Saturday, April 6, 2024

ಪ್ರಯೋಜನ ಇಲ್ಲದ ಲಕ್ಷಾಂತರ ವೆಚ್ಚದ ಮೂರ್ಕಜೆ ಸೇತುವೆ- ಕಾಂಗ್ರೆಸ್ ಆರೋಪ

ವಿಟ್ಲ: ವಿಟ್ಲಪಡ್ನೂರು ಗ್ರಾಮದ ಮೂರ್ಕಜೆಯಲ್ಲಿ ಕೊಡಂಗಾಯಿ ನದಿಗೆ ನಿರ್ಮಾಣ ಮಾಡಲಾಗಿರುವ ಅಣೆಕಟ್ಟು ಸೇತುವೆಯಲ್ಲಿ, ಸೇತುವೆ ಯಾರೊಬ್ಬರಿಗೂ ಪ್ರಯೋಜನ ಇಲ್ಲದಂತಾಗಿದೆ. ನಾಲ್ಕು ವರ್ಷದ ಹಿಂದೆ ಪಾದಯಾತ್ರೆ ಮಾಡಿ ಅಭಿವೃದ್ಧಿ ಪಡಿಸುವುದಾಗಿ ಹೇಳಿದ ಕೊಡಂಗಾಯಿ – ಬಲಿಪಗುಳಿ – ಪಂಜಿಗದ್ದೆ ರಸ್ತೆ ಇನ್ನೂ ಹಾಗೇ ಉಳಿದಿದೆ. ಗುತ್ತಿಗೆದಾರರು ತಮ್ಮ ಪ್ರಭಾವ ಬಳಸಿ ಇಲಾಖೆಯಿಂದ ತಂದಿರುವ ಅನುದಾನವನ್ನು ತಮ್ಮ ಯೋಜನೆಯೆಂದು ಸುಳ್ಳು ಹೇಳಲಾಗುತ್ತಿದೆ ಎಂದು ವಿಟ್ಲಮುಡ್ನೂರು ವಲಯ ಕಾಂಗ್ರೆಸ್ ಅಧ್ಯಕ್ಷ ಸಂದೇಶ ಶೆಟ್ಟಿ ಹೇಳಿದರು.

ಮೂರ್ಕಜೆಯಲ್ಲಿ ಸುಮಾರು ೨.೭೫ ಕೋಟಿ ವೆಚ್ಚದಲ್ಲಿ ನಿರ್ಮಿಸಲಾದ ಅಣೆಕಟ್ಟು ಹಾಗೂ ಸೇತುವೆಯಲ್ಲಿ ಅಣೆಕಟ್ಟು ಸ್ಥಳೀಯ ಕೃಷಿಕರಿಗೆ ಸಹಾಯವಾಗುತ್ತದಾದರೂ, ಸೇತುವೆ ಯಾರೊಬ್ಬರಿಗೂ ಪ್ರಯೋಜನ ಇಲ್ಲದಂತಾಗಿದೆ. ಒಂದು ಬದಿ ಖಾಸಗೀ ತೋಟವಿದ್ದು, ಇನ್ನೊಂದು ಭಾಗದಲ್ಲಿ ಸೇತುವೆಗೆ ಹತ್ತಲೂ ಸಾಧ್ಯವಿಲ್ಲದ ಪರಿಸ್ಥಿತಿದೆ. ಈ ಮೂಲಕ ಸಿದ್ದರಾಮಯ್ಯ ಸರಕಾರದ ಮಹತ್ವದ ಯೋಜನೆಯಾದ ಪಶ್ಚಿಮ ವಾಹಿನಿಯ ಮೂಲಕ ಬಂದ ಅನುದಾನವನ್ನು ಪೋಲು ಮಾಡುವ ಕಾರ್ಯ ಮಾಡಲಾಗಿದೆ. ಭವಿಷ್ಯದಲ್ಲೂ ಖಾಸಗೀ ತೋಟವನ್ನು ಕಡಿದು ರಸ್ತೆ ನಿರ್ಮಾಣ ಮಾಡಲು ಸಾಧ್ಯವಿಲ್ಲದ ಪರಿಸ್ಥಿತಿ ಇರುವಾಗ ಇದು ಕೇವಲ ಶೇ.೪೦ನ್ನು ಹೊಡೆಯಲು ಮಾಡಿದ ಯೋಜನೆಯಂತಿದೆ ಎಂದು ವಿಟ್ಲದಲ್ಲಿ ಪತ್ರಿಕಾಗೋಷ್ಠಿ ನಡೆಸಿ ತಿಳಿಸಿದರು.

ಕೊಡಂಗಾಯಿ – ಬಲಿಪಗುಳಿ – ಪಂಜಿಗದ್ದೆ ರಸ್ತೆ ಸಂಪೂರ್ಣ ಹದೆಗೆಟ್ಟು ಹೋಗಿದ್ದು, ಜನರು ನಿತ್ಯ ಸಂಚರಿಸಲು ಕಷ್ಟ ಪಡಬೇಕಾದ ಪರಿಸ್ಥಿತಿ ಇದೆ. ಆದರೂ ೪ ವರ್ಷದ ಹಿಂದೆ ನೀಡಿದ ಭರವಸೆಯನ್ನು ಇನ್ನೂ ಈಡೇರಿಸುವ ಕಾರ್ಯ ಮಾಡಿಲ್ಲ. ಗ್ರಾಮದಲ್ಲಿ ಈಗಾಗಲೇ ಹಲವು ಕಾಮಗಾರಿಗಳು ನಡೆದಿದ್ದು, ಶಾಸಕರು ಇದರಲ್ಲಿ ಯಾವುದೇ ಪಾತ್ರವನ್ನೂ ವಹಿಸಿಲ್ಲ. ಜನರ ಅಗತ್ಯಗಳನ್ನು ಗುತ್ತಿಗೆದಾರರೇ ಮುಂದೆ ನಿಂತು ಇಲಾಖೆಗಳನ್ನು ಮಂಜೂರು ಮಾಡಿಸಿಕೊಂಡು ಬಂದಿದ್ದಾಗಿದೆ ಎಂದು ತಿಳಿಸಿದರು.

ವಿಟ್ಲಪಡ್ನೂರು ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಅಬ್ದುಲ್ಲ ಕುಕ್ಕಿಲ, ಮಾಜಿ ಉಪಾಧ್ಯಕ್ಷ ಅಬ್ದುಲ್ ರಹಿಮಾನ್ ಕಡಂಬು, ಕಿಸಾನ್ ಘಟಕದ ಅಧ್ಯಕ್ಷ ಪ್ರಕಾಶ್ ರೈ ಎರ್ಮೆನಿಲೆ, ಪಂಚಾಯಿತಿ ಸದಸ್ಯರಾದ ಹರ್ಷದ್ ಕುಕ್ಕಿಲ, ಶರೀಫ್ ಕೊಡಂಗೆ ಉಪಸ್ಥಿತರಿದ್ದರು.

More from the blog

ಬಂಟ್ವಾಳ: ನಿಯಮ ಮೀರಿ ಚಾಲನೆ ಮಾಡಿ ಪೋಲೀಸರ ಕೈಗೆ ಸಿಕ್ಕಿಬಿದ್ದರೆ ದಂಡ ಗ್ಯಾರಂಟಿ….

ಬಂಟ್ವಾಳ: ರಸ್ತೆಯಲ್ಲಿ ಟ್ರಾಫಿಕ್ ಪೋಲೀಸರು ದಂಡ ವಸೂಲಿ ಮಾಡುವ ವೇಳೆ ಸುಳ್ಳು ಹೇಳಿಬಚಾವಾಗಲು ಸಾಧ್ಯವಿಲ್ಲ, ಜೊತೆಗೆ ಅಸಭ್ಯ ವರ್ತನೆ ಮಾಡಿದರೆ ಜೋಕೆ, ಅವರ ಶರೀರದಲ್ಲಿ ಕಣ್ಗಾವಲು ಕ್ಯಾಮರಾ ಅಳವಡಿಸಿಲಾಗಿದ್ದು, ಸೂಕ್ಷ್ಮವಾಗಿ ಎಲ್ಲವನ್ನು ಸೆರೆ...

ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ : ಚೆಂಡಿನ ಗದ್ದೆಯಲ್ಲಿ ಪ್ರಥಮ ಚೆಂಡು

ಇತಿಹಾಸ ಪ್ರಸಿದ್ಧ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಅಂಗವಾಗಿ ದೇವಳದ ಚೆಂಡಿನ ಗದ್ದೆಯಲ್ಲಿ ಇಂದು ಪ್ರಥಮ ಚೆಂಡು ನಡೆಯಿತು. ‌ ಇವತ್ತಿನಿಂದ ಮುಂದಿನ ಐದು ದಿನಗಳ ಕಾಲ ಇಲ್ಲಿ ಚೆಂಡು...

ಏಪ್ರಿಲ್ 7ರಂದು ಕರ್ನಾಟಕ ಜಾನಪದ ಪರಿಷತ್ತು ದ.ಕ.ಜಿಲ್ಲಾ ಬಂಟ್ವಾಳ ತಾಲೂಕು ಘಟಕದ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭ

ಬಂಟ್ವಾಳ: ಏಪ್ರಿಲ್ 7ರಂದು ಅಪರಾಹ್ನ 3 ಗಂಟೆಗೆ ಬಿ.ಸಿ.ರೋಡು ರಂಗೋಲಿ ಸಭಾಂಗಣದಲ್ಲಿ ಕರ್ನಾಟಕ ಜಾನಪದ ಪರಿಷತ್ತು ದ.ಕ.ಜಿಲ್ಲಾ ಬಂಟ್ವಾಳ ತಾಲೂಕು ಘಟಕದ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭ ನಡೆಯಲಿದೆ ಎಂದು ತಾಲೂಕು ಘಟಕದ...

ದ್ವಿಚಕ್ರ ವಾಹನಕ್ಕೆ ರಿಕ್ಷಾ ಡಿಕ್ಕಿ : ಸಹಸವಾರ ಸ್ಥಳದಲ್ಲೇ ಮೃತ್ಯು

ಬಂಟ್ವಾಳ: ರಿಕ್ಷಾ ಡಿಕ್ಕಿಯಾಗಿ ದ್ವಿಚಕ್ರ ವಾಹನದಲ್ಲಿ ಸಂಚಾರ ಮಾಡುತ್ತಿದ್ದ ಸಹಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನರಿಕೊಂಬು ಎಂಬಲ್ಲಿ ನಡೆದಿದೆ. ನರಿಕೊಂಬು ನಿವಾಸಿ ನೀಲಪ್ಪ ಪೂಜಾರಿ ಅವರ ಮಗ ಪವನ್ ( 17) ಮೃತಪಟ್ಟ ಬಾಲಕ. ಮನೆಯಿಂದ...