗಿ ಎಲ್ಲವನ್ನು ಸೆರೆ...

ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ : ಚೆಂಡಿನ ಗದ್ದೆಯಲ್ಲಿ ಪ್ರಥಮ ಚೆಂಡು

ಇತಿಹಾಸ ಪ್ರಸಿದ್ಧ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಅಂಗವಾಗಿ ದೇವಳದ ಚೆಂಡಿನ ಗದ್ದೆಯಲ್ಲಿ ಇಂದು ಪ್ರಥಮ ಚೆಂಡು ನಡೆಯಿತು. ‌ ಇವತ್ತಿನಿಂದ ಮುಂದಿನ ಐದು ದಿನಗಳ ಕಾಲ ಇಲ್ಲಿ ಚೆಂಡು...

ಏಪ್ರಿಲ್ 7ರಂದು ಕರ್ನಾಟಕ ಜಾನಪದ ಪರಿಷತ್ತು ದ.ಕ.ಜಿಲ್ಲಾ ಬಂಟ್ವಾಳ ತಾಲೂಕು ಘಟಕದ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭ

ಬಂಟ್ವಾಳ: ಏಪ್ರಿಲ್ 7ರಂದು ಅಪರಾಹ್ನ 3 ಗಂಟೆಗೆ ಬಿ.ಸಿ.ರೋಡು ರಂಗೋಲಿ ಸಭಾಂಗಣದಲ್ಲಿ ಕರ್ನಾಟಕ ಜಾನಪದ ಪರಿಷತ್ತು ದ.ಕ.ಜಿಲ್ಲಾ ಬಂಟ್ವಾಳ ತಾಲೂಕು ಘಟಕದ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭ ನಡೆಯಲಿದೆ ಎಂದು ತಾಲೂಕು ಘಟಕದ...

ದ್ವಿಚಕ್ರ ವಾಹನಕ್ಕೆ ರಿಕ್ಷಾ ಡಿಕ್ಕಿ : ಸಹಸವಾರ ಸ್ಥಳದಲ್ಲೇ ಮೃತ್ಯು

ಬಂಟ್ವಾಳ: ರಿಕ್ಷಾ ಡಿಕ್ಕಿಯಾಗಿ ದ್ವಿಚಕ್ರ ವಾಹನದಲ್ಲಿ ಸಂಚಾರ ಮಾಡುತ್ತಿದ್ದ ಸಹಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನರಿಕೊಂಬು ಎಂಬಲ್ಲಿ ನಡೆದಿದೆ. ನರಿಕೊಂಬು ನಿವಾಸಿ ನೀಲಪ್ಪ ಪೂಜಾರಿ ಅವರ ಮಗ ಪವನ್ ( 17) ಮೃತಪಟ್ಟ ಬಾಲಕ. ಮನೆಯಿಂದ...