Saturday, April 20, 2024

ತಾಲೂಕಿನಲ್ಲಿ ರೂ 266 ಕೋಟಿ ವೆಚ್ಚದ ಕಿಂಡಿ ಅಣೆಕಟ್ಟು ಸಹಿತ ಸಂಪರ್ಕ ರಸ್ತೆ ಉದ್ಘಾಟಿಸಿದ ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ಸಜೀಪಮೂಡ ಗ್ರಾಮದ ಕಲ್ಲಗುಂಡಿಯಲ್ಲಿ ಸಣ್ಣ ನೀರಾವರಿ ಇಲಾಖೆಯ ಮೂಲಕ ೨ ಕೋ.ರೂ.ವೆಚ್ಚದಲ್ಲಿ ನಿರ್ಮಾಣಗೊಂಡ ಸೇತುವೆ ಸಹಿತ ಕಿಂಡಿ ಅಣೆಕಟ್ಟನ್ನು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿಗುತ್ತು ಉದ್ಘಾಟಿಸಿದರು. ‌
ಬಳಿಕ ಮಾತನಾಡಿದ ಅವರು, ಬಿಜೆಪಿ ಸರಕಾರವು ನೀರಿಗೆ ಹೆಚ್ಚಿನ ಮಹತ್ವ ನೀಡಿದ್ದು, ಹಿಂದಿನ ಸಿಎಂ ಬಿಎಸ್ ವೈ ಅವರು ಅನುದಾನ ಇಟ್ಟು ವಾರ್ಷಿಕವಾಗಿ ೫೦೦ ಕೋ.ರೂ.ಗಳನ್ನು ನೀಡಲಾಗುತ್ತಿದೆ‌. ಬಂಟ್ವಾಳ ಕ್ಷೇತ್ರದಲ್ಲಿ ೨೬೬ ಕೋ.ರೂ.ವೆಚ್ಚದಲ್ಲಿ ಸೇತುವೆ ಸಹಿತ ಕಿಂಡಿ ಅಣೆಕಟ್ಟು ನಿರ್ಮಾಣ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಕಲ್ಲಗುಂಡಿಗೆ ಸಂಪರ್ಕ ರಸ್ತೆಗೂ ಅನುದಾನ ನೀಡುವ ಕಾರ್ಯ ಮಾಡಲಾಗುವುದು ಎಂದರು.

ವೇದಿಕೆಯಲ್ಲಿ ಬುಡಾ ಅಧ್ಯಕ್ಷ ಬಿ.ದೇವದಾಸ್ ಶೆಟ್ಟಿ, ಬಿಜೆಪಿ ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಶ್ರೀಕಾಂತ್ ಶೆಟ್ಟಿ ಸಂಕೇಶ, ಸಣ್ಣ ನೀರಾವರಿ ಇಲಾಖೆಯ ಸಹಾಯಕ ಎಂಜಿನಿಯರ್ ಶಿವಪ್ರಸನ್ನ, ಸಜೀಪಮೂಡ ಗ್ರಾ.ಪಂ.ಸದಸ್ಯರಾದ ಸೀತಾರಾಮ ಅಗೋಳಿಬೆಟ್ಟು, ಪ್ರಶಾಂತ್ ವಿಟ್ಲುಕೋಡಿ, ಗೋಳ್ತಮಜಲು ಗ್ರಾ.ಪಂ.ಸದಸ್ಯ ಎಲಿಯಾಸ್ ಡಿಸೋಜ, ಸುಂದರಿ ಬೊಳ್ಳಾಯಿ, ಪ್ರಮುಖರಾದ ಯಶವಂತ ನಾಯ್ಕ್ ನಗ್ರಿ, ವಸಂತ ಕಲ್ಲಗುಂಡಿ ಉಪಸ್ಥಿತರಿದ್ದರು.
ರವಿ ಪೂಜಾರಿ ಕಲ್ಲಗುಂಡಿ ಸ್ವಾಗತಿಸಿದರು. ಚಂದ್ರಹಾಸ ವಂದಿಸಿದರು.

More from the blog

ವಿಟ್ಲ ವ್ಯಾಪ್ತಿಯ ಪ್ರಮುಖ ಧಾರ್ಮಿಕ ಕೇಂದ್ರಗಳಿಗೆ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಭೇಟಿ

ವಿಟ್ಲ: ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಅವರು ಶನಿವಾರ ವಿಟ್ಲದ ವಿವಿಧ ಕಡೆಗಳಿಗೆ ಭೇಟಿ ನೀಡಿದರು. ಒಡಿಯೂರು ಶ್ರೀ ಗುರುದೇವ ದತ್ತ ಸಂಸ್ಥಾನಕ್ಕೆ ಭೇಟಿ ನೀಡಿದ ಲೋಕಸಭಾ ಚುನಾವಣೆಯ ಕಾಂಗ್ರೆಸ್...

ಸೈಕಲ್ ರಿಪೇರಿಗೆ ಹಟ : ಬಾಲಕ ಆತ್ಮಹತ್ಯೆ

ಉಪ್ಪಿನಂಗಡಿ: ಬಾಲಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಕರಾಯ ಗ್ರಾಮದ ಶಿವಗಿರಿ ದುಗಲಾಡಿ ಎಂಬಲ್ಲಿ ನಡೆದಿದೆ. ಮೂಲತಃ ಪಂಜದ ಅಳ್ಪೆಬನದ ನಿವಾಸಿ. ದಿ. ರೋಹಿತ್ ಮತ್ತು ರಮ್ಯ ದಂಪತಿಗಳ ಪುತ್ರ ಖಾಸಗಿ ಶಾಲೆಯ 8ನೇ ತರಗತಿಯ...

ಆಸ್ಪತ್ರೆಯಿಂದ ಆಂಬ್ಯುಲೆನ್ಸ್ ನಲ್ಲಿ ತೆರಳಿ ಸಿಇಟಿ ಪರೀಕ್ಷೆ ಬರೆದ ಆ್ಯಸಿಡ್ ದಾಳಿ ಸಂತ್ರಸ್ಥೆ ವಿದ್ಯಾರ್ಥಿನಿ

ಕಡಬ: ಆ್ಯಸಿಡ್ ದಾಳಿಗೆ ಒಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕಡಬದ ಸರ್ಕಾರಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಆಂಬ್ಯುಲೆನ್ಸ್ ಮೂಲಕ ತೆರಳಿ ಸಿಇಟಿ ಪರೀಕ್ಷೆ ಬರೆದಿದ್ದಾರೆ. ಮಾರ್ಚ್ 4ರಂದು ಕಾಲೇಜಿನಲ್ಲಿ ಪರೀಕ್ಷೆಗೆ ತಯಾರಾಗುತ್ತಿದ್ದ ವೇಳೆ ಅಬಿನ್...

ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಕಚೇರಿಗೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಭೇಟಿ

ದಕ್ಷಿಣ ಕನ್ನಡ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಇಂದು ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಕಚೇರಿಗೆ ದ.ಕ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ರವರು ಭೇಟಿ ನೀಡಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರ ಸಮಾಲೋಚನಾ...