Saturday, April 6, 2024

24 ಗಂಟೆಯಲ್ಲಿ ಮತ್ತೆ ಸಾವಿರದ ಗಡಿ ದಾಟಿದ ಕೊರೊನಾ

ದೇಶಾದ್ಯಂತ ಕೋವಿಡ್-19 ಮಹಾಮಾರಿಯ ಅಬ್ಬರ ದಿಢೀರನೇ ಏರಿಕೆಯಾಗಿದೆ. 24 ಗಂಟೆಯಲ್ಲಿ 1,071 ಕೋವಿಡ್-19 ಹೊಸ ಕೇಸ್ ದಾಖಲಾಗಿದೆ.

ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ಅನ್ವಯ 1,071 ಹೊಸ ಕೇಸ್‌ಗಳಿಂದಾಗಿ ಭಾರತದಲ್ಲಿ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 5,915ಕ್ಕೆ ಏರಿಕೆಯಾಗಿದೆ. ಕೇರಳ, ಮಹಾರಾಷ್ಟ್ರ, ಗುಜರಾತ್‌ನಲ್ಲಿ ಅತಿ ಹೆಚ್ಚು ಕೊರೊನಾ ಕೇಸ್‌ಗಳು ದಾಖಲಾಗಿದೆ.

ಇತ್ತೀಚಿಗೆ ಕೊರೊನಾ ಸೋಂಕಿನಿಂದಾಗಿ ರಾಜಸ್ಥಾನ, ಮಹಾರಾಷ್ಟ್ರ, ಕೇರಳ, ಜಾರ್ಖಂಡ್‌ನಲ್ಲಿ ತಲಾ ಒಬ್ಬರು ಸಾವನ್ನಪ್ಪಿದ್ದಾರೆ. ಕೇರಳದಲ್ಲಿ ಸತತ ಎರಡು ಸಾವು ಸಂಭವಿಸಿರೋದು ಆರೋಗ್ಯ ಇಲಾಖೆಯ ಚಿಂತೆಗೆ ಕಾರಣವಾಗಿದೆ. ಕರ್ನಾಟಕದಲ್ಲಿ ನಿನ್ನೆ ಒಂದೇ ದಿನಕ್ಕೆ 191 ಹೊಸ ಪ್ರಕರಣಗಳು ದಾಖಲಾಗಿದೆ. ಈ ಮೂಲಕ ರಾಜ್ಯದಲ್ಲಿಯೂ 577 ಸಕ್ರಿಯ ಪ್ರಕರಣಗಳು ಪತ್ತೆಯಾಗಿದೆ. ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವುದರಿಂದ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಆರೋಗ್ಯ ಇಲಾಖೆ ಸೂಚಿಸಿದೆ.

ಇತ್ತೀಚಿಗೆ H3N2 ವೈರಸ್ ಪತ್ತೆಯಾಗಿದ್ದು ಆತಂಕ ಸೃಷ್ಟಿಸಿತ್ತು. ಇದೀಗ ಕೋವಿಡ್ ಏರಿಕೆಗೆ XBB 1.16 ಉಪತಳಿಯೇ ಕಾರಣವಾಗುತ್ತಿದೆ. ಬದಲಾದ ವಾತಾವರಣದ ಜೊತೆಗೆ ಶೀತ, ಕೆಮ್ಮು ಹೆಚ್ಚಳವಾಗುತ್ತಿದೆ.

More from the blog

ನೀತಿ ಸಂಹಿತೆ ಉಲ್ಲಂಘನೆ : ಕೋಟಾ ಶ್ರೀನಿವಾಸ್‌ ಪೂಜಾರಿಗೆ ಕೋರ್ಟ್‌ ಸಮನ್ಸ್‌

ಬೆಂಗಳೂರು: ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ್‌ ಪೂಜಾರಿ ಅವರಿಗೆ ಕೋರ್ಟ್‌ ಸಮನ್ಸ್‌ ಜಾರಿ ಮಾಡಿದೆ. ಕೋಟಾ ಶ್ರೀನಿವಾಸ ಪೂಜಾರಿ, ಗುರ್ಮೆ ಸುರೇಶ್ ಶೆಟ್ಟಿ, ಲಾಲಾಜಿ ಮೆಂಡನ್ ಹಾಗೂ ಶಾಲಾ ಆಡಳಿತ ಮಂಡಳಿಗೆ ಜನಪ್ರತಿನಿಧಿಗಳ ವಿಶೇಷ...

ಸರ್ಕಾರದ ಕೋವಿ ಠೇವಣಿ ಕ್ರಮ: ಪರವಾನಿಗೆ ಪಡೆದ ರೈತರಿಂದ ಚುನಾವಣೆ ಬಹಿಷ್ಕಾರ 

ವಿಟ್ಲ: ಕರ್ನಾಟಕ ರಾಜ್ಯ ರೈತ ಸಂಘ ಹಸಿರುಸೇನೆಯ ದ.ಕ.ಜಿಲ್ಲಾ ಸಮಿತಿ ಮತ್ತು ಕೋವಿ ಪರವಾನಿಗೆ ಪಡೆದ ರೈತ ಬಳಕೆದಾರರ ಸಂಘವು ಈ ಬಾರಿ ಚುನಾವಣೆ ಬಹಿಷ್ಕರಿಸುತ್ತದೆ ಎಂದು ರೈತ ಸಂಘದ ಜಿಲ್ಲಾಧ್ಯಕ್ಷ ಶ್ರೀಧರ...

ಟ್ರಾಫಿಕ್ ಪೊಲೀಸ್ ಠಾಣೆಯ ಕಾಮಗಾರಿಯನ್ನು ಪೊಲೀಸ್ ಹೌಸಿಂಗ್ ಕಾರ್ಪೋರೇಸನ್ ಎಡಿಜಿಪಿ ರಾಮಚಂದ್ರರಾವ್ ವೀಕ್ಷಣೆ

ಬಂಟ್ವಾಳ; ಬಿಸಿರೋಡಿನ ಪಾಣೆಮಂಗಳೂರಿನಲ್ಲಿ ಅಂದಾಜು ರೂ.3.18 ಕೋಟಿ ವೆಚ್ಚದಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಟ್ರಾಫಿಕ್ ಪೋಲೀಸ್ ಠಾಣೆಯ ಕಾಮಗಾರಿಯನ್ನು ಪೋಲಿಸ್ ಹೌಸಿಂಗ್ ಕಾರ್ಪೋರೇಸನ್ ಎಡಿಜಿಪಿ ರಾಮಚಂದ್ರರಾವ್ ವೀಕ್ಷಣೆ ನಡೆಸಿದರು. ಉತ್ತಮ ಗುಣಮಟ್ಟದಲ್ಲಿ ಠಾಣೆಯ ಕೆಲಸವನ್ನು ಮಾಡುವ...

ಸೌಜನ್ಯ ಹೋರಾಟ ಸಮಿತಿಯಿಂದ ನೋಟ ಅಭಿಯಾನ

ಮಂಗಳೂರು: ರಾಜಕೀಯ ಪಕ್ಷಗಳು ಮತ್ತು ನ್ಯಾಯಾಂಗ ವ್ಯವಸ್ಥೆಯ ಗಮನ ಸೆಳೆಯುವ ಉದ್ದೇಶದಿಂದ ಸೌಜನ್ಯ ಪರ ಹೋರಾಟ ಸಮಿತಿ ವತಿಯಿಂದ ಮುಂಬರುವ‌ ಲೋಕಸಭಾ ಚುನಾವಣೆಯಲ್ಲಿ ನೋಟಕ್ಕೆ ಮತ ಚಲಾಯಿಸಲು ಜನ ಸಾಮಾನ್ಯರನ್ನು ಪ್ರೇರೇಪಿಸಲು ನೋಟ...