Sunday, April 7, 2024

ಅಗ್ನಿವೀರ್ ವಾಯುಸೇವೆಯ ನೇಮಕಾತಿಗಾಗಿ ಅರ್ಜಿ ಆಹ್ವಾನ ; ಇಲ್ಲಿದೆ ಡಿಟೈಲ್ಸ್‌

ಬೆಂಗಳೂರು: ಕೈಗಾರಿಕಾ ತರಬೇತಿ ಮತ್ತುಉದ್ಯೋಗಇಲಾಖೆ ವತಿಯಿಂದ ಭಾರತೀಯ ವಾಯುಪಡೆಯಯಲ್ಲಿ ಅವಿವಾಹಿತ ಯುವಕ ಯುವತಿಯರಿಗೆ ವಿಜ್ಞಾನ ಮತ್ತು ವಿಜ್ಞಾನೇತರ ಸ್ಟ್ರೀಮ್​ಗಳಲ್ಲಿ ಅಗ್ನಿಪಥ್ ಯೋಜನೆ ಅಡಿಯಲ್ಲಿ ಅಗ್ನಿವೀರ್ ವಾಯುಸೇವೆಯ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತರು ವೆಬ್ ಸೈಟ್ https://agnipathvayu.cdac.in ಗೆ ಭೇಟಿ ನೀಡಿ ಮಾರ್ಚ್ 31 ರೊಳಗೆ ಆನ್​ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿಯ ಶುಲ್ಕ ರೂ.250 ನಿಗದಿ ಮಾಡಲಾಗಿದೆ. ಹೆಚ್ಚಿನ ಮಾಹಿತಿಗಾಗಿ ವೆಬ್ ಸೈಟ್ http://careerindianairforce.cdac.in ಗೆ ಭೇಟಿ ನೀಡಬಹುದು ಅಥವಾ ಉಪ ಪ್ರಾದೇಶಿಕ ಉದ್ಯೋಗ ವಿನಿಮಯ ಕಛೇರಿ, ಕೆ.ಜಿ.ರಸ್ತೆ, ಬೆಂಗಳೂರು 560009 ಇಲ್ಲಿಗೆ ಭೇಟಿ ನೀಡಬಹುದು ಎಂದು ಉಪ ಪ್ರದೇಶಿಕ ಉದ್ಯೋಗ ವಿನಿಮಯ ಕಛೇರಿಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜ್ಞಾನ ಸ್ಟ್ರೀಮ್​ನ ಅಭ್ಯರ್ಥಿಗಳಾಗಿದ್ದರೆ ದ್ವಿತೀಯ ಪಿ.ಯು.ಸಿ ತರಗತಿಯಲ್ಲಿ ಗಣಿತ, ಭೌತಶಾಸ್ತ್ರ ಹಾಗೂ ಇಂಗ್ಲೀಷ್ ವಿಷಯಗಳನ್ನೊಳಗೊಂಡಂತೆ ಶೇ. 50 ಅಂಕಗಳನ್ನು ಪಡೆದು ಪಾಸಾಗಿರಬೇಕು ಹಾಗೂ ಇಂಗ್ಲೀಷ್ ವಿಷಯದಲ್ಲಿ ಕನಿಷ್ಠ 50 ಅಂಕ ಪಡೆದಿರಬೇಕು ಅಥವಾ 3 ವರ್ಷಗಳ ಡಿಪ್ಲೋಮಾ ಇನ್ ಇಂಜಿನಿಯರಿಂಗ್​ನಲ್ಲಿ ಶೇಕಡ 50 ಅಂಕಗಳೊಂದಿಗೆ ಮೆಕಾನಿಕಲ್ / ಎಲೆಕ್ಟ್ರಿಕ್ / ಎಲೆಕ್ಟ್ರಾನಿಕ್ಸ್/ ಕಂಪ್ಯೂಟರ್ ಸೈನ್ಸ್/ ಇನಫರ್ಮೇಷನ್ ಟೆಕ್ನಾಲಜಿ/ ಆಟೋಮೊಬೈಲ್/ ಇನ್​ಸ್ಟ್ರೊಮೆಂಟ್ ಟಕ್ನಾಲಜಿ ವೃತ್ತಿಗಳಲ್ಲಿ ಉತ್ತೀರ್ಣರಾಗಿರಬೇಕು ಹಾಗೂ ಇಂಗ್ಲೀಷ್ ವಿಷಯದಲ್ಲಿ ಕನಿಷ್ಠ 50 ಅಂಕ ಪಡೆದಿರಬೇಕು ಅಥವಾ ಎರಡು ವರ್ಷಗಳ ವೃತ್ತಿಪರ ಕೋರ್ಸ್​ಗಳಲ್ಲಿ ವೃತ್ತಿಯೇತರ ವಿಷಯಗಳಾದ ಗಣಿತ ಹಾಗೂ ಭೌತಶಾಸ್ತ್ರ ವಿಷಯಗಳೊಂದಿಗೆ ಶೇಕಡ 50 ಅಂಕಗಳನ್ನು ಪಡೆದು ಪಾಸಾಗಿರಬೇಕು.

ವಯೋಮಿತಿ: ಅಭ್ಯರ್ಥಿಗಳು 26-12-2002 ರಿಂದ 20-06-2006ರ ನಡುವೆ (ಎರಡೂ ದಿನಾಂಕಗಳನ್ನು ಒಳಗೊಂಡಂತೆ) ಜನಿಸಿದವರಾಗಿರಬೇಕು.

ದೇಹದಾರ್ಢ್ಯತೆ: ಪರುಷರು 152.5 ಸೆ.ಮೀ ಹಾಗೂ ಮಹಿಳೆಯರು 152 ಸೆಂ.ಮೀ ಎತ್ತವಿರಬೇಕು ಮತ್ತು ಎತ್ತರಕ್ಕೆ ಅನುಗುಣವಾದ ತೂಕವನ್ನು ಹೊಂದಿರಬೇಕು.

ನೇಮಕಾತಿ ವಿಧಾನ: ನೇಮಕಾತಿ ಪ್ರಕಿಯು ಎರಡು ಹಂತದ ಆನ್ ಲೈನ್ ಪರೀಕ್ಷೆಗಳು, ದೈಹಿಕ ಸಾಮರ್ಥ್ಯ ಪರೀಕ್ಷೆ, ಅಡಾಪ್ಟೀವ್ ಪರೀಕ್ಷೆ ಹಾಗೂ ವೈದ್ಯಕೀಯ ಪರೀಕ್ಷೆಗಳನ್ನು ಒಳಗೊಂಡಿರುತ್ತದೆ.

More from the blog

ಬಂಟ್ವಾಳ: ನಿಯಮ ಮೀರಿ ಚಾಲನೆ ಮಾಡಿ ಪೋಲೀಸರ ಕೈಗೆ ಸಿಕ್ಕಿಬಿದ್ದರೆ ದಂಡ ಗ್ಯಾರಂಟಿ….

ಬಂಟ್ವಾಳ: ರಸ್ತೆಯಲ್ಲಿ ಟ್ರಾಫಿಕ್ ಪೋಲೀಸರು ದಂಡ ವಸೂಲಿ ಮಾಡುವ ವೇಳೆ ಸುಳ್ಳು ಹೇಳಿಬಚಾವಾಗಲು ಸಾಧ್ಯವಿಲ್ಲ, ಜೊತೆಗೆ ಅಸಭ್ಯ ವರ್ತನೆ ಮಾಡಿದರೆ ಜೋಕೆ, ಅವರ ಶರೀರದಲ್ಲಿ ಕಣ್ಗಾವಲು ಕ್ಯಾಮರಾ ಅಳವಡಿಸಿಲಾಗಿದ್ದು, ಸೂಕ್ಷ್ಮವಾಗಿ ಎಲ್ಲವನ್ನು ಸೆರೆ...

ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ : ಚೆಂಡಿನ ಗದ್ದೆಯಲ್ಲಿ ಪ್ರಥಮ ಚೆಂಡು

ಇತಿಹಾಸ ಪ್ರಸಿದ್ಧ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಅಂಗವಾಗಿ ದೇವಳದ ಚೆಂಡಿನ ಗದ್ದೆಯಲ್ಲಿ ಇಂದು ಪ್ರಥಮ ಚೆಂಡು ನಡೆಯಿತು. ‌ ಇವತ್ತಿನಿಂದ ಮುಂದಿನ ಐದು ದಿನಗಳ ಕಾಲ ಇಲ್ಲಿ ಚೆಂಡು...

ಏಪ್ರಿಲ್ 7ರಂದು ಕರ್ನಾಟಕ ಜಾನಪದ ಪರಿಷತ್ತು ದ.ಕ.ಜಿಲ್ಲಾ ಬಂಟ್ವಾಳ ತಾಲೂಕು ಘಟಕದ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭ

ಬಂಟ್ವಾಳ: ಏಪ್ರಿಲ್ 7ರಂದು ಅಪರಾಹ್ನ 3 ಗಂಟೆಗೆ ಬಿ.ಸಿ.ರೋಡು ರಂಗೋಲಿ ಸಭಾಂಗಣದಲ್ಲಿ ಕರ್ನಾಟಕ ಜಾನಪದ ಪರಿಷತ್ತು ದ.ಕ.ಜಿಲ್ಲಾ ಬಂಟ್ವಾಳ ತಾಲೂಕು ಘಟಕದ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭ ನಡೆಯಲಿದೆ ಎಂದು ತಾಲೂಕು ಘಟಕದ...

ದ್ವಿಚಕ್ರ ವಾಹನಕ್ಕೆ ರಿಕ್ಷಾ ಡಿಕ್ಕಿ : ಸಹಸವಾರ ಸ್ಥಳದಲ್ಲೇ ಮೃತ್ಯು

ಬಂಟ್ವಾಳ: ರಿಕ್ಷಾ ಡಿಕ್ಕಿಯಾಗಿ ದ್ವಿಚಕ್ರ ವಾಹನದಲ್ಲಿ ಸಂಚಾರ ಮಾಡುತ್ತಿದ್ದ ಸಹಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನರಿಕೊಂಬು ಎಂಬಲ್ಲಿ ನಡೆದಿದೆ. ನರಿಕೊಂಬು ನಿವಾಸಿ ನೀಲಪ್ಪ ಪೂಜಾರಿ ಅವರ ಮಗ ಪವನ್ ( 17) ಮೃತಪಟ್ಟ ಬಾಲಕ. ಮನೆಯಿಂದ...