Sunday, April 7, 2024

ಕರ್ನಾಟಕದಲ್ಲಿ ಕೋವಿಡ್​ ಹೆಚ್ಚಳ…ಹೆಚ್ಚಿದ ಆತಂಕ

ಬೆಂಗಳೂರು: ಕರ್ನಾಟಕದಲ್ಲಿ ಕೊರೊನಾ ಸೋಂಕು ಕಡಿಮೆಯಾಗಿದೆ ಎಂದು ಅಂದುಕೊಳ್ಳುವಷ್ಟರಲ್ಲೇ ಆಘಾತಕಾರಿ ಅಂಶವೊಂದು ಬಹಿರಂಗವಾಗಿದೆ.

ಕೊರೊನಾ ಸೋಂಕು ಪ್ರಕರಣಗಳು ನಿಧಾನವಾಗಿ ದಿನದಿಂದ ದಿನಕ್ಕೆ ಏರುತ್ತಿದ್ದು, ರಾಜ್ಯ ಆರೋಗ್ಯ ಇಲಾಖೆಯ ಅಂಕಿ ಅಂಶಗಳ ಪ್ರಕಾರ ಮಾರ್ಚ್​ 13ರ ವರೆಗೆ 510 ಜನರಿಗೆ ಕೊರೊನಾ ಸೋಂಕು ತಗುಲಿದೆ. ಕಳೆದ 24 ಗಂಟೆಯಲ್ಲಿ ಹೊಸದಾಗಿ 62 ಜನರಲ್ಲಿ ಕೊರೊನಾ ಪಾಸಿಟಿವ್​ ಬಂದಿದೆ. ದಿನದ ಏರಿಕೆ ಶೇ 4.5 ರಷ್ಟಿದ್ದು, ವಾರದ ಏರಿಕೆ ಶೇ 2.60 ರಷ್ಟಿದೆ. ಆಸ್ಪತ್ರೆಗೆ ದಾಖಲಾಗುವ ಹೆಚ್ಚಿನ ಕೊರೊನಾ ರೋಗಿಗಳು ಒಂದೇ ಸಮಯದಲ್ಲಿ ವಿವಿಧ ರೋಗಗಳಿಂದ ಬಳಲುತ್ತಿದ್ದಾರೆ ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಆರೋಗ್ಯ ವಿಶೇಷ ಆಯುಕ್ತ ಡಾ.ಕೆ.ವಿ ತ್ರಿಲೋಕ್ ಚಂದ್ರ ಹೇಳಿದ್ದಾರೆ.

114 ದಿನಗಳ ಬಳಿಕ ಭಾರತದಲ್ಲಿ ದೈನಂದಿನ ಕೇಸ್​ಗಳ ಸಂಖ್ಯೆ 500ರ ಗಡಿ ದಾಟಿದೆ. ಅದ್ರಲ್ಲೂ ಕಳೆದ 11 ದಿನಗಳಲ್ಲಿ ಸರಾಸರಿ ಕೇಸ್ ಡಬಲ್ ಆಗಿದೆ. ಇದೇ ವೇಳೆ ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 3,809 ಕ್ಕೆ ಏರಿಕೆ ಆಗಿದೆ. ಕರ್ನಾಟಕದಲ್ಲಿ 521, ಕೇರಳ 1555, ಮಹಾರಾಷ್ಟ್ರ 551, ಗುಜರಾತ್ 231, ತಮಿಳುನಾಡು 234 ಹಾಗೂ ತೆಲಂಗಾಣದಲ್ಲಿ 213 ಸಕ್ರಿಯ ಪ್ರಕರಣಗಳಿವೆ

ಭಾರತದಲ್ಲಿ ಕಳೆದ ಶನಿವಾರ 524 ಕೋವಿಡ್ ಪ್ರಕರಣಗಳು ದಾಖಲಾಗಿವೆ. ಕಳೆದ 24 ಗಂಟೆಗಳಲ್ಲಿ ದೇಶದೆಲ್ಲೆಡೆ 444 ಕೊರೊನಾ ಪ್ರಕರಣ ಪತ್ತೆಯಾಗಿದ್ದು ಇದು 2022ರ ನವೆಂಬರ್ ಬಳಿಕ ದಾಖಲಾದ ಗರಿಷ್ಟ ಪ್ರಕರಣ ಇದಾಗಿದೆ. ಕಳೆದ ಏಳು ದಿನಗಳಲ್ಲಿ ದೇಶದಲ್ಲಿ 2,671 ಹೊಸ ಪ್ರಕರಣಗಳು ಪತ್ತೆಯಾಗಿವೆ. ಹಿಂದಿನ ಏಳು ದಿನಗಳ ಕೇಸ್​ಗಿಂತ ಶೇ.50ರಷ್ಟು ಹೆಚ್ಚಳವಾಗಿದೆ. ಕರ್ನಾಟಕ 584, ಕೇರಳ 520, ಮಹಾರಾಷ್ಟ್ರದಲ್ಲಿ 512 ಕೇಸ್ ಒಂದೇ ವಾರದಲ್ಲಿ ಹೆಚ್ಚಿದೆ. ಮಹಾರಾಷ್ಟ್ರದಲ್ಲಿ ಶೇ.86ರಷ್ಟು ಸೋಂಕು ಏರಿಕೆಯಾಗಿದೆ.

 

More from the blog

ಬಂಟ್ವಾಳ: ನಿಯಮ ಮೀರಿ ಚಾಲನೆ ಮಾಡಿ ಪೋಲೀಸರ ಕೈಗೆ ಸಿಕ್ಕಿಬಿದ್ದರೆ ದಂಡ ಗ್ಯಾರಂಟಿ….

ಬಂಟ್ವಾಳ: ರಸ್ತೆಯಲ್ಲಿ ಟ್ರಾಫಿಕ್ ಪೋಲೀಸರು ದಂಡ ವಸೂಲಿ ಮಾಡುವ ವೇಳೆ ಸುಳ್ಳು ಹೇಳಿಬಚಾವಾಗಲು ಸಾಧ್ಯವಿಲ್ಲ, ಜೊತೆಗೆ ಅಸಭ್ಯ ವರ್ತನೆ ಮಾಡಿದರೆ ಜೋಕೆ, ಅವರ ಶರೀರದಲ್ಲಿ ಕಣ್ಗಾವಲು ಕ್ಯಾಮರಾ ಅಳವಡಿಸಿಲಾಗಿದ್ದು, ಸೂಕ್ಷ್ಮವಾಗಿ ಎಲ್ಲವನ್ನು ಸೆರೆ...

ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ : ಚೆಂಡಿನ ಗದ್ದೆಯಲ್ಲಿ ಪ್ರಥಮ ಚೆಂಡು

ಇತಿಹಾಸ ಪ್ರಸಿದ್ಧ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಅಂಗವಾಗಿ ದೇವಳದ ಚೆಂಡಿನ ಗದ್ದೆಯಲ್ಲಿ ಇಂದು ಪ್ರಥಮ ಚೆಂಡು ನಡೆಯಿತು. ‌ ಇವತ್ತಿನಿಂದ ಮುಂದಿನ ಐದು ದಿನಗಳ ಕಾಲ ಇಲ್ಲಿ ಚೆಂಡು...

ಏಪ್ರಿಲ್ 7ರಂದು ಕರ್ನಾಟಕ ಜಾನಪದ ಪರಿಷತ್ತು ದ.ಕ.ಜಿಲ್ಲಾ ಬಂಟ್ವಾಳ ತಾಲೂಕು ಘಟಕದ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭ

ಬಂಟ್ವಾಳ: ಏಪ್ರಿಲ್ 7ರಂದು ಅಪರಾಹ್ನ 3 ಗಂಟೆಗೆ ಬಿ.ಸಿ.ರೋಡು ರಂಗೋಲಿ ಸಭಾಂಗಣದಲ್ಲಿ ಕರ್ನಾಟಕ ಜಾನಪದ ಪರಿಷತ್ತು ದ.ಕ.ಜಿಲ್ಲಾ ಬಂಟ್ವಾಳ ತಾಲೂಕು ಘಟಕದ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭ ನಡೆಯಲಿದೆ ಎಂದು ತಾಲೂಕು ಘಟಕದ...

ದ್ವಿಚಕ್ರ ವಾಹನಕ್ಕೆ ರಿಕ್ಷಾ ಡಿಕ್ಕಿ : ಸಹಸವಾರ ಸ್ಥಳದಲ್ಲೇ ಮೃತ್ಯು

ಬಂಟ್ವಾಳ: ರಿಕ್ಷಾ ಡಿಕ್ಕಿಯಾಗಿ ದ್ವಿಚಕ್ರ ವಾಹನದಲ್ಲಿ ಸಂಚಾರ ಮಾಡುತ್ತಿದ್ದ ಸಹಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನರಿಕೊಂಬು ಎಂಬಲ್ಲಿ ನಡೆದಿದೆ. ನರಿಕೊಂಬು ನಿವಾಸಿ ನೀಲಪ್ಪ ಪೂಜಾರಿ ಅವರ ಮಗ ಪವನ್ ( 17) ಮೃತಪಟ್ಟ ಬಾಲಕ. ಮನೆಯಿಂದ...