Thursday, April 11, 2024

ಕೇಂದ್ರ ಸರ್ಕಾರದ ಎಲ್ಲಾ ನಡವಳಿಕೆಗಳು ಸಂವಿಧಾನ ವಿರೋಧಿ : ಬಂಟ್ವಾಳ ತಾಲೂಕು ಸಮಾನ ಮನಸ್ಕ ಸಂಘಟನೆಗಳ ಸಮನ್ವಯ ಸಮಿತಿ ಆರೋಪ

ಬಂಟ್ವಾಳ: ರಾಹುಲ್‌ಗಾಂಧಿ ಅನರ್ಹತೆ ವಿಚಾರ ಸೇರಿದಂತೆ ಕೇಂದ್ರ ಸರ್ಕಾರದ ಎಲ್ಲಾ ನಡವಳಿಕೆಗಳು ಸಂವಿಧಾನ ವಿರೋಧಿಯಾಗಿದೆ ಎಂದು ಬಂಟ್ವಾಳ ತಾಲೂಕು ಸಮಾನ ಮನಸ್ಕ ಸಂಘಟನೆಗಳ ಸಮನ್ವಯ ಸಮಿತಿ ಆರೋಪಿಸಿದೆ.

ಈ ಕುರಿತು ಬಂಟ್ವಾಳ ತಾಲೂಕು ತಹಶೀಲ್ದಾರರ ಮೂಲಕ‌ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿರುವ ಸಮಿತಿ, ಎಲ್ಲಾ ಹಂತದ ಸರ್ಕಾರಗಳು ಜವಬ್ದಾರಿಯುತ ನಡೆಯನ್ನು ಅನುಸರಿಸುವಂತೆ ಒತ್ತಾಯಿಸಿದ್ದಾರೆ.

ಈ ವೇಳೆ ಸಮಿತಿ ಅಧ್ಯಕ್ಷ ಮೋಹನ್‌‌ ಶೆಟ್ಟಿ ಪಂಜಿಕಲ್ಲು, ಪ್ರಧಾನ ಕಾರ್ಯದರ್ಶಿ ಸುರೇಶ್ ಕುಮಾರ್, ಪ್ರಮುಖರಾದ ಅಬ್ಬಾಸ್ ಅಲಿ, ಪ್ರಕಾಶ ಶೆಟ್ಟಿ ಶ್ರೀಶೈಲ, ಪ್ರಭಾಕರ ದೈವಗುಡ್ಡೆ, ಮ್ಯಾಥ್ಯೂ, ಹರೀಶ, ಕೇಶವ ಪೂಜಾರಿ, ಕೇಶವ ಬಿ., ಎಂ.ಹೆಚ್.ಮುಸ್ತಾಫಾ, ಅಬ್ದುಲ್‌ಶರೀಫ್ , ಎಂ.ಬಿ.ಭಾಸ್ಕರ್, ರಿಚರ್ಡ್ ಶಂಭೂರು, ಡೊಂಬಯ್ಯ ಕುಲಾಲ, ಬಶೀರ್ ಕಾರಾಜೆ, ಇಬ್ರಾಹಿಂ ಉಳಿ ಮೊದಲಾದವರಿದ್ದರು.

More from the blog

ಲೋಕಸಭಾ ಚುನಾವಣೆಯ ಹಿನ್ನೆಲೆ : ಚಾರ್ಮಾಡಿಯ ಮೂವರು ಗಡಿಪಾರು

ಬೆಳ್ತಂಗಡಿ: ಚುನಾವಣ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವ ಹಾಗೂ ಕೋಮು ಗಲಭೆಗಳಲ್ಲಿ ಭಾಗವಹಿಸುವ ಸಾಧ್ಯತೆ ಇರುವ ಕಾರಣ ಮೂವರು ರೌಡಿಶೀಟರ್‌ಗಳನ್ನು ಧರ್ಮಸ್ಥಳ ಪೊಲೀಸರು ಗಡಿಪಾರು ಮಾಡಿದ್ದಾರೆ. ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಗ್ರಾಮದ ನಿವಾಸಿಗಳಾದ...

ಎಳನೀರು ಕುಡಿದು ಅಸ್ವಸ್ಥ ಪ್ರಕರಣ : ಫ್ಯಾಕ್ಟರಿಗೆ ಅಧಿಕಾರಿಗಳ ತಂಡ ಭೇಟಿ ನೀಡಿ ಪರಿಶೀಲನೆ

ಮಂಗಳೂರು: ನಗರದ ಹೊರವಲಯದ ಎಳನೀರು ಫ್ಯಾಕ್ಟರಿಯೊಂದರಿಂದ ತಂದ ಎಳನೀರು ಕುಡಿದು ಕೆಲವರು ಅಸ್ವಸ್ಥರಾಗಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ ವರದಿ ಆಧಾರದಲ್ಲಿ ದ.ಕ ಜಿಲ್ಲಾ ಆರೋಗ್ಯಾಧಿಕಾರಿ ಡಾ| ತಿಮ್ಮಯ್ಯ ಅವರು ಫ್ಯಾಕ್ಟರಿಗೆ ಭೇಟಿ...

ಹಿತೈಷಿ ತರಬೇತಿ ಕೇಂದ್ರದ ಎಲ್ಲಾ ವಿದ್ಯಾರ್ಥಿಗಳು ಉತ್ತಮ ಫಲಿತಾಂಶದೊಂದಿಗೆ ತೇರ್ಗಡೆ

2023-24ನೇ ಸಾಲಿನ ದ್ವಿತೀಯ ಪಿ.ಯು.ಸಿ ಪರೀಕ್ಷೆಯಲ್ಲಿ ಪಾಣೆಮಂಗಳೂರು, ನರಿಕೊಂಬುವಿನಲ್ಲಿರುವ ಹಿತೈಷಿ ತರಬೇತಿ ಕೇಂದ್ರದ ಎಲ್ಲಾ ವಿದ್ಯಾರ್ಥಿಗಳು ಉತ್ತಮ ಅಂಕಗಳೊಂದಿಗೆ ತೇರ್ಗಡೆಯಾಗಿದ್ದಾರೆ. ಕು.ಕೀರ್ತನ ಶೇ.95.6% ಅಂಕಗಳೊಂದಿಗೆ ಅತ್ಯುತ್ತಮ ಶ್ರೇಣಿಯಲ್ಲಿ ತೇರ್ಗಡೆಯಾಗಿರುತ್ತಾರೆ ಎಂದು ಸಂಸ್ಥೆಯ ಪ್ರಕಟನೆಯಲ್ಲಿ ತಿಳಿಸಲಾಗಿದೆ. 2024-25ನೇ...

ಬಂಟ್ವಾಳದ ಉಳಿ ಗ್ರಾಮದಲ್ಲಿ ಮತದಾರರ ಮನೆಗೆ ಭೇಟಿ ನೀಡಿ ಮತಯಾಚನೆ ನಡೆಸಿದ ಶಾಸಕ ರಾಜೇಶ್ ನಾಯ್ಕ್

ಲೋಕ ಸಭಾ ಚುನಾವಣೆಯ ಹಿನ್ನಲೆಯಲ್ಲಿ ಕ್ಯಾ.ಬ್ರಿಜೇಶ್ ಚೌಟ ಅವರ ಗೆಲುವಿಗಾಗಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರ ಗ್ರಾಮ,ಮನೆ,ಮನ ಅಭಿಯಾನದ ಅಂಗವಾಗಿ ಬಂಟ್ವಾಳದ ಉಳಿ ಗ್ರಾಮದಲ್ಲಿ ಮತದಾರರ ಮನೆಗೆ ಬೇಟಿ ನೀಡಿ...