Monday, April 15, 2024

ದ.ಕ.ಜಿಲ್ಲಾ ರಾಜೀವ ಗಾಂಧಿ ಪಂಚಾಯತ್ ರಾಜ್ ಮುಖಂಡರಿಂದ ಕಾಂಗ್ರೆಸ್ ಚುನಾವಣೆ ಪ್ರಣಾಳಿಕೆ ಸಮಿತಿ ಅಧ್ಯಕ್ಷರ ಭೇಟಿ

ವಿಟ್ಲ: ಕರ್ನಾಟಕದ ಮಾಜಿ ಗೃಹ ಸಚಿವ,ಕೆ.ಪಿ.ಸಿ.ಸಿ ಮಾಜಿ ಅಧ್ಯಕ್ಷರೂ,ಕಾಂಗ್ರೆಸ್ ಚುನಾವಣೆ ಪ್ರಣಾಳಿಕೆ ಸಮಿತಿ ಅಧ್ಯಕ್ಷರಾದ ಜಿ.ಪರಮೇಶ್ವರ್ ಅವರನ್ನು ದ.ಕ.ಜಿಲ್ಲಾ ರಾಜೀವ ಗಾಂಧಿ ಪಂಚಾಯತ್ ರಾಜ್ ಮುಖಂಡರ ನಿಯೋಗ ಬೇಟಿಯಾಗಿ ಸಮಾಲೋಚನೆ ನಡೆಸಿತು.

ಕೆಪಿಸಿಸಿ ಪ್ರಣಾಳಿಕೆ ಸಮಿತಿ ಅಧ್ಯಕ್ಷರಾದ ಜಿ ಪರಮೇಶ್ವರ್ ರವರ ತಂಡ ಮಂಗಳೂರಿನಲ್ಲಿ ಕರಾವಳಿ ಭಾಗದ ಸಂಘ ಸಂಸ್ಥೆ ಗಳ ಅಭಿಪ್ರಾಯ ಸಂಗ್ರಹಣೆ,ಚುನಾವಣಾ ಪೂರ್ವ ಸಿದ್ದತೆ ಮಾಡುವ ಸಂದರ್ಭ ಪಂಚಾಯತ್ ರಾಜ್ ಸಂಘಟನೆ ಪರವಾಗಿ ಸ್ಥಳೀಯ ಸಂಸ್ಥೆ ಗಳ ವಿಚಾರವಾಗಿ ಕೇರಳ ಮಾದರಿ ವ್ಯವಸ್ಥೆ ಜಾರಿಗೆ ತರಬೇಕು. ಸ್ಥಳೀಯ ಸಂಸ್ಥೆಯ ಪ್ರತಿನಿಧಿಗಳ ಮತ್ತು ಕೆಲವು ಇನ್ನಿತರ ಪಂಚಾಯತ್ ರಾಜ್ ವ್ಯವಸ್ಥೆಯನ್ನು ಸಬಲೀ ಕರಣಗೊಳಿಸುವ ಅಂಶಗಳನ್ನು ಹೊಂದಿರುವ ಮನವಿಯನ್ನು ನೀಡಿ ಪಂಚಾಯತ್ ರಾಜ್ ಜಿಲ್ಲಾಧ್ಯಕ್ಷ ಸುಭಾಶ್ಚಂದ್ರ ಶೆಟ್ಟಿಯವರ ನೇತೃತ್ವದ ನಿಯೋಗ ವಿವರಿಸಿತು. ಮನವಿಯನ್ನು ಆಲಿಸಿದ ಮಾತನಾಡಿ ಪರಮೇಶ್ವರ್ ರಾಜ್ಯದಲ್ಲೇ ದಕ್ಷಿಣ ಕನ್ನಡ ಪಂಚಾಯತ್ ರಾಜ್ ಸಂಘಟನೆ ಉತ್ತಮ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಪಕ್ಷ ಸಂಘಟನೆಗೆ ಸಹಕಾರಿಯಾಗಲಿದೆ ಎಂದರು.

ಮನವಿ ಸ್ವೀಕರಿಸಿದ ಜಿ.ಪರಮೇಶ್ವರ್ ಮತ್ತು ಪ್ರಣಾಳಿಕೆ ಸಮಿತಿಯ ಉಪಾಧ್ಯಕ್ಷರುಗಳಾದ ಪ್ರೊಫೆಸರ್ ರಾಧಾಕೃಷ್ಣ ಮತ್ತು ಮಧು ಬಂಗಾರಪ್ಪ ಸಕಾರಾತ್ಮಕವಾಗಿ ಸ್ಪಂದಿಸುವುದಾಗಿ ಭರವಸೆಯಿತ್ತರು. ಸಕಾರಾತ್ಮಕ ಭರವಸೆಗೆ ಪಂಚಾಯತ್ ರಾಜ್ ನಿಯೋಗದ ಅದ್ಯಕ್ಷರು ಅಭಿನಂದಿಸಿದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯರಾದ ಮಂಜುನಾಥ್ ಭಂಡಾರಿ , ಮಾಜಿ ಶಾಸಕ ಜೆ. ಆರ್ ಲೋಬೊ , ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷೆ ಮಮತಾ ಗಟ್ಟಿ , ಮಾಜಿ ಉಪಾಧ್ಯಕ್ಷ ಎಂ. ಎಸ್ ಮಹಮ್ಮದ್ ಪಂಚಾಯತ್ ರಾಜ್ ಮಾಜಿ ಜಿಲ್ಲಾ ಧ್ಯಕ್ಷ ಶುಭೋದಯ ಆಳ್ವ , ಮಂಗಳೂರು ದಕ್ಷಿಣ ಬ್ಲಾಕ್ ಪಂಚಾಯತ್ ರಾಜ್ ಅಧ್ಯಕ್ಷ ಅಶ್ವಿನಿ ರಾಜ್, ಮಲ್ಲಿಕಾ ಪಕ್ಕಳ ಮತ್ತಿತರರು ಉಪಸ್ಥಿತರಿದ್ದರು.

More from the blog

ಹಿಂದೂ‌ ಸಂಘಟನೆಯ ಕಾರ್ಯಕರ್ತನಿಗೆ ಚೂರಿ ಇರಿತ

ಬಂಟ್ವಾಳ : ಹಿಂದೂ ಸಂಘಟನೆಯ ಮುಖಂಡನೋರ್ವನಿಗೆ ಸ್ನೇಹಿತ ಚೂರಿಯಿಂದ ಇರಿದ ಘಟನೆ ಬಂಟ್ವಾಳದಲ್ಲಿ ನಡೆದಿದ್ದು, ಗಂಭೀರವಾಗಿ ಗಾಯಗೊಂಡಿರುವ ಈತನನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಹಿಂದೂಯುವಸೇನೆಯ ಮುಖಂಡನಾಗಿದ್ದು, ಉದ್ಯಮಿಯಾಗಿರುವ...

ಮಂಗಳೂರು: ರೋಡ್​ಶೋ ಮೂಲಕ ಪ್ರಧಾನಿ ಮೋದಿ ಚುನಾವಣಾ ಪ್ರಚಾರ

ಮಂಗಳೂರು: ರಾಜ್ಯದ ಲೋಕಸಭಾ ಚುನಾವಣೆ ಅಖಾಡಕ್ಕೆ ಇಳಿದಿರುವ ಪ್ರಧಾನಿ ನರೇಂದ್ರ ಮೋದಿ, ಮೈಸೂರಿನಿಂದ ತಮ್ಮ ಯಾತ್ರೆ ಆರಂಭಿಸಿದ್ದಾರೆ. ಇದೀಗ ಮಂಗಳೂರಿನಲ್ಲಿ ರೋಡ್​ಶೋ ಮೂಲಕ ಚುನಾವಣಾ ಪ್ರಚಾರ ಆರಂಭಿಸಿದ್ದಾರೆ. ಮೈಸೂರಿನಲ್ಲಿ ಅದ್ದೂರಿ...

ನೆತ್ತರಕೆರೆ: ನವೋದಯ ಮಿತ್ರ ಕಲಾ ವೃಂದ (ರಿ.) 37ನೇ ವಾರ್ಷಿಕೋತ್ಸವ ಸಮಾರಂಭ

ಬಂಟ್ವಾಳ : ಈ ಮಣ್ಣಿನ ಸಂಸ್ಕೃತಿ, ಮೌಲ್ಯವನ್ನು ಮುಂದಿನ ತಲೆಮಾರಿಗೆ ತಲುಪಿಸುವ ಮಹತ್ತರವಾದ ಜವಾಬ್ದಾರಿ ಸಂಘ ಸಂಸ್ಥೆಗಳ ಮೇಲಿದೆ, ಈ ನಿಟ್ಟಿನಲ್ಲಿ ನವೋದಯ ಮಿತ್ರ ಕಲಾ ವೃಂದವು ಸಮಾಜಕ್ಕೆ ಪೂರಕವಾಗಿ ಸಮಾಜಮುಖಿ ಕಾರ್ಯಗಳನ್ನು...

ಲೋಕಸಭಾ ಚುನಾವಣೆ : ‘ಸಂಕಲ್ಪ ಪತ್ರ’ ಹೆಸರಿನಲ್ಲಿ ಬಿಜೆಪಿ ಪ್ರಣಾಳಿಕೆ ಬಿಡುಗಡೆ

ನವದೆಹಲಿ: ದೆಹಲಿಯಲ್ಲಿರುವ ಬಿಜೆಪಿಯ ಪ್ರಧಾನ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಲೋಕಸಭೆ ಚುನಾವಣೆಗಾಗಿ ಬಿಜೆಪಿ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ. ‘ಸಂಕಲ್ಪ ಪತ್ರ’ ಹೆಸರಲ್ಲಿ ದೇಶದ ಜನರಿಗೆ ಪ್ರಧಾನಿ ಮೋದಿ ಆಶ್ವಾಸನೆಗಳನ್ನು ನೀಡಿದ್ದು ಮೊದಲ ಸಂಕಲ್ಪ...