Wednesday, April 17, 2024

ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಲಾರಿ

ಬೆಳ್ತಂಗಡಿ: ಮಂಗಳೂರಿನಿಂದ ಕೊಟ್ಟಿಗೆಹಾರದ ಕಡೆಗೆ ಹೆಂಚುಗಳನ್ನು ಸಾಗಿಸುತ್ತಿದ್ದ ಲಾರಿ ಮುಂಡಾಜೆ ಸಮೀಪ ಮಗುಚಿ ಬಿದ್ದ ಘಟನೆ ನಡೆದಿದೆ.

ಮಂಗಳೂರು-ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿಯ ಮುಂಡಾಜೆ ಸೇತುವೆ ಸಮೀಪ ಕಿರಿದಾದ ರಸ್ತೆಯಲ್ಲಿ ಲಾರಿ ಸಾಗುತ್ತಿದ್ದಾಗ ಅವಘಡ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿ ಲಾರಿ ರಸ್ತೆಯ ಬಲಬದಿಗೆ ಚಲಿಸಿ ಏಕಾಏಕಿ ಮಗುಚಿ ಬಿದ್ದಿದೆ. ಇದರಿಂದ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ಅಡಚಣೆ ಉಂಟಾಯಿತು. ಬಳಿಕ ಕ್ರೇನ್ ಸಹಾಯದಿಂದ ಲಾರಿಯನ್ನು ಎತ್ತಿ ಸ್ಥಳಾಂತರಿಸಲಾಯಿತು.

ಇನ್ನು ಲಾರಿಯಲ್ಲಿ ಇದ್ದ ಹೆಂಚುಗಳು ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದವು. ಇದರಿಂದ ಕೆಲವು ದ್ವಿಚಕ್ರ ವಾಹನ ಸವಾರರು ನಿಯಂತ್ರಣ ಕಳೆದುಕೊಂಡು ಬಿದ್ದ ಘಟನೆಯೂ ನಡೆಯಿತು. ಹೆಂಚಿನ ರಾಶಿ ಮೇಲೆ ಪ್ರಯಾಣಿಸಿದ ಕಾರೊಂದು ಸ್ವಲ್ಪದರಲ್ಲೇ ಅವಘಡದಿಂದ ಪಾರಾಗಿದೆ

More from the blog

ಲೋಕಸಭಾ ಚುನಾವಣೆ : ಬಂಟ್ವಾಳದ ಕಳ್ಳಿಗೆ ಗ್ರಾಮದಲ್ಲಿ ಮತಯಾಚನೆ ನಡೆಸಿದ ಶಾಸಕ ರಾಜೇಶ್ ನಾಯ್ಕ್

2024 ರ ಎ. 26 ರಂದು ನಡೆಯುವ ಲೋಕಸಭಾ ಚುನಾವಣೆಯಲ್ಲಿ ಕ್ಯಾ.ಬ್ರಿಜೇಶ್ ಚೌಟ ಅವರನ್ನು ಬಹುಮತದಿಂದ ಗೆಲ್ಲಿಸಿಕೊಡುವ ನಿಟ್ಟಿನಲ್ಲಿ "ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಗ್ರಾಮ,ಮನೆ,ಮನ ಸಂಪರ್ಕ ಅಭಿಯಾನ" ಎಂಬ...

ಬಂಟ್ವಾಳದ ನರಿಕೊಂಬು ಗ್ರಾಮದಲ್ಲಿ ಮತಯಾಚನೆ ನಡೆಸಿದ ಶಾಸಕ ರಾಜೇಶ್ ನಾಯ್ಕ್

2024 ರ ಎ. 26 ರಂದು ನಡೆಯುವ ಲೋಕಸಭಾ ಚುನಾವಣೆಯಲ್ಲಿ ಕ್ಯಾ.ಬ್ರಿಜೇಶ್ ಚೌಟ ಅವರನ್ನು ಬಹುಮತದಿಂದ ಗೆಲ್ಲಿಸಿಕೊಡುವ ನಿಟ್ಟಿನಲ್ಲಿ "ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಗ್ರಾಮ,ಮನೆ,ಮನ ಸಂಪರ್ಕ ಅಭಿಯಾನ" ಎಂಬ...

ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ಆತ್ಮಹತ್ಯೆ

ಬಂಟ್ವಾಳ: ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಫರಂಗಿಪೇಟೆಯಲ್ಲಿ ಮಹಿಳೆಯೊಬ್ಬರು ತಂದೆ ಹಾಗೂ ಪುತ್ರಿಯ ಮುಂದೆಯೇ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು‌ ನಡೆದಿದೆ. ಕುಮ್ಡೇಲು ನಿವಾಸಿ ಉಮೇಶ್ ಬೆಳ್ಚಡರ ಪತ್ನಿ...

ಏ.19 -28: ಇತಿಹಾಸ ಪ್ರಸಿದ್ಧ ಕಟ್ಟತ್ತಿಲ ಉರೂಸ್

ವಿಟ್ಲ: ಸಾಲೆತ್ತೂರು ಗ್ರಾಮದ ಕಟ್ಟತ್ತಿಲದಲ್ಲಿ ಅಂತ್ಯ ವಿಶ್ರಾಂತಿ ಹೊಂದುತ್ತಿರುವ ಇತಿಹಾಸ ಪ್ರಸಿದ್ಧ ಅಸ್ಸಯ್ಯಿದ್ ವಲಿಯುಲ್ಲಾಹಿ (ಖ.ಸಿ) ಅವರ ಹೆಸರಿನಲ್ಲಿ 2 ವರ್ಷಕ್ಕೊಮ್ಮೆ ನಡೆಸಿಕೊಂಡು ಬರುತ್ತಿರುವ ಉರೂಸ್ ಕಾರ್ಯಕ್ರಮ ಮತ್ತು ವಿವಿಧ ಆಧ್ಯಾತ್ಮಿಕ ಕಾರ್ಯಕ್ರಮ...