Wednesday, April 17, 2024

ಬಿಸಿರೋಡು-ಅಡ್ಡಹೊಳೆವರೆಗಿನ ಚತುಷ್ಪ ಹೆದ್ದಾರಿ ನಿರ್ಮಾಣದ ಕಾಮಗಾರಿ ಅಸಮರ್ಪಕ ನಿರ್ವಹಣೆಯಿಂದ ನಿತ್ಯ ಸಂಚಾರಕ್ಕೆ ಅಡಚಣೆ : , ಇಂದು ಮೆಲ್ಕಾರ್ ನಲ್ಲಿ ತಾಸು ಗಟ್ಟಲೆ ಟ್ರಾಪಿಕ್ ಜಾಮ್

ಬಂಟ್ವಾಳ: ರಾಷ್ಟ್ರೀಯ ಹೆದ್ದಾರಿ ಬಿಸಿರೋಡು – ಅಡ್ಡಹೊಳೆವರೆಗಿನ ಚತುಷ್ಪ ಹೆದ್ದಾರಿ ನಿರ್ಮಾಣದ ಕಾಮಗಾರಿ ಗುತ್ತಿಗೆ ವಹಿಸಿಕೊಂಡ ಕೆ.ಎನ್.ಆರ್.ಸಿ.ಕಂಪೆನಿಯು ಅಸಮರ್ಪಕ ಕಾಮಗಾರಿ ನಿರ್ವಹಣೆಯಿಂದ ನಿತ್ಯ ಸಂಚಾರಕ್ಕೆ ಅಡಚಣೆ ಉಂಟಾಗುತ್ತಿದ್ದು, ಇಂದು ಮಾ.20 ರಂದು ಸೋಮವಾರ ಬೆಳಿಗ್ಗೆ ಯಿಂದಲೇ ಮೆಲ್ಕಾರ್ ನಲ್ಲಿ ತಾಸು ಗಟ್ಟಲೆ ಟ್ರಾಪಿಕ್ ಉಂಟಾಗಿತ್ತು.

ಇದೇ ರೀತಿ ರಾಷ್ಟ್ರೀಯ ಹೆದ್ದಾರಿ ಉದ್ದಕ್ಕೂ ಅನೇಕ ಬಾರಿ ಟ್ರಾಫಿಕ್ ಜಾಮ್ ಉಂಟಾಗಿದ್ದರು,ಕಂಪೆನಿ ಮಾತ್ರ ನಿರ್ವಹಣೆಯಲ್ಲಿ ಬದಲಾವಣೆ ಆಗಿಲ್ಲ ಎಂದು ಸಾರ್ವಜನಿಕ ರು ಆರೋಪ ವ್ಯಕ್ತಪಡಿಸಿದ್ದಾರೆ.

ನಿತ್ಯದೂಳು, ಕೆಸರು,

ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯ ವೇಳೆ ಸಾರ್ವಜನಿಕ ಓಡಾಟ ಕ್ಕೆ ಬದಲಿ ವ್ಯವಸ್ಥಿತವಾಗಿ ರಸ್ತೆ ನಿರ್ಮಾಣ ಮಾಡಿಕೊಡಬೇಕು ಎಂಬ ನಿಯಮವನ್ನು ಗಾಳಿಗೆ ತೂರಿ , ಅಸಮರ್ಪಕ ರೀತಿಯಲ್ಲಿ ಜನರಿಗೆ ಕಿರಿಕಿರಿಯಾಗುವ ರೀತಿಯಲ್ಲಿ ಬೇಕಾಬಿಟ್ಟಿಯಾಗಿ ಕಾಮಗಾರಿ ನಡೆಸುತ್ತಿದೆ ಎಂಬ ಆರೋಪ ಕೇಳಿ ಬಂದಿದೆ.

ರಸ್ತೆ ಯೆಲ್ಲಾ ಅಗೆದು ಬಿಟ್ಟು ಜನರು ಸಂಚಾರಕ್ಕೆ ಅಯೋಗ್ಯವಾದ ಜಲ್ಲಿಕಲ್ಲು ಮಿಶ್ರಿತ ರಸ್ತೆಯಲ್ಲಿ ಸಂಚಾರ ಮಾಡುವ ಸ್ಥಿತಿಒಂದೆಡೆಯಾದರೆ ಇನ್ನೊಂದು ಕಡೆಯಲ್ಲಿ ಭಯಾನಕ ರೋಗಕ್ಕೆ ಕಾರಣವಾಗುವ ದೂಳು ನಿತ್ಯ ಕಾಣಿಸುತ್ತಿದೆ.

ದೂಳು ಕಡಿಮೆಮಾಡಲು ರಸ್ತೆ ಗೆ ಹಾಕುವ ನೀರಿನಿಂದ ಕೆಸರು ಗದ್ದೆಯಲ್ಲಿ ಸಂಚಾರ ಮಾಡವು ವಾಹನ ಸವಾರರು. ಅತ್ತ ಕೆಸರು ಇತ್ತ ದೂಳು ಇದರಿಂದ ಬೆಸೆತ್ತ ಜನರಿಗೆ ಸಾಕಾಗುವುದಿಲ್ಲ ಎಂದು ನಿತ್ಯ ಬ್ಲಾಕ್ ಇದು ಯಾವ ನ್ಯಾಯ ಎಂದು ಸಾರ್ವಜನಿಕರು ಪ್ರಶ್ನಿಸಿದ್ದಾರೆ‌.

More from the blog

ಏ.19 -28: ಇತಿಹಾಸ ಪ್ರಸಿದ್ಧ ಕಟ್ಟತ್ತಿಲ ಉರೂಸ್

ವಿಟ್ಲ: ಸಾಲೆತ್ತೂರು ಗ್ರಾಮದ ಕಟ್ಟತ್ತಿಲದಲ್ಲಿ ಅಂತ್ಯ ವಿಶ್ರಾಂತಿ ಹೊಂದುತ್ತಿರುವ ಇತಿಹಾಸ ಪ್ರಸಿದ್ಧ ಅಸ್ಸಯ್ಯಿದ್ ವಲಿಯುಲ್ಲಾಹಿ (ಖ.ಸಿ) ಅವರ ಹೆಸರಿನಲ್ಲಿ 2 ವರ್ಷಕ್ಕೊಮ್ಮೆ ನಡೆಸಿಕೊಂಡು ಬರುತ್ತಿರುವ ಉರೂಸ್ ಕಾರ್ಯಕ್ರಮ ಮತ್ತು ವಿವಿಧ ಆಧ್ಯಾತ್ಮಿಕ ಕಾರ್ಯಕ್ರಮ...

ಲೋಕಸಭಾ ಚುನಾವಣೆ : ದಕ್ಷಿಣ ಕನ್ನಡ ಕ್ಷೇತ್ರದ ಸಂಯೋಜಕರನ್ನಾಗಿ ಅಬ್ದುಲ್ ರೆಹಮಾನ್ ಪಡ್ಪು ನೇಮಕ

ಲೋಕಸಭಾ ಚುನಾವಣೆಯ ದಕ್ಷಿಣ ಕನ್ನಡ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸಲು ಸಂಯೋಜಕರನ್ನಾಗಿ ಅಬ್ದುಲ್ ರೆಹಮಾನ್ ಪಡ್ಪು ಅವರನ್ನು ನೇಮಕ ಮಾಡಲಾಗಿದೆ.    

ವಿಟ್ಲ ಪೇಟೆಯಲ್ಲಿ ಕಾಂಗ್ರೆಸ್ ರೋಡ್ ಶೋ: ಸುಡುಬಿಸಿಲಿಗೂ ಜಗ್ಗದ ಉತ್ಸಾಹ

ವಿಟ್ಲ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಅವರು ಮಂಗಳವಾರ ವಿಟ್ಲ ಪೇಟೆಯಲ್ಲಿ ರೋಡ್ ಶೋ ನಡೆಸಿ, ಪ್ರಚಾರ ಕಾರ್ಯ ನಡೆಸಿದರು. ಧಾರ್ಮಿಕ ಕೇಂದ್ರಗಳಲ್ಲಿ ವಿಶೇಷ ಪ್ರಾರ್ಥನೆ ನಡೆಸಿ, ಬಳಿಕ...

ದ.ಕ ಜಿಲ್ಲೆಯ 42 ಮಂದಿ ಜೆಡಿಎಸ್ ಪದಾಧಿಕಾರಿಗಳು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ

ಮಂಗಳೂರು: ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಪಕ್ಷ ಬಿಜೆಪಿ ಜತೆ ಮೈತ್ರಿ ಮಾಡಿಕೊಂಡಿರುವುದನ್ನು ವಿರೋಧಿಸಿ ದ.ಕ ಜಿಲ್ಲೆಯ 42 ಮಂದಿ ಜೆಡಿಎಸ್ ಪದಾಧಿಕಾರಿಗಳು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಗೊಂಡರು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಜಿಲ್ಲಾ ಕಾಂಗ್ರೆಸ್...