Tuesday, April 9, 2024

ಪಿಕಪ್- ಒಮ್ನಿ ಕಾರಿನ ನಡುವೆ ಭೀಕರ ಅಪಘಾತ ಪ್ರಕರಣ : ಗಂಭೀರ ಗಾಯಗೊಂಡಿದ್ದ ಚಾಲಕ ಚಿಕಿತ್ಸೆ ಫಲಕಾರಿಯಾಗದೆ ಸಾವು

ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ತಲಪಾಡಿ ಎಂಬಲ್ಲಿ ಪಿಕಪ್ ವಾಹನ ಹಾಗೂ ಒಮ್ನಿ ಕಾರಿನ ನಡುವೆ ಸಂಭವಿಸಿದ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಚಾಲಕ ಮೃತಪಟ್ಟಿದ್ದಾರೆ.

ತಲಪಾಡಿ ಬಸ್ ಡಿಪೋ ಬದಿಯ ರಸ್ತೆಯಲ್ಲಿ ಮರಗಳನ್ನು ತುಂಬಿ ಬರುತ್ತಿದ್ದ ಪಿಕಪ್ ವಾಹನ ರಾಷ್ಟ್ರೀಯ ಹೆದ್ದಾರಿಗೆ ಪ್ರವೇಶ ಮಾಡಿ ಬಿಸಿರೋಡು ಕಡೆಗೆ ಕ್ರಾಸ್ ಮಾಡುವ ವಿರುದ್ದ ದಿಕ್ಕಿನಲ್ಲಿ ಸಂಚರಿಸಿ ಬಿಸಿರೋಡು ಕಡೆಯಿಂದ ಮಂಗಳೂರು ‌ಕಡೆಗೆ ತನ್ನ‌ಪಾಡಿಗೆ ಬರುತ್ತಿದ್ದ ಅಮಾಯಕ ಒಮ್ನಿ ಕಾರಿಗೆ ಡಿಕ್ಕಿ ಹೊಡೆದಿದೆ.

ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಬ್ರಹ್ಮರ ಕೋಟ್ಲು ನಿವಾಸಿ ರಾಜೇಶ್ ಶೆಟ್ಟಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ತಲಪಾಡಿ ಎಂಬಲ್ಲಿ ಪಿಕಪ್ ವಾಹನ ಹಾಗೂ ಒಮ್ನಿ ಕಾರಿನ ನಡುವೆ ಸಂಭವಿಸಿದ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಕಾರು ಚಾಲಕ ಮೃತಪಟ್ಟಿದ್ದಾರೆ.
ಮೃತರನ್ನು ಬ್ರಹ್ಮರಕೋಟ್ಲು ನಿವಾಸಿ ರಾಜೇಶ್ ಶೆಟ್ಟಿ (50) ಎಂದು ಗುರುತಿಸಲಾಗಿದೆ.
ವಿರುದ್ದ ದಿಕ್ಕಿನಲ್ಲಿ ಬಂದ ಪಿಕಪ್ ವಾಹನ ಒಮ್ನಿ ಕಾರಿಗೆ ಡಿಕ್ಕಿಯಾಗಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಕಾರು ಚಾಲಕನನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಗೆ ಸ್ಪಂದಿಸಿ ದೆ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ‌
ರಾಜೇಶ್ ಶೆಟ್ಟಿ ಅವರ ಮನೆಯ ಸಾಕುಬೆಕ್ಕಿಗೆ ಉಷಾರಿಲ್ಲದ ಕಾರಣ ಬೆಕ್ಕನ್ನು ವೈದ್ಯರ ಬಳಿ ಪರೀಕ್ಷೆ ನಡೆಸಿ , ಔಷಧಿಯ ಜೊತೆಯಲ್ಲಿ ಮನೆಗೆ ಹೋಗುತ್ತಿದ್ದ ವೇಳೆ ತಲಪಾಡಿ ಎಂಬಲ್ಲಿ ಅಪಘಾತ ಸಂಭವಿಸಿದ್ದು, ಬೆಕ್ಕು ಸ್ಥಳದಲ್ಲಿಯೇ ಮೃತಪಟ್ಟಿತ್ತು.
ತಲಪಾಡಿ ಬಸ್ ಡಿಪೋ ಬದಿಯ ರಸ್ತೆಯಲ್ಲಿ ಮರಗಳನ್ನು ತುಂಬಿ ಬರುತ್ತಿದ್ದ ಪಿಕಪ್ ವಾಹನ ರಾಷ್ಟ್ರೀಯ ಹೆದ್ದಾರಿಗೆ ಪ್ರವೇಶ ಮಾಡಿ ಬಿಸಿರೋಡು ಕಡೆಗೆ ಕ್ರಾಸ್ ಮಾಡುವ ವಿರುದ್ದ ದಿಕ್ಕಿನಲ್ಲಿ ಸಂಚರಿಸಿ ಬಿಸಿರೋಡು ಕಡೆಯಿಂದ ಮಂಗಳೂರು ‌ಕಡೆಗೆ ತಲಪಾಡಿಗೆ ಬರುತ್ತಿದ್ದ ಒಮ್ನಿ ಕಾರಿಗೆ ಡಿಕ್ಕಿ ಹೊಡೆದಿದೆ.

ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಬ್ರಹ್ಮರ ಕೋಟ್ಲು ನಿವಾಸಿ ರಾಜೇಶ್ ಶೆಟ್ಟಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

More from the blog

ವೀರಕಂಬ ಗ್ರಾಮದ ಗ್ರಾಮದೈವ ಶ್ರೀ ಗಿಳಿಕಿಂಜತಾಯಿ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ

ಬಂಟ್ವಾಳ ತಾಲೂಕು ವೀರಕಂಬ ಗ್ರಾಮದ ಗ್ರಾಮದೈವ ಶ್ರೀ ಗಿಳಿಕಿಂಜತಾಯಿ ದೇವಸ್ಥಾನದ ವರ್ಷವದಿ ಜಾತ್ರೆಯು ಊರ ಪರವೂರ ಭಕ್ತದಿಗಳ ಸೇರಿಗೆಯಲ್ಲಿ ವಿಜೃಂಭಣೆಯಿಂದ ಜರಗಿತು. ದಿನಾಂಕ 7-4-2024 ರ ರಾತ್ರಿ ಗಿಳಿಕಿಂಜ ಬಂಡಾರ ಮನೆಯಿಂದ ದೈವದ ಬಂಡಾರ...

ಮತ್ತೆ ಏರಿಕೆ ಕಂಡ ಚಿನ್ನದ ಬೆಲೆ : ಇವತ್ತಿನ ‌ಬೆಲೆ ಎಷ್ಟು ಗೊತ್ತಾ…?

ಯುಗಾದಿ ಹಬ್ಬ. ಇದು ಸಂಬಂಧ ಬೆಸೆಯುವ ಹಬ್ಬ. ಅಂದಹಾಗೆಯೇ ದೇಶದಾದ್ಯಂತ ಜನರು ಇಂದು ಸಂಭ್ರಮದಲ್ಲಿದ್ದಾರೆ. ಆದರೆ ಇದರ ನಡುವೆ ಚಿನ್ನದ ಬೆಲೆ ಏರಿಕೆಯ ಬಿಸಿಯಿಂದ ಕೊಂಚ ಬೇಸರವು ಅವರಲ್ಲಿ ಆವರಿಸಿದೆ. ಕಳೆದ ಎರಡು ದಿನಗಳ...

ದಕ್ಷಿಣ ಕನ್ನಡ: ಪಕ್ಷೇತರ ಅಭ್ಯರ್ಥಿ ನಾಮಪತ್ರ ವಾಪಸ್‌ : 9 ಅಭ್ಯರ್ಥಿಗಳು ಕಣದಲ್ಲಿ

ಮಂಗಳೂರು: ಲೋಕಸಭಾ ಚುನಾವಣೆಗೆ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಒಬ್ಬ ಅಭ್ಯರ್ಥಿ ನಾಮಪತ್ರ ಹಿಂಪಡೆದಿದ್ದು, ಒಟ್ಟು ಒಂಬತ್ತು ಅಭ್ಯರ್ಥಿಗಳು ಕಣದಲ್ಲಿ ಉಳಿದಿದ್ದಾರೆ. ಚುನಾವಣೆಯಲ್ಲಿ ಸ್ಪರ್ಧಿಸಲು ನಾಮಪತ್ರ ಸಲ್ಲಿಸಿದ್ದ 11 ಮಂದಿಯ ಪೈಕಿ 10 ಅಭ್ಯರ್ಥಿಗಳ...

ಪ್ರಕೃತಿಯಲ್ಲಿ ಒಂದಿಲ್ಲೊಂದು ವಿಸ್ಮಯ : ಈ ರೀತಿಯ ಕಿತ್ತಾಳೆ ಹಣ್ಣು ನೋಡಿದ್ದೀರಾ…

ಬಂಟ್ವಾಳ: ಪಕೃತಿಯಲ್ಲಿ ಆಗೊಮ್ಮೆ ಈಗೊಮ್ಮೆ ವಿಚಿತ್ರ ಸಂಗತಿಗಳು ಕಾಣಸಿಗುತ್ತವೆ. ಹಾಗೇಯೆ ಇಲ್ಲೊಂದು ಕಿತ್ತಾಳೆ ಹಣ್ಣು ತನ್ನ ರೂಪದಲ್ಲಿ ಸ್ವಲ್ಪ ಮಟ್ಟಿಗೆ ವಿಚಿತ್ರ ಕಂಡಿದೆ. ಮಾಮೂಲಿಯಾಗಿ ಕಿತ್ತಾಳೆ ಬಣ್ಣ ಮತ್ತು ಆಕಾರದಲ್ಲಿ ಒಂದೇ ಆಗಿರುತ್ತದೆ. ಆದರೆ...