Saturday, April 20, 2024

ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಬಂಟ್ವಾಳ ಗ್ರಾಮಾಂತರ ಪೊಲೀಸರು

ಬಂಟ್ವಾಳ: ಹಳೆಯ ಪ್ರಕರಣವೊಂದರಲ್ಲಿ ಆರೋಪಿಯಾಗಿದ್ದುಕೊಂಡು ಕಳೆದ ಏಳು ವರ್ಷಗಳಿಂದ ಕೋರ್ಟ್ ಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವ್ಯಕ್ತಿಯೋರ್ವನನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರ ತಂಡ ಇಂದು ವಿಟ್ಲದಲ್ಲಿ ಬಂಧಿಸಿ ನ್ಯಾಯಾಲಯಕ್ಕೆ ‌ಹಾಜರುಪಡಿಸಿದ್ದಾರೆ.

ವಿಟ್ಲ ನಿವಾಸಿ ಆಕ್ಬರ್ ಎಂಬಾತನನ್ನು ಪೋಲೀಸರು ಬಂಧಿಸಿದ್ದಾರೆ.

ಅಕ್ರಮವಾಗಿ ಮರಳು ಸಾಗಾಟ ಮಾಡಿದ ಪ್ರಕರಣದ ಆರೋಪಿಯಾಗಿದ್ದ ಈತ ಅ ಬಳಿಕ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ.

ಖಚಿತ ಮಾಹಿತಿ ಮೇಲೆ ಈತನನ್ನು ವಿಟ್ಲದಲ್ಲಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, ನ್ಯಾಯಾಲಯ ಈತನಿಗೆ 10000 ಸಾವಿರ ರೂ ದಂಡ ವಿಧಿಸಿದೆ.

More from the blog

ಜನಪರವಾದ ಕೆಲಸ ಮಾಡದ ಬಿಜೆಪಿಗೆ ಸೋಲು ಖಚಿತ-ಚಾಮರಸ ಮಾಲೀಪಾಟೀಲ್

ಬಂಟ್ವಾಳ: 2024 ರ ಚುನಾವಣೆಯಲ್ಲಿ ಬಿಜೆಪಿ ಹಾಗೂ ಮಿತ್ರಪಕ್ಷವನ್ನು ಸೋಲಿಸುವ ತೀರ್ಮಾನವನ್ನು ಕರ್ನಾಟಕ ರಾಜ್ಯ ರೈತ ಸಂಘ ಮಾಡಿದ್ದು, ಈ ದೃಷ್ಟಿಯಿಂದ ರೈತರ ಮನವೊಲಿಸುವ ಕಾರ್ಯದಲ್ಲಿ ತೊಡಗಿದ್ದೇವೆ, ಈ ಬಾರಿ ಬಿಜೆಪಿ ನೆಲಕಚ್ಚುವುದು...

ಬಂಟ್ವಾಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೆ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್‌ ಭೇಟಿ

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 17-ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್‌ ರವರು ದಿನಾಂಕ 19-04-2024 ರಂದು ಬಂಟ್ವಾಳ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಭೇಟಿ ನೀಡಿದರು. ಸೂಕ್ಷ್ಮ ಮತಗಟ್ಟೆಗಳಿರುವ ಪ್ರದೇಶಗಳಿಗೆ...

ಟ್ಯಾಂಕರ್ ಹರಿದು ಪಾದಚಾರಿ ಸ್ಥಳದಲ್ಲೇ ಸಾವು

ಮಂಗಳೂರು: ಟ್ಯಾಂಕರ್ ಢಿಕ್ಕಿಯಾಗಿ ಪಾದಚಾರಿ ಸ್ಥಳದಲ್ಲೇ ಮೃತಪಟ್ಟ ಘಟನೆ ಶುಕ್ರವಾರ ಬೆಳಗ್ಗೆ ಕೂಳೂರಿನಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ. ಮೃತ ವ್ಯಕ್ತಿಯನ್ನು ಉತ್ತರ ಪ್ರದೇಶ ಮೂಲದ ಕಾರ್ಮಿಕ ಗುಡ್ಡು ಯಾದವ್ ಎನ್ನಲಾಗಿದೆ ಯಾದವ್ ರಸ್ತೆ ಬದಿ‌ ನಡೆದುಕೊಂಡು...

ಏ.21ರಂದು ನಮ್ಮ ನಡೆ ಮತಗಟ್ಟೆಯ ಕಡೆ ಅಭಿಯಾನ

ಮತದಾರರನ್ನು ಮತಗಟ್ಟೆಗೆ ಸೆಳೆಯುವ ಸಲುವಾಗಿ ಚುನಾವಣಾ ಆಯೋಗ ಸ್ವೀಪ್ ಕಾರ್ಯಕ್ರಮದ ಮೂಲಕ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದೆ. ಅದರಂತೆ ಎ.21ರಂದು ಎಲ್ಲಾ ಬೂತ್ ಮತಗಟ್ಟೆಗಳಲ್ಲಿ ನಮ್ಮ ನಡೆ ಮತಗಟ್ಟೆಯ ಕಡೆ ಅಭಿಯಾನ ಹಮ್ಮಿಕೊಂಡಿದ್ದು, ಬಂಟ್ವಾಳ...