Saturday, April 13, 2024

ಎದುರಿನ ವಾಹನದ ಲೈಟ್ ಡಿಮ್ ಡಿಪ್ ಎಡವಟ್ಟು : ಟಿಂಬರ್ ಸಾಗಾಟದ ಲಾರಿ ಪಲ್ಟಿ

ಮಡಂತ್ಯಾರು: ಎದುರಿನ ವಾಹನದ ಲೈಟ್ ಡಿಮ್ ಡಿಪ್ ಮಾಡುವ ಎಡವಟ್ಟಿನಿಂದಾಗಿ ಟಿಂಬರ್ ಸಾಗಾಟ ಲಾರಿಯೊಂದು ಮಗುಚಿ ಬಿದ್ದ ಘಟನೆ ಬೆಳ್ತಂಗಡಿ ತಾಲೂಕಿನ ಮಡಂತ್ಯಾರು ಪಣಕಜೆ ಅಡ್ತಿಲ ಸಮೀಪ ನಡೆದಿದೆ.

ಎದುರಿನಿಂದ ಬರುವ ವಾಹನಗಳ ಲೈಟ್ ಡಿಮ್ ಡಿಪ್ ಮಾಡುವ ಎಡವಟ್ಟಿನಿಂದಾಗಿ ಗುರುವಾಯನಕೆರೆ ಕಡೆಯಿಂದ ಮಂಗಳೂರಿಗೆ ರಬ್ಬರ್ ಮರದ ದಿಮ್ಮಿಗಳನ್ನು ಸಾಗಿಸುತ್ತಿದ್ದ ಲಾರಿ ಡ್ರೈವರ್ ಬ್ರೇಕ್ ಹಾಕಿದ್ದಾರೆ. ಈ ವೇಳೆ ಮರದ ದಿಮ್ಮಿಗಳು ಎಡಗಡೆಗೆ ವಾಲಿದ್ದರಿಂದ ಲಾರಿ ಮಗುಚಿಬಿದ್ದಿದೆ. ಡ್ರೈವರ್ ಸಿನಾನ್ ಗೆ ಸಣ್ಣ ಪುಟ್ಟ ಗಾಯಗಳಾಗಿದ್ದು ಅಪಾಯದಿಂದ ಪಾರಾಗಿದ್ದಾರೆ.

ಹೈವೆಯಲ್ಲಿ ಸಾಗುವ ವಾಹನಗಳ ಚಾಲಕರು ಹೈಬೀಮ್ ಲೈಟ್ ಹಾಕಿಕೊಂಡು ಹೋಗುವುದರಿಂದ ಉಂಟಾಗುವ ಇಂತಹ ಅಪಘಾತಗಳಿಗೆ ಹೊಣೆಯಾರು ಅಂತ ಘಟನಾ ಸ್ಥಳದಲ್ಲಿದ್ದ ಸಾರ್ವಜನಿಕರು ಪ್ರಶ್ನಿಸಿದ್ದಾರೆ.

More from the blog

ಎಳನೀರು ಸೇವಿಸಿ 136 ಮಂದಿ ಅಸ್ವಸ್ಥ ಪ್ರಕರಣ : ಬೊಂಡ ಫ್ಯಾಕ್ಟರಿ ಬಂದ್‌ ಗೆ ಆದೇಶ

ಮಂಗಳೂರು: ನಗರದ ಹೊರವಲಯದ ಅಡ್ಯಾರ್‌ನಲ್ಲಿರುವ ಬೊಂಡ ಫ್ಯಾಕ್ಟರಿಯ ಬೊಂಡ ನೀರು ಸೇವಿಸಿ ನೂರಾರು ಮಂದಿ ಅಸ್ವಸ್ಥಗೊಂಡ ಘಟನೆ ವರದಿಯಾಗಿದ್ದು, ಈ ಪ್ರಕರಣದ ಹಿನ್ನೆಲೆಯಲ್ಲಿ ಅಧಿಕಾರಿಗಳು ಗುರುವಾರ ಬೊಂಡ ಫ್ಯಾಕ್ಟರಿಗೆ ಬೀಗ ಜಡಿದಿದ್ದಾರೆ. ದ.ಕ.ಜಿಲ್ಲಾ ಆರೋಗ್ಯ...

ಸ್ವಿಮ್ಮಿಂಗ್​ ಪೂಲ್​ ನೀರಿಗೆ ಬಿದ್ದು 4ನೇ ತರಗತಿ ವಿದ್ಯಾರ್ಥಿ ಸಾವು

ಉಡುಪಿ‌: ಸ್ವಿಮ್ಮಿಂಗ್​ ಫೂಲ್​ನಲ್ಲಿ ಮುಳುಗಿ 4ನೇ ತರಗತಿಯ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ಕುಂದಾಪುರ ತಾಲೂಕಿನ ಹೆಂಗವಳ್ಳಿ ಸಮೀಪದ ಟಿನ್ ಟಾನ್ ಎನ್ವೆಂಚರ್ಸ್ ರೆಸಾರ್ಟ್​​ನಲ್ಲಿ ನಡೆದಿದೆ. ಉಡುಪಿ‌ಯ ಹೊಡೆ ಮೂಲದ ಮುಹಮ್ಮದ್ ಅರೀಝ್ ಮೃತ ವಿದ್ಯಾರ್ಥಿ. ದಾರುಸ್ಸಲಾಮ್...

ರಾಮೇಶ್ವರಂ ಕೆಫೆ ಬ್ಲಾಸ್ಟ್‌ ಪ್ರಕರಣ : ನಿದ್ದೆಯಲ್ಲಿದ್ದ ಉಗ್ರರನ್ನು ಬಡಿದೆಬ್ಬಿಸಿದ ಎನ್ಐಎ

ಬೆಂಗಳೂರು: ರಾಮೇಶ್ವರಂ ಕೆಫೆ ಬ್ಲಾಸ್ಟ್‌ ಪ್ರಕರಣಕ್ಕೆ ಸಂಬಂಧಪಟ್ಟಂತೆ ರಾಷ್ಟ್ರೀಯ ತನಿಖಾ ಸಂಸ್ಥೆ ಭರ್ಜರಿ ಕಾರ್ಯಾಚರಣೆ ನಡೆಸಿ, ಉಗ್ರರ ಗ್ಯಾಂಗ್ ಅನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ. ರಾಮೇಶ್ವರಂ ಕೆಫೆ ಬಾಂಬರ್‌ ಗ್ಯಾಂಗ್ ಬಂಧಿಸಲು NIA ಭರ್ಜರಿ ಬಲೆ...

ಚಿನ್ನದ ದರ ಮತ್ತೆ ಏರಿಕೆ : ಇಂದು ಗೋಲ್ಡ್​ ರೇಟ್​ ಎಷ್ಟಿದೆ ಗೊತ್ತಾ..?

ಚಿನ್ನ ದಿನದಿಂದ ದಿನಕ್ಕೆ ಶಾಕ್​ ನೀಡುತ್ತಾ ಬರುತ್ತಿದೆ. ಕಳೆದ ತಿಂಗಳು ಮಾರ್ಚ್ ನಲ್ಲಿ ಅರವತ್ತು ಸಾವಿರದ ಗಡಿಯಲ್ಲಿದ್ದ ಬಂಗಾರ ಏಪ್ರಿಲ್ ನಲ್ಲಿ ಇದೀಗ ಎಪ್ಪತ್ತು ಸಾವಿರದ ಗಡಿ ದಾಟಿದೆ. ಕೇವಲ ಒಂದು ತಿಂಗಳ...