Monday, April 8, 2024

ನಮ್ಮ ಮೆಟ್ರೋ ನೇಮಕಾತಿ : ತಿಂಗಳ ವೇತನ 94 ಸಾವಿರ ರೂ. ಇಲ್ಲಿದೆ ಮಾಹಿತಿ…

ಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಷನ್ ಲಿಮಿಟೆಡ್ ಹಲವು ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಬೆಂಗ​ಳೂರು ಮೆಟ್ರೋ ರೈಲ್ ಕಾರ್ಪೊರೇಷನ್ ಲಿಮಿಟೆಡ್​ನ ಅಧಿಕೃತ ವೆಬ್​ಸೈಟ್ bmrc.co.in ಗೆ ಭೇಟಿ ನೀಡುವ ಮೂಲಕ ಅರ್ಜಿ ಹಾಕಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.

ಹುದ್ದೆಗಳ ವಿವರಗಳು:

  • ಸಂಸ್ಥೆಯ ಹೆಸರು : ಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಶನ್ ಲಿಮಿಟೆಡ್ ( BMRCL ) ಅಥವಾ ನಮ್ಮ ಮೆಟ್ರೋ
  • ಹುದ್ದೆಗಳ ಸಂಖ್ಯೆ: 236
  • ಉದ್ಯೋಗ ಸ್ಥಳ: ಬೆಂಗಳೂರು , ಕರ್ನಾಟಕ
  • ಹುದ್ದೆಯ ಹೆಸರು: ಸ್ಟೇಷನ್ ಕಂಟ್ರೋಲರ್ / ಟ್ರೈನ್ ಆಪರೇಟರ್

ಹುದ್ದೆಗಳ ವಿಭಾಗವಾರು ವಿವರಗಳು:

  • ಸ್ಟೇಷನ್ ಕಂಟ್ರೋಲರ್ / ಟ್ರೈನ್ ಆಪರೇಟರ್- 108 ಹುದ್ದೆಗಳು
  • ಸೆಕ್ಷನ್ ಇಂಜಿನಿಯರ್- 14 ಹುದ್ದೆಗಳು
  • ನಿರ್ವಾಹಕ- 114

ಶೈಕ್ಷಣಿಕ ಅರ್ಹತೆ:

BMRCL ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ITI, ಡಿಪ್ಲೊಮಾ, BE/B ಟೆಕ್ ಇಂಜಿನಿಯರಿಂಗ್ ಅನ್ನು ಪೂರ್ಣಗೊಳಿಸಿರಬೇಕು .

ತಿಂಗಳ ವೇತನ:

  • ಸ್ಟೇಷನ್ ಕಂಟ್ರೋಲರ್ / ಟ್ರೈನ್ ಆಪರೇಟರ್- 35000 ರಿಂದ 82660/- ರೂ.
  • ಸೆಕ್ಷನ್ ಇಂಜಿನಿಯರ್- 40000 ರಿಂದ 94500/- ರೂ.
  • ನಿರ್ವಾಹಕ- 25000 ರಿಂದ 59060/- ರೂ.

ವಯೋಮಿತಿ:

ಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಶನ್ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿ ವಯಸ್ಸು ಕನಿಷ್ಠ 18 ವರ್ಷಗಳಿಂದ ಗರಿಷ್ಠ 35 ವರ್ಷಗಳ ಒಳಗಿರಬೇಕು.

ವಯೋಮಿತಿ ಸಡಿಲಿಕೆ:

  • 2A, 2B, 3A, 3B ಅಭ್ಯರ್ಥಿಗಳಿಗೆ: 3 ವರ್ಷಗಳು
  • SC, ST ಅಭ್ಯರ್ಥಿಗಳಿಗೆ: 5 ವರ್ಷಗಳು

ಅರ್ಜಿ ಶುಲ್ಕ:

  • ಸಾಮಾನ್ಯ, 2A, 2B, 3A, 3B ಅಭ್ಯರ್ಥಿಗಳಿಗೆ: 1180 + 18% GST
  • SC/ST ಅಭ್ಯರ್ಥಿಗಳಿಗೆ: 590+ 18% GST

ಆಯ್ಕೆ ಪ್ರಕ್ರಿಯೆ:

ಲಿಖಿತ ಪರೀಕ್ಷೆ, ಮೆರಿಟ್ ಮತ್ತು ಸಂದರ್ಶನದ ಮೂಲಕ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಪ್ರಮುಖ ದಿನಾಂಕಗಳು:

  • ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭಿಕ ದಿನಾಂಕ- 24-03-2023
  • ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ- 24-ಏಪ್ರಿಲ್-2023

ಈ ನೇಮಕಾತಿಗೆ ಸಂಬಂಧಿಸಿದ ಪ್ರಮುಖ ಲಿಂಕ್‌ಗಳು:

More from the blog

ಲೋಕಸಭಾ ಚುನಾವಣೆ : ಅಕ್ರಮ ವ್ಯವಹಾರಿಗಳಿಗೆ ರಹದಾರಿಯಾದ ಸಾಲೆತ್ತೂರು ಬಳಿಯ ಕೂಡುರಸ್ತೆ ಚೆಕ್ ಪೋಸ್ಟ್

ವಿಟ್ಲ: ಲೋಕಸಭಾ ಚುನಾವಣೆಗೆ ಈಗಾಗಲೇ ದಿನ ನಿಗದಿಯಾಗಿದ್ದು, ಜಿಲ್ಲಾಡಳಿತ ಸರ್ವ ಸನ್ನದ್ದವಾಗಿದೆ. ಅಕ್ರಮಗಳನ್ನು ತಡೆಗಟ್ಟುವ ಉದ್ದೇಶದಿಂದ ದಕ್ಷಿಣ ಕನ್ನಡ ಜಿಲ್ಲಾಡಳಿತವು ಗಡಿಪ್ರದೇಶ ಸೇರಿದಂತೆ ಜಿಲ್ಲೆಯಲ್ಲಿ 23 ಕಡೆಗಳಲ್ಲಿ ಚೆಕ್ ಪೋಸ್ಟ್ ಗಳನ್ನು ಸ್ಥಾಪಿಸಿದೆ. ಆದರೆ...

5,8,9,11ನೇ ತರಗತಿ ಪರೀಕ್ಷೆ ಫಲಿತಾಂಶಕ್ಕೆ ಸುಪ್ರೀಂ ತಡೆ

ಹೊಸದಿಲ್ಲಿ: 5, 8, 9 ಮತ್ತು 11 ನೇ ತರಗತಿಗಳ ಬೋರ್ಡ್ ಪರೀಕ್ಷೆಗಳ ಫಲಿತಾಂಶಗಳನ್ನು ಪ್ರಕಟಿಸಲು ಸುಪ್ರೀಂ ಕೋರ್ಟ್ ಸೋಮವಾರ ತಡೆಯಾಜ್ಞೆ ನೀಡಿದೆ. ರಾಜ್ಯದಲ್ಲಿ 5, 8, 9ನೇ ತರಗತಿಗೆ ಬೋರ್ಡ್​ ಪರೀಕ್ಷೆ ಮುಗಿದಿದ್ದು,...

ಮನೆಯೊಳಗೆ ‌ನುಗ್ಗಿ ವ್ಯಕ್ತಿಗೆ ಚೂರಿ ಇರಿತ : ಆರೋಪಿ ಪರಾರಿ

ಬಂಟ್ವಾಳ: ಮನೆಯೊಳಗೆ ‌ನುಗ್ಗಿ ವ್ಯಕ್ತಿಯೋರ್ವನಿಗೆ ಚೂರಿ ಹಾಕಿ ಪರಾರಿಯಾಗಿರುವ ಘಟನೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಪುದು ಎಂಬಲ್ಲಿ ನಡೆದಿದೆ. ಪುದು ಗ್ರಾಮದ 10 ನೇ ಮೈಲಿಕಲ್ಲು ನಿವಾಸಿ...

ಲೋಕಾಯುಕ್ತ ಇಲಾಖೆಯಿಂದ ಸಾರ್ವಜನಿಕ ಜನಸಂಪರ್ಕ ಸಭೆ

ಬಂಟ್ವಾಳ: ಲೋಕಾಯುಕ್ತ ಇಲಾಖೆಗೆ ಸಂಬಂಧಿಸಿದಂತೆ ಸಾರ್ವಜನಿಕ ಜನಸಂಪರ್ಕ ಸಭೆ ಬಿಸಿರೋಡಿನ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಎ. 8 ರಂದು ಸೋಮವಾರ ಲೋಕಾಯುಕ್ತ ಡಿ.ವೈ.ಎಸ್.ಪಿ. ಗಾನ ಕುಮಾರಿ ಅವರ ಅಧ್ಯಕ್ಷತೆಯಲ್ಲಿ ಜರುಗಿತು. ಈ ಸಂದರ್ಭದಲ್ಲಿ ಮಾತನಾಡಿದ...