Friday, April 12, 2024

ಬಿ.ಮೂಡ ಸರಕಾರಿ ಪದವಿಪೂರ್ವ ಕಾಲೇಜಿನ ನೂತನ ಕಟ್ಟಡವನ್ನು ಉದ್ಘಾಟಿಸಿದ ಶಾಸಕ ರಾಜೇಶ್ ನಾಯ್ಕ್

ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಿ, ಕ್ಷೇತ್ರದಲ್ಲಿ ಹಲವು ಶಿಕ್ಷಣ ಸಂಸ್ಥೆಗಳಿಗೆ ಮೂಲಭೂತ ಸೌಕರ್ಯಗಳನ್ನು ನೀಡಲಾಗಿದೆ ಎಂದು ಶಾಸಕ ರಾಜೇಶ್ ನಾಯ್ಕ್ ಹೇಳಿದರು.

ಅವರು ರೂ. 1 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ ಸರಕಾರಿ ಪದವಿಪೂರ್ವ ಕಾಲೇಜ್ ಬಿ.ಮೂಡ ಇದರ ನೂತನ ಕಟ್ಟಡದ ಉದ್ಘಾಟನೆ ನಡೆಸಿದ ಬಳಿಕ ಮಾತನಾಡಿದರು. ರಾಷ್ಟ್ರೀಯ ಶಿಕ್ಷಣ ನೀತಿಯಿಂದ ವಿದ್ಯಾರ್ಥಿಗಳು ತಮಗೆ ಬೇಕಾದ ಶಿಕ್ಷಣವನ್ನು ಆಯ್ಕೆ ಮಾಡಿ ಶಿಕ್ಷಣದಲ್ಲಿ ಮುಂದುವರಿಯಲು ಹಾಗೂ ಭವಿಷ್ಯ ರೂಪಿಸಲು ಸಹಕಾರಿಯಾಗಿದೆ ಎಂದು ಅವರು ತಿಳಿಸಿದರು.

ಇದೇ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಪುರಸಭಾ ವತಿಯಿಂದ ಸಿಗುವ ಆರ್ಥಿಕ ಪ್ರೋತ್ಸಾಹ ಧನವನ್ನುಮೂವರು ವಿದ್ಯಾರ್ಥಿಗಳಿಗೆ ವಿತರಿಸಲಾಯಿತು. ಗುತ್ತಿಗೆ ದಾರ ಸುದರ್ಶನ ಬಜ ಅವರನ್ನು ಗೌರವಿಸಲಾಯಿತು.

ವೇದಿಕೆಯಲ್ಲಿ ಕಾಲೇಜಿನ ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷೆ ರಜನಿ ಚಿಕ್ಕಯ್ಯಮಠ ಕಾರ್ಯಕ್ರಮ ದ ಅಧ್ಯಕ್ಷೆ ತೆ ವಹಿಸಿದ್ದರು.
ಪುರಸಭಾ ಸದಸ್ಯೆ ಝೀನತ್ ಫಿರೋಜ್, ಕಾಲೇಜು ಅಭಿವೃದ್ದಿ ಸಮಿತಿ ಸದಸ್ಯರಾದ ಶ್ರೀನಿವಾಸ ಮೆಲ್ಕಾರ್, ಸುಷ್ಮಾಚರಣ್ ಕಾಲೇಜು ಪ್ರಾಂಶುಪಾಲ ಯೂಸುಫ್ ವಿಟ್ಲ, ಪಿಡಬ್ಲೂಡಿ ಎ.ಇ.ಇ.ಶಿವಶಂಕರ್,ಸಹಾಯಕ ಇಂಜಿನಿಯರ್ ಅಮೃತ್ ಕುಮಾರ್, ಪ್ರಮುಖರಾದ ಮಚ್ಚೇಂದ್ರ ಸಾಲಿಯಾನ್,ರಮೇಶ್ ಸಾಲಿಯಾನ್, ಇಕ್ಬಾಲ್ ಗೂಡಿನ ಬಳಿ ಮತ್ತಿತರರು ಉಪಸ್ಥಿತರಿದ್ದರು.

More from the blog

ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನ ವಾರ್ಷಿಕ ಜಾತ್ರೆ..ಮಹಾರಥೋತ್ಸವ ಕಣ್ಣುಂಬಿಕೊಂಡ ಸಾವಿರಾರು ಭಕ್ತರು

ಬಂಟ್ವಾಳ: ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರೆಯಲ್ಲಿ ಎ. ೧೧ರಂದು ಸಂಜೆ ರಥೋತ್ಸವ ನಡೆಯಿತು. ಜಾತ್ರೆಯಲ್ಲಿ ಸಹಸ್ರಾರು ಭಕ್ತರು ಪಾಲ್ಗೊಂಡಿದ್ದರು. ಮಹಾಪೂಜೆಯ ಬಳಿಕ ದೇವರು ರಥಾರೋಹಣಗೊಂಡು ಸಾಂಕೇತಿಕವಾಗಿ ರಥವನ್ನು ಎಳೆಯಲಾಯಿತು. ಮಧ್ಯಾಹ್ನ ರಥಕ್ಕೆ...

ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆಯ ನಕಲಿ ಸುದ್ದಿ ಪ್ರಕಟ : ಕ್ರಮ ಕೈಗೊಳ್ಳುವಂತೆ ಸುಬ್ರಹ್ಮಣ್ಯ ಕಾಂಗ್ರೆಸ್ ವತಿಯಿಂದ ಪೊಲೀಸ್ ದೂರು

ಮುಖ್ಯಮಂತ್ರಿ ಸಿದ್ದರಾಮಯ್ಯ ರವರು ಕೋಮು ಭಾವನೆಯ ಹೇಳಿಕೆ ನೀಡಿದ್ದಾರೆಂಬ ನಕಲಿ ಸುದ್ದಿಯನ್ನು ವಾಟ್ಸಾಪ್ ಗ್ರೂಪ್ ಗಳಲ್ಲಿ ಪ್ರಚಾರ ಮಾಡುತ್ತಿರುವವರ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಸುಬ್ರಹ್ಮಣ್ಯ ಕಾಂಗ್ರೆಸ್ ವತಿಯಿಂದ ಸುಬ್ರಹ್ಮಣ್ಯ ಪೊಲೀಸ್ ಠಾಣೆಗೆ...

ಬಂಟ್ವಾಳದ ಬಡಗಕಜೆಕಾರು, ತೆಂಕಕಜೆಕಾರು ಗ್ರಾಮದಲ್ಲಿ ಮತದಾರರ ಮನೆಗೆ ಭೇಟಿ ನೀಡಿ ಮತಯಾಚನೆ ನಡೆಸಿದ ಶಾಸಕ ರಾಜೇಶ್ ನಾಯ್ಕ್

ಲೋಕ ಸಭಾ ಚುನಾವಣೆಯ ಹಿನ್ನಲೆಯಲ್ಲಿ ಕ್ಯಾ.ಬ್ರಿಜೇಶ್ ಚೌಟ ಅವರ ಗೆಲುವಿಗಾಗಿ "ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರ ಗ್ರಾಮ,ಮನೆ,ಮನ ಸಂಪರ್ಕ ಅಭಿಯಾನ"ದ ಅಂಗವಾಗಿ ಬಂಟ್ವಾಳದ ಬಡಗಕಜೆಕಾರು, ತೆಂಕಕಜೆಕಾರು ಗ್ರಾಮದಲ್ಲಿ ಮತದಾರರ ಮನೆಗೆ...

ಲೋಕಸಭಾ ಚುನಾವಣೆಯ ಹಿನ್ನೆಲೆ : ಚಾರ್ಮಾಡಿಯ ಮೂವರು ಗಡಿಪಾರು

ಬೆಳ್ತಂಗಡಿ: ಚುನಾವಣ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವ ಹಾಗೂ ಕೋಮು ಗಲಭೆಗಳಲ್ಲಿ ಭಾಗವಹಿಸುವ ಸಾಧ್ಯತೆ ಇರುವ ಕಾರಣ ಮೂವರು ರೌಡಿಶೀಟರ್‌ಗಳನ್ನು ಧರ್ಮಸ್ಥಳ ಪೊಲೀಸರು ಗಡಿಪಾರು ಮಾಡಿದ್ದಾರೆ. ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಗ್ರಾಮದ ನಿವಾಸಿಗಳಾದ...