ಲಾರಿ ಚಾಲನೆಯಲ್ಲಿರವಾಗಲೇ ಚಾಲನೋರ್ವನಿಗೆ ಮೂರ್ಚೆ ರೋಗ ಬಾಧಿಸಿ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ವಾಹನಗಳಿಗೆ ಡಿಕ್ಕಿ ಹೊಡೆದು ಬಳಿಕ ಪೆಟ್ರೋಲ್ ಬಂಕ್ ಗೆ ನುಗ್ಗಿದ ಘಟನೆ ಬಿಸಿರೋಡಿನಲ್ಲಿ ನಡೆದಿದೆ.
ಘಟನೆಯಿಂದ ಯಾವುದೇ ಪ್ರಾಣ ಅಪಾಯ ಆಗಿಲ್ಲ. ಮಂಗಳೂರು ಕಡೆಯಿಂದ ಹಾಸನಕ್ಕೆ ಖಾಲಿ ವಾಹನ ಹೋಗುತ್ತಿದ್ದ ವೇಳೆ ಬಿಸಿರೋಡಿನ ಪೆಟ್ರೋಲ್ ಪಂಪ್ ಬಳಿ ಘಟನೆ ನಡೆದಿದೆ.
ಚಾಲಕನಿಗೆ ಮೂರ್ಚೆ ರೋಗ ಬಾಧಿಸಿ ಈ ಘಟನೆ ನಡೆದಿದೆ ಎನ್ನಲಾಗಿದೆ. ಚಾಲಕ ಲಕ್ಷಣ್ ಎಂದು ಗುರುತಿಸಲಾಗಿದ್ದು, ಈತನನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಪೆಟ್ರೋಲ್ ಪಂಪ್ ನಲ್ಲಿ ಪೆಟ್ರೋಲ್ ಹಾಕುತ್ತಿದ್ದ ರಿಟ್ಸ್ ಕಾರಿಗೆ ಡಿಕ್ಕಿ ಹೊಡೆದ ಲಾರಿ ಬಳಿಕ ಬೈಕ್ ಹೀಗೆ ರಸ್ತೆ ಬದಿಯಲ್ಲಿ ನಿಲ್ಲಿಸಲಾಗಿದ್ದ ವಾಹನಗಳಿಗೆ ಡಿಕ್ಕಿ ಹೊಡೆದು ಬಳಿಕ ಪೆಟ್ರೋಲ್ ಪಂಪ್ ನಲ್ಲಿ ನಿಲ್ಲಿಸಲಾಗಿದ್ದ ನ್ಯಾನೋ ಕಾರಿಗೆ ಡಿಕ್ಕಿ ಹೊಡೆದು ನಿಂತಿದೆ.