Sunday, April 14, 2024

‘ಅನ್ನದ ಋಣವನ್ನು, ಆನಂದದ ಕ್ಷಣವನ್ನು ನಾವೂ ಎಂದಿಗೂ ಮರೆಯಬಾರದು’- ಒಡಿಯೂರು ಶ್ರೀ

ವಿಟ್ಲ: ಒಡಿಯೂರು ಶ್ರೀ ಗುರುದೇವ ವಿದ್ಯಾಪೀಠದ ಆಶ್ರಯದಲ್ಲಿ ಶ್ರೀ ಸಂಸ್ಥಾನದ ರಾಜಾಂಗಣದಲ್ಲಿ ಮಾತೃಪೂಜನ ಮತ್ತು ಮಕ್ಕಳ ಸಾಮೂಹಿಕ ಹುಟ್ಟುಹಬ್ಬ ಆಚರಣೆ ಕಾರ್ಯಕ್ರಮ ನಡೆಯಿತು.

ಸಮಾರಂಭದಲ್ಲಿ ಆಶೀರ್ವಚನ ನೀಡಿದ ಒಡಿಯೂರು ಶ್ರೀಗುರುದೇವದತ್ತ ಸಂಸ್ಥಾನದ ಶ್ರೀ ಗುರುದೇವಾನಂದ ಸ್ವಾಮಿಗಳವರು ಸಂಸ್ಕೃತಿಯನ್ನು ಮಕ್ಕಳಿಗೆ ತಿಳಿಸಿಕೊಡಬೇಕು. ಅನ್ನ ಮತ್ತು ಅಮ್ಮ ಎರಡು ಅಕ್ಷರಗಳಿಗೂ ಸಂಬಂಧವಿದೆ. ಅನ್ನದಿಂದಲೇ ಕೋಶಗಳು ಜಾಗೃತವಾಗುವುದು. ಅನ್ನದ ಋಣವನ್ನು, ಆನಂದದ ಕ್ಷಣವನ್ನು ನಾವು ಮರೆಯಬರದು. ನಾವು ಶಾಲೆಯ ವಿಷಯಗಳಲ್ಲಿ ನೂರಕ್ಕೆ ನೂರು ಅಂಕ ಗಳಿಸಲು ಪ್ರಯತ್ನಿಸಿದರೆ ಸಾಲದು, ಜೀವನದಲ್ಲಿ ನೂರಕ್ಕೆ ನೂರು ಯಶಸ್ಸು ಪಡೆಯುವವರಾಗಬೇಕು. ಅದಕ್ಕೆ ಪೂರಕವೆಂಬಂತೆ ಇಂತಹ ಕಾರ್ಯಗಳ ಮೂಲಕ ಸಂಸ್ಕಾರವನ್ನು ಬೆಳೆಸಬೇಕು. ಶಾಲೆಗಳಲ್ಲಿ ಪಾಠ ಮೊದಲು ಪರೀಕ್ಷೆ ಕೊನೆಗೆ. ಆದರೆ ಜೀವನದಲ್ಲಿ ಪರೀಕ್ಷೆ ಮೊದಲು ಪಾಠ ನಂತರ. ಸಮಾಜದಲ್ಲಿ ಇತ್ತೀಚೆಗೆ ನಡೆಯುವ ಅನೇಕ ದುಷ್ಕೃತ್ಯಗಳಿಗೆ ಸಂಸ್ಕಾರದ ಕೊರತೆಯೇ ಕಾರಣ. ಸಂಸ್ಕೃತಿಯನ್ನು ಉಳಿಸುವಲ್ಲಿ ಪೋಷಕರ ಪಾತ್ರದ ಬಗ್ಗೆ ಅರಿವಿರಬೇಕು. ನಾವೆಲ್ಲರೂ ಒಂದೊಂದು ದೀಪಗಳು. ದೀಪಕ್ಕೆ ಸಂಸ್ಕಾರ ಸಿಕ್ಕಿದಾಗ ನಿರಂತರ
ಉರಿಯುವುದಕ್ಕೆ ಸಾಧ್ಯ. ನಮ್ಮ ಅಂತರಂಗದ ಜ್ಯೋತಿ ಬೆಳಗಲು ಜೀವನ ಸಂಸ್ಕಾರ ಬಹುಮುಖ್ಯ. ಆಗ ಸಮಾಜವು ಬೆಳೆಯುತ್ತದೆ,
ಬೆಳಗುತ್ತದೆ. ಭಾರತೀಯ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಕಾರ್ಯದಲ್ಲಿ ತೊಡಗಿಕೊಳ್ಳೋಣ ಎಂದು ತಿಳಿಸಿದರು.

ಕಾರ್ಯಕ್ರಮವನ್ನು ದೀಪೋಜ್ವಲನದೊಂದಿಗೆ ಉದ್ಘಾಟಿಸಿದ ಸಾಧ್ವಿ ಶ್ರೀ ಶ್ರೀ ಮಾತಾನಂದಮಯೀ ಮಾತೃಪೂಜನ ಕಾರ್ಯಕ್ರಮದ
ಮಹತ್ವವನ್ನು ತಿಳಿಸಿದರು.
ವೇ|ಮೂ| ಶುಕ್ಲಶ್ಯಾಮ ಭಟ್ ಹಾಗೂ ವೇ|ಮೂ| ನವರಾಜ ಭಟ್ ಅಮೈ ಮಾತೃಪೂಜನ ಕಾರ್ಯಕ್ರಮದ ವಿಧಿ-ವಿಧಾನ ನಡೆಸಿಕೊಟ್ಟರು.
ಶಾಲಾ ಮುಖ್ಯ ಶಿಕ್ಷಕಿ ರೇಣುಕಾ ಎಸ್.ರೈ ಉಪಸ್ಥಿತರಿದ್ದರು.

ವಿದ್ಯಾರ್ಥಿಗಳೆಲ್ಲರೂ ಹಣತೆಗಳನ್ನು ಉರಿಸುವ ಮೂಲಕ ಹುಟ್ಟುಹಬ್ಬ ಆಚರಿಸಲಾಯಿತು. ಶಾಲಾ ವಿದ್ಯಾರ್ಥಿನಿಯರ ಪ್ರಾರ್ಥನೆಯೊಂದಿಗೆ ಆರಂಭಗೊಂಡ ಸಮಾರಂಭದಲ್ಲಿ ಮಾತೃಮಂಡಳಿ ಸಂಚಾಲಕಿ ವಿದ್ಯಾಲಕ್ಷ್ಮಿ ಸ್ವಾಗತಿಸಿದರು. ಶಾಲಾ ಸಂಚಾಲಕ ಗಣಪತಿ ಭಟ್ ಸೇರಾಜೆ
ಪ್ರಸ್ತಾವನೆಗೈದರು. ಮಾತೃಮಂಡಳಿಯ ಸದಸ್ಯೆ ಹರಿಣಾಕ್ಷಿ ಪಕಳ ವಂದಿಸಿದರು. ಶಾಲಾ ಶಿಕ್ಷಕ ಶೇಖರ ಶೆಟ್ಟಿ ಬಾಯಾರು ಕಾರ್ಯಕ್ರಮ ನಿರೂಪಿಸಿದರು.

More from the blog

ಮತದಾರರ ಜಾಗೃತಿ ಕಾರ್ಯಕ್ರಮ, ಕಾಲ್ನಡಿಗೆ ಜಾಥಾ ಹಾಗೂ ಬೀದಿನಾಟಕ

ತಾಲೂಕು ಪಂಚಾಯತ್‌ ಬಂಟ್ವಾಳ, ತಾಲೂಕು ಸ್ವೀಪ್‌ ಸಮಿತಿ, ಕಂದಾಯ ಇಲಾಖೆ, ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆರೋಗ್ಯ ಇಲಾಖೆ, ಬಂಟ್ವಾಳ ಪುರಸಭೆ, ರಾಷ್ಟ್ರೀಯ ಸೇವಾ ಯೋಜನೆ, ಮತದಾರರ ಸಾಕ್ಷರತಾ...

ಕಾಸರಗೋಡು ಜಿಲ್ಲೆಯಲ್ಲಿ ರಾಜಕೀಯ ಲಾಭಕ್ಕಾಗಿ ಬ್ರಹ್ಮ ಶ್ರೀ ನಾರಾಯಣ ಗುರುಗಳ ಪೋಟೋ ಬಳಕೆ ಖಂಡನೀಯ-ಜಗದೀಶ್ ಕೊಯಿಲ

ಬಂಟ್ವಾಳ: ಕಾಸರಗೋಡು ಜಿಲ್ಲೆಯಲ್ಲಿ ರಾಜಕೀಯ ಲಾಭಕ್ಕಾಗಿ ಬ್ರಹ್ಮ ಶ್ರೀ ನಾರಾಯಣ ಗುರುಗಳ ಪೋಟೋ ಬಳಕೆ ಮಾಡಿದ್ದು ಖಂಡನೀಯ ಎಂದು ಜಗದೀಶ್ ಕೊಯಿಲ ತಿಳಿಸಿದ್ದಾರೆ. ಅವರು ಬಿಸಿರೋಡಿನ ಪ್ರೆಸ್ ಕ್ಲಬ್ ನಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ರಾಷ್ಟ್ರೀಯ...

ಕೆ.ಎಸ್.ಆರ್.ಟಿ.ಸಿ.ಬಸ್ ಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಬೈಕ್ : ಮೂವರಿಗೆ ಗಾಯ

ಬಂಟ್ವಾಳ: ಕೆ.ಎಸ್.ಆರ್.ಟಿ.ಸಿ.ಬಸ್ ಗೆ ಹಿಂಬದಿಯಿಂದ ಬೈಕ್ ಡಿಕ್ಕಿಯಾಗಿ ಬೈಕಿನಲ್ಲಿದ್ದ ಮೂವರು ಗಾಯಗೊಂಡ ಘಟನೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ತುಂಬೆ ಸಮೀಪದ ಕಡೆಗೋಳಿ ಎಂಬಲ್ಲಿ ನಡೆದಿದೆ. ಮಂಗಳೂರಿನಿಂದ ಬರುತ್ತಿದ್ದ ಕೆ.ಎಸ್.ಆರ್.ಟಿ‌.ಸಿ.ಬಸ್ ಗೆ ಹೆಲ್ಮೆಟ್ ಧರಿಸಿದೆ...

ಮನೆ ಮನೆಗೆ ತೆರಳಿ ಲೋಕಸಭಾ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಪರ ಮತಯಾಚನೆ

ನಮ್ಮ ಬೂತ್ ನಮ್ಮ ಹೊಣೆ ಘೋಷನೇಯಂತೆ ಬೂತ್ ಸಂಖ್ಯೆ 126 ವಾರ್ಡ್ 12 ರ ಅಜ್ಜೀಬೆಟ್ಟು ನಲ್ಲಿ ಮನೆ ಮನೆಗೆ ತೆರಲಿ ಲೋಕ ಸಭಾ ಅಭ್ಯರ್ಥಿ ಪದ್ಮರಾಜ್ ಪೂಜಾರಿಯವರ ಪರವಾಗಿ ಮತ ಯಾಚನೆ...