Saturday, April 6, 2024

ವಿಟ್ಲ ವಿಠಲ ವಿದ್ಯಾ ಸಂಸ್ಥೆಯಲ್ಲಿ ಬೀಳ್ಕೊಡುಗೆ ವಿದ್ಯಾರ್ಥಿಗಳಿಂದ ವಿದ್ಯಾ ಸಂಸ್ಥೆಗೆ ದೇಣಿಗೆ

ವಿಟ್ಲ: ವಿಟ್ಲ ವಿಠಲ ಎಜುಕೇಶನ್ ಸೊಸೈಟಿ ಯ ಪ್ರೌಢಶಾಲೆಯ 2022-23 ನೇ ಸಾಲಿನ ಹತ್ತನೇ ತರಗತಿಯ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭದಲ್ಲಿ ಸಂಸ್ಥೆಯ ಉಚಿತ ಶಿಕ್ಷಣ ‘ಯೋಜನೆಯ ವಿದ್ಯಾ ಪೋಷಕ ಸಮಿತಿ’ ಗೆ 10 ನೇ ತರಗತಿಯ ವಿದ್ಯಾರ್ಥಿಗಳು 92,300 ರೂಪಾಯಿ ಮೊತ್ತ ನೀಡಿದರು.

ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ಸಂಸ್ಥೆಯ ಸದಸ್ಯ ಪದ್ಮಯ್ಯ ಗೌಡ ರವರು ಆ ಮೊತ್ತವನ್ನು ಒಂದು ಲಕ್ಷ ರೂಪಾಯಿಗೆ ಭರ್ತಿ ಮಾಡಿ ಸಂಸ್ಥೆಗೆ ನೀಡುವುದಾಗಿ ಹೇಳಿದರು. ಸಂಸ್ಥೆಯ ಅಧ್ಯಕ್ಷ ಮುಗುಳಿ ತಿರುಮಲೇಶ್ವರ ಭಟ್, ಕೋಶಾಧಿಕಾರಿ ಬಾಬು ಕೊಪ್ಪಳ, ಸದಸ್ಯ ಸದಾಶಿವ ಬನ, ಮುಖ್ಯ ಶಿಕ್ಷಕ ಕಿರಣ್ ಕುಮಾರ್ ಬ್ರಹ್ಮಾವರ, ಸಹಶಿಕ್ಷಕರು ಮತ್ತು ಮಕ್ಕಳು ಉಪಸ್ಥಿತರಿದ್ದರು.

More from the blog

ಗ್ರಾಮೀಣ ಪುನರ್ವಸತಿ ಕಾರ್ಯಕತರಿಗೆ ಮತದಾನ ಜಾಗೃತಿ

ಬಂಟ್ವಾಳ ತಾಲೂಕು ಪಂಚಾಯತ್, ತಾಲೂಕು ಕಚೇರಿ ಹಾಗೂ ತಾಲೂಕು ಸ್ವೀಪ್ ಸಮಿತಿಯಿಂದ ಗ್ರಾಮೀಣ ಪುನರ್ವಸತಿ ಕಾರ್ಯಕತರಿಗೆ ಮತದಾನ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ತಾಲೂಕು ಆಡಳಿತ ಸೌಧದಿಂದ ಹಮ್ಮಿಕೊಂಡ ಜಾಥಾ ಬಿ.ಸಿ.ರೋಡ್ ಖಾಸಗಿ ಬಸ್ ನಿಲ್ದಾಣ...

ಭಾರತೀಯ ಜನತಾ ಪಾರ್ಟಿ ಸ್ಥಾಪನಾ ದಿನದ ಅಂಗವಾಗಿ ಬಂಟ್ವಾಳ ಮಂಡಲ ಬಿಜೆಪಿ ಕಾರ್ಯಾಲಯದಲ್ಲಿ ಧ್ವಜಾರೋಹಣ

ಭಾರತೀಯ ಜನತಾ ಪಾರ್ಟಿ ಸ್ಥಾಪನಾ ದಿನದ ಅಂಗವಾಗಿ ಬಂಟ್ವಾಳ ಮಂಡಲದ ಅಧ್ಯಕ್ಷರಾದ ಆರ್ ಚೆನ್ನಪ್ಪ ಕೋಟ್ಯಾನ್ ಅವರು ಮಂಡಲ ಬಿಜೆಪಿ ಕಾರ್ಯಾಲಯದಲ್ಲಿ ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಪ್ರಮುಖರಾದ ದೇವಪ್ಪ ಪೂಜಾರಿ,ರವೀಶ್ ಶೆಟ್ಟಿ, ಡೊಂಬಯ...

ರಾಜ್ಯದಲ್ಲಿ 60 ಮಂದಿಯ ನಾಮಪತ್ರ ತಿರಸ್ಕೃತ

ಬೆಂಗಳೂರು: ಲೋಕಸಭಾ ಚುನಾವಣೆಗೆ ರಾಜ್ಯದ ಮೊದಲ ಹಂತದ 14 ಕ್ಷೇತ್ರಗಳಲ್ಲಿ 358 ಅಭ್ಯರ್ಥಿಗಳು 492 ನಾಮಪತ್ರ ಸಲ್ಲಿಸಿದ್ದು, ಇದರಲ್ಲಿ 13 ಕ್ಷೇತ್ರದಲ್ಲಿ ಪರಿಶೀಲನೆ ಕಾರ್ಯ ಮುಗಿದಿದೆ. 276 ನಾಮಪತ್ರಗಳು ಕ್ರಮಬದ್ಧವಾಗಿದ್ದು, 60 ನಾಮಪತ್ರಗಳು...

ಮಂಗಳೂರು: ‘ಸ್ವೀಟ್ ಸಿಂಫನಿ ಇನ್ಸ್ಟಿಟ್ಯೂಟ್ ಆಫ್ ಮ್ಯೂಸಿಕ್’ ಸಂಸ್ಥೆಯ ಸಂಗೀತ ಕ್ಷೇತ್ರದಲ್ಲಿ ಸಂಪುಟ 2′ ರ ನೂತನ ಕೃತಿ ಲೋಕಾರ್ಪಣೆ

ಮಂಗಳೂರು: ಮಂಗಳೂರಿನ ಕುಲಶೇಖರದಲ್ಲಿರುವ 'ಸ್ವೀಟ್ ಸಿಂಫನಿ ಇನ್ಸ್ಟಿಟ್ಯೂಟ್ ಆಫ್ ಮ್ಯೂಸಿಕ್' ಸಂಸ್ಥೆಯ ಪ್ರಕಾಶನದಲ್ಲಿ ಇಂಗ್ಲಿಷ್, ಹಿಂದಿ ಮತ್ತು ಕನ್ನಡದ ಜನಪ್ರಿಯ ಹಾಡುಗಳನ್ನು ಪಾಶ್ಚಿಮಾತ್ಯ ನೊಟೇಶನ್ ಮೂಲಕ ವಯಲಿನ್, ಗಿಟಾರ್ ಮತ್ತು ಕೀಬೋರ್ಡ್ ನಲ್ಲಿ...