Tuesday, April 9, 2024

ಲಾರಿ – ಬೈಕ್ ಡಿಕ್ಕಿ: ಗುರುವಾಯನಕೆರೆಯ ಯುವಕ ಸಾವು, ಮತ್ತೋರ್ವ ಗಂಭೀರ

ಬೆಳ್ತಂಗಡಿ: ಬೈಕ್ ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸಾವನ್ನಪ್ಪಿ ಇನ್ನೋರ್ವ ಗಂಭೀರ ಗಾಯಗೊಂಡ ಘಟನೆ ಧರ್ಮಸ್ಥಳ ಸಮೀಪದ ಮುಂಡ್ರುಪ್ಪಾಡಿ ಎಂಬಲ್ಲಿ‌ ನಡೆದಿದೆ.

ಕರ್ತವ್ಯ ಮುಗಿಸಿ ವಾಪಸ್ ಬರುವ ಸಂದರ್ಭ ಮುಂಡ್ರುಪಾಡಿಯಲ್ಲಿ ಬೈಕ್ ಗೆ ಲಾರಿ ಡಿಕ್ಕಿ ಹೊಡೆದಿದ್ದು, ಈ ವೇಳೆ ಬೈಕ್ ನಲ್ಲಿದ್ದ ಇಬ್ಬರಿಗೆ ಗಂಭೀರ ಗಾಯವಾಗಿದೆ.

ಗಾಯಾಳುಗಳನ್ನು ತಕ್ಷಣ ಉಜಿರೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ವೇಳೆ ಬೈಕ್ ಸವಾರ ಗುರುವಾಯನಕೆರೆ ನಿವಾಸಿ ಪ್ರಸಾದ್ ಶೆಟ್ಟಿ ಸಾವನ್ನಪ್ಪಿದ್ದು, ಸಹಸವಾರ ವಿಶ್ವನಾಥ್ ಗಂಭೀರ ಗಾಯಗೊಂಡಿದ್ದು ಅವರನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ‌.

ಈ ಬಗ್ಗೆ ಬೆಳ್ತಂಗಡಿ ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

More from the blog

ಭಕ್ತರೇ ಗಮನಿಸಿ…. ಈ ದಿನ ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ಆಗೇಲು ಸೇವೆ ಇರುವುದಿಲ್ಲ

ಬಂಟ್ವಾಳ ತಾಲೂಕು ಸಜೀಪಮೂಡ ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ಏ.12, 14, 16 ರಂದು ಆಗೇಲು ಸೇವೆ ಇರುವುದಿಲ್ಲ. ಏ. 19ರಿಂದ ಆಗೇಲು ಸೇವೆ ನಡೆಯುತ್ತದೆ ಹಾಗೂ ಏ.21 ರಂದು ಆಗೇಲು ಸೇವೆ...

ಲೋಕಸಭಾ ಚುನಾವಣೆ : ಅಕ್ರಮ ವ್ಯವಹಾರಿಗಳಿಗೆ ರಹದಾರಿಯಾದ ಸಾಲೆತ್ತೂರು ಬಳಿಯ ಕೂಡುರಸ್ತೆ ಚೆಕ್ ಪೋಸ್ಟ್

ವಿಟ್ಲ: ಲೋಕಸಭಾ ಚುನಾವಣೆಗೆ ಈಗಾಗಲೇ ದಿನ ನಿಗದಿಯಾಗಿದ್ದು, ಜಿಲ್ಲಾಡಳಿತ ಸರ್ವ ಸನ್ನದ್ದವಾಗಿದೆ. ಅಕ್ರಮಗಳನ್ನು ತಡೆಗಟ್ಟುವ ಉದ್ದೇಶದಿಂದ ದಕ್ಷಿಣ ಕನ್ನಡ ಜಿಲ್ಲಾಡಳಿತವು ಗಡಿಪ್ರದೇಶ ಸೇರಿದಂತೆ ಜಿಲ್ಲೆಯಲ್ಲಿ 23 ಕಡೆಗಳಲ್ಲಿ ಚೆಕ್ ಪೋಸ್ಟ್ ಗಳನ್ನು ಸ್ಥಾಪಿಸಿದೆ. ಆದರೆ...

5,8,9,11ನೇ ತರಗತಿ ಪರೀಕ್ಷೆ ಫಲಿತಾಂಶಕ್ಕೆ ಸುಪ್ರೀಂ ತಡೆ

ಹೊಸದಿಲ್ಲಿ: 5, 8, 9 ಮತ್ತು 11 ನೇ ತರಗತಿಗಳ ಬೋರ್ಡ್ ಪರೀಕ್ಷೆಗಳ ಫಲಿತಾಂಶಗಳನ್ನು ಪ್ರಕಟಿಸಲು ಸುಪ್ರೀಂ ಕೋರ್ಟ್ ಸೋಮವಾರ ತಡೆಯಾಜ್ಞೆ ನೀಡಿದೆ. ರಾಜ್ಯದಲ್ಲಿ 5, 8, 9ನೇ ತರಗತಿಗೆ ಬೋರ್ಡ್​ ಪರೀಕ್ಷೆ ಮುಗಿದಿದ್ದು,...

ಮನೆಯೊಳಗೆ ‌ನುಗ್ಗಿ ವ್ಯಕ್ತಿಗೆ ಚೂರಿ ಇರಿತ : ಆರೋಪಿ ಪರಾರಿ

ಬಂಟ್ವಾಳ: ಮನೆಯೊಳಗೆ ‌ನುಗ್ಗಿ ವ್ಯಕ್ತಿಯೋರ್ವನಿಗೆ ಚೂರಿ ಹಾಕಿ ಪರಾರಿಯಾಗಿರುವ ಘಟನೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಪುದು ಎಂಬಲ್ಲಿ ನಡೆದಿದೆ. ಪುದು ಗ್ರಾಮದ 10 ನೇ ಮೈಲಿಕಲ್ಲು ನಿವಾಸಿ...