Monday, April 15, 2024

ಧರ್ಮದ ಅಂತರಾಳದಲ್ಲಿ ನಿಜವಾದ ಸುಖವಿದೆ’- ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ

ವಿಟ್ಲ: ಸ್ವೀಕಾರಾರ್ಹವಾದ ಎಲ್ಲಾ ವಿಚಾರಗಳೇ ಧರ್ಮ ಎನಿಸುತ್ತದೆ. ಧರ್ಮದ ಅಂತರಾಳದಲ್ಲಿ ನಿಜವಾದ ಸುಖವಿದೆ. ಲೋಕಕಲ್ಯಾಣಕ್ಕಾಗಿಯೇ ಬದುಕನ್ನು ಮುಡಿಪಾಗಿಟ್ಟ ಸಾಧುಸಂತರು ನಮ್ಮ ಜೀವನ ಆದರ್ಶವಾಗಬೇಕು ಎಂದು ಧರ್ಮಸ್ಥಳ ನಿತ್ಯಾನಂದ ನಗರ ಶ್ರೀರಾಮ ಕ್ಷೇತ್ರದ ಮಹಾಸಂಸ್ಥಾನದ ಮಠಾಧೀಶರಾದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ನುಡಿದರು.

ಅವರು ಪುಣಚ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ನಡೆಯುವ ಅಷ್ಟಬಂಧ ಬ್ರಹ್ಮಕಲಶೋತ್ಸವದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದರು.

ಮಂಗಳೂರು ಆದಿಚುಂಚನಗಿರಿ ಶಾಖಾ ಮಠದ ಶ್ರೀ ಡಾ.ಧರ್ಮಪಾಲನಾಥ ಸ್ವಾಮೀಜಿ ಆಶೀರ್ವಚನ ನೀಡಿ ನಮ್ಮ ದೇಹದೊಳಗಿರುವ ದುರ್ಗುಣಗಳೆಲ್ಲವೂ ಬದುಕಿನಲ್ಲಿ ಎದುರಾಗುವ ಘೋರ ಅಸುರರಾಗಿದ್ದಾರೆ. ಈ ಎಲ್ಲಾ ಅಸುರ ದುರ್ಗುಣಗಳೆಲ್ಲವೂ ದಮನವಾಗದೇ ದೇವರ ಅನುಗ್ರಹ ಅಸಾಧ್ಯ. ಭಗವಂತನನ್ನು ಕಾಣುವ ಮಾರ್ಗದ ಮೂಲಕ ಸಾಗಿದಾಗ ಪರಮಾನಂದ ಪ್ರಾಪ್ತಿಯಾಗುತ್ತದೆ ಎಂದು ತಿಳಿಸಿದರು.

ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಮುಂಬೈ ಉದ್ಯಮಿ ಕುಸುಮೋಧರ ಶೆಟ್ಟಿ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.
ಧಾರ್ಮಿಕ ಪರಿಷತ್ ಸದಸ್ಯ ಕಶೆಕೋಡಿ ಸೂರ್ಯನಾರಾಯಣ ಭಟ್ ಧಾರ್ಮಿಕ ಉಪನ್ಯಾಸ ನೀಡಿದರು.
ಮುಖ್ಯ ಅತಿಥಿಗಳಾಗಿ ಪುತ್ತೂರಿನ ಸ್ವರ್ಣೋದ್ಯಮಿ ಬಲರಾಮ ಆಚಾರ್ಯ, ಸುದೀಪ್ ಪ್ರಧಾನ್ ಬೆಂಗಳೂರು, ವಿಜಯ ಕೃಷ್ಣ ಪೇರಾಲುಗುತ್ತು, ಬ್ರಹ್ಮಕಲಶೋತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ ಬಿ.ಕೆ.ರವಿ ದಲ್ಕಜೆಗುತ್ತು ಉಪಸ್ಥಿತರಿದ್ದರು.
ದೇಗುಲ ವ್ಯವಸ್ಥಾಪಕ ರಾಮಕೃಷ್ಣ ಮೂಡಂಬೈಲು ಸ್ವಾಗತಿಸಿದರು. ಬ್ರಹ್ಮಕಲಶೋತ್ಸವ ಸಮಿತಿ ಕೋಶಾಧಿಕಾರಿ ಉದಯಕುಮಾರ್ ದಂಬೆ ವಂದಿಸಿದರು. ಶಿಕ್ಷಕ ಲೋಕೇಶ್, ವೆಂಕಟ್ರಮಣ ನಟ್ಟಿ ಕಾರ್ಯಕ್ರಮ ನಿರೂಪಿಸಿದರು. ಸಭೆಯ ಬಳಿಕ ಅಮ್ಮ ಕಲಾವಿದೆರ್ ಕುಡ್ಲ ತಂಡದಿಂದ ‘ಪರಕೆ ಪೂವಕ್ಕೆ’ ನಾಟಕ ಪ್ರದರ್ಶನಗೊಂಡಿತು.

More from the blog

ಹಿಂದೂ‌ ಸಂಘಟನೆಯ ಕಾರ್ಯಕರ್ತನಿಗೆ ಚೂರಿ ಇರಿತ

ಬಂಟ್ವಾಳ : ಹಿಂದೂ ಸಂಘಟನೆಯ ಮುಖಂಡನೋರ್ವನಿಗೆ ಸ್ನೇಹಿತ ಚೂರಿಯಿಂದ ಇರಿದ ಘಟನೆ ಬಂಟ್ವಾಳದಲ್ಲಿ ನಡೆದಿದ್ದು, ಗಂಭೀರವಾಗಿ ಗಾಯಗೊಂಡಿರುವ ಈತನನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಹಿಂದೂಯುವಸೇನೆಯ ಮುಖಂಡನಾಗಿದ್ದು, ಉದ್ಯಮಿಯಾಗಿರುವ...

ಮಂಗಳೂರು: ರೋಡ್​ಶೋ ಮೂಲಕ ಪ್ರಧಾನಿ ಮೋದಿ ಚುನಾವಣಾ ಪ್ರಚಾರ

ಮಂಗಳೂರು: ರಾಜ್ಯದ ಲೋಕಸಭಾ ಚುನಾವಣೆ ಅಖಾಡಕ್ಕೆ ಇಳಿದಿರುವ ಪ್ರಧಾನಿ ನರೇಂದ್ರ ಮೋದಿ, ಮೈಸೂರಿನಿಂದ ತಮ್ಮ ಯಾತ್ರೆ ಆರಂಭಿಸಿದ್ದಾರೆ. ಇದೀಗ ಮಂಗಳೂರಿನಲ್ಲಿ ರೋಡ್​ಶೋ ಮೂಲಕ ಚುನಾವಣಾ ಪ್ರಚಾರ ಆರಂಭಿಸಿದ್ದಾರೆ. ಮೈಸೂರಿನಲ್ಲಿ ಅದ್ದೂರಿ...

ನೆತ್ತರಕೆರೆ: ನವೋದಯ ಮಿತ್ರ ಕಲಾ ವೃಂದ (ರಿ.) 37ನೇ ವಾರ್ಷಿಕೋತ್ಸವ ಸಮಾರಂಭ

ಬಂಟ್ವಾಳ : ಈ ಮಣ್ಣಿನ ಸಂಸ್ಕೃತಿ, ಮೌಲ್ಯವನ್ನು ಮುಂದಿನ ತಲೆಮಾರಿಗೆ ತಲುಪಿಸುವ ಮಹತ್ತರವಾದ ಜವಾಬ್ದಾರಿ ಸಂಘ ಸಂಸ್ಥೆಗಳ ಮೇಲಿದೆ, ಈ ನಿಟ್ಟಿನಲ್ಲಿ ನವೋದಯ ಮಿತ್ರ ಕಲಾ ವೃಂದವು ಸಮಾಜಕ್ಕೆ ಪೂರಕವಾಗಿ ಸಮಾಜಮುಖಿ ಕಾರ್ಯಗಳನ್ನು...

ಲೋಕಸಭಾ ಚುನಾವಣೆ : ‘ಸಂಕಲ್ಪ ಪತ್ರ’ ಹೆಸರಿನಲ್ಲಿ ಬಿಜೆಪಿ ಪ್ರಣಾಳಿಕೆ ಬಿಡುಗಡೆ

ನವದೆಹಲಿ: ದೆಹಲಿಯಲ್ಲಿರುವ ಬಿಜೆಪಿಯ ಪ್ರಧಾನ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಲೋಕಸಭೆ ಚುನಾವಣೆಗಾಗಿ ಬಿಜೆಪಿ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ. ‘ಸಂಕಲ್ಪ ಪತ್ರ’ ಹೆಸರಲ್ಲಿ ದೇಶದ ಜನರಿಗೆ ಪ್ರಧಾನಿ ಮೋದಿ ಆಶ್ವಾಸನೆಗಳನ್ನು ನೀಡಿದ್ದು ಮೊದಲ ಸಂಕಲ್ಪ...