Friday, April 12, 2024

ದನದ ಕುತ್ತಿಗೆ ಕಡಿದು ತುಂಗಾ ನದಿಗೆ ಎಸೆದು ವಿಕೃತಿ ಮೆರೆದ ಕಿಡಿಗೇಡಿಗಳು

ತೀರ್ಥಹಳ್ಳಿ: ದನದ ಕುತ್ತಿಗೆ ಕಡಿದು ತಲೆಯ ಭಾಗವನ್ನು ತುಂಗಾ ನದಿಗೆ ದುಷ್ಕರ್ಮಿಗಳು ಎಸೆದಿರುವ ಘಟನೆ ಬೆಳಕಿಗೆ ಬಂದಿದೆ.

ಸ್ಥಳೀಯರು ಸ್ನಾನ ಮಾಡಲು ತುಂಗಾ ನದಿಯ ಹೊಳೆಗೆ ಇಳಿದಾಗ ಘಟನೆ ಬೆಳಕಿಗೆ ಬಂದಿದೆ.

ಶಂಖತೀರ್ಥ, ಚಕ್ರತೀರ್ಥ, ಗದಾತೀರ್ಥ, ಪದ್ಮತೀರ್ಥ ಎಂಬ ಪವಿತ್ರ ತೀರ್ಥಗಳ ಸಮಾಗಮ ಆಗುವ ತುಂಗಾ ನದಿಯ ರಾಮೇಶ್ವರ ದೇವಸ್ಥಾನದ ಹಿಂಭಾಗದ ಸ್ಥಳಗಳಲ್ಲಿ ಈ ಘಟನೆ ನೆಡೆದಿದ್ದು ದನದ ರುಂಡವನ್ನು ಬಿಟ್ಟು ಮಾಂಸ ತೆಗೆದುಕೊಂಡು ದುಷ್ಕರ್ಮಿಗಳು ಹೋಗಿದ್ದಾರೆ.

ವಿಷಯ ತಿಳಿಯುತ್ತಿದ್ದಂತೆ ಸಿ ಪಿ ಐ ಅಶ್ವಥ್ ಗೌಡ, ಪ. ಪಂ ಅಧ್ಯಕ್ಷೆ ಸುಶೀಲ ಶೆಟ್ಟಿ, ಮುಖ್ಯಾಧಿಕಾರಿ ಕುರಿಯಕೋಸ್, ಆರೋಗ್ಯ ಅಧಿಕಾರಿ ರಮೇಶ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನೆಡೆಸಿದ್ದಾರೆ.

More from the blog

ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ: ಏಪ್ರಿಲ್​ 18 ರವರೆಗೆ 25ಕ್ಕೂ ಹೆಚ್ಚಿನ ಜಿಲ್ಲೆಗಳಲ್ಲಿ ಮಳೆ

ಕರ್ನಾಟಕದ 25ಕ್ಕೂ ಹೆಚ್ಚಿನ ಜಿಲ್ಲೆಗಳಲ್ಲಿ ಇಂದಿನಿಂದ ಏಪ್ರಿಲ್​ 18ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಆದರೆ ಇದೀಗ ವಿಪರೀತ ಸೆಕೆ...

ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನ ವಾರ್ಷಿಕ ಜಾತ್ರೆ..ಮಹಾರಥೋತ್ಸವ ಕಣ್ಣುಂಬಿಕೊಂಡ ಸಾವಿರಾರು ಭಕ್ತರು

ಬಂಟ್ವಾಳ: ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರೆಯಲ್ಲಿ ಎ. ೧೧ರಂದು ಸಂಜೆ ರಥೋತ್ಸವ ನಡೆಯಿತು. ಜಾತ್ರೆಯಲ್ಲಿ ಸಹಸ್ರಾರು ಭಕ್ತರು ಪಾಲ್ಗೊಂಡಿದ್ದರು. ಮಹಾಪೂಜೆಯ ಬಳಿಕ ದೇವರು ರಥಾರೋಹಣಗೊಂಡು ಸಾಂಕೇತಿಕವಾಗಿ ರಥವನ್ನು ಎಳೆಯಲಾಯಿತು. ಮಧ್ಯಾಹ್ನ ರಥಕ್ಕೆ...

ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆಯ ನಕಲಿ ಸುದ್ದಿ ಪ್ರಕಟ : ಕ್ರಮ ಕೈಗೊಳ್ಳುವಂತೆ ಸುಬ್ರಹ್ಮಣ್ಯ ಕಾಂಗ್ರೆಸ್ ವತಿಯಿಂದ ಪೊಲೀಸ್ ದೂರು

ಮುಖ್ಯಮಂತ್ರಿ ಸಿದ್ದರಾಮಯ್ಯ ರವರು ಕೋಮು ಭಾವನೆಯ ಹೇಳಿಕೆ ನೀಡಿದ್ದಾರೆಂಬ ನಕಲಿ ಸುದ್ದಿಯನ್ನು ವಾಟ್ಸಾಪ್ ಗ್ರೂಪ್ ಗಳಲ್ಲಿ ಪ್ರಚಾರ ಮಾಡುತ್ತಿರುವವರ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಸುಬ್ರಹ್ಮಣ್ಯ ಕಾಂಗ್ರೆಸ್ ವತಿಯಿಂದ ಸುಬ್ರಹ್ಮಣ್ಯ ಪೊಲೀಸ್ ಠಾಣೆಗೆ...

ಬಂಟ್ವಾಳದ ಬಡಗಕಜೆಕಾರು, ತೆಂಕಕಜೆಕಾರು ಗ್ರಾಮದಲ್ಲಿ ಮತದಾರರ ಮನೆಗೆ ಭೇಟಿ ನೀಡಿ ಮತಯಾಚನೆ ನಡೆಸಿದ ಶಾಸಕ ರಾಜೇಶ್ ನಾಯ್ಕ್

ಲೋಕ ಸಭಾ ಚುನಾವಣೆಯ ಹಿನ್ನಲೆಯಲ್ಲಿ ಕ್ಯಾ.ಬ್ರಿಜೇಶ್ ಚೌಟ ಅವರ ಗೆಲುವಿಗಾಗಿ "ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರ ಗ್ರಾಮ,ಮನೆ,ಮನ ಸಂಪರ್ಕ ಅಭಿಯಾನ"ದ ಅಂಗವಾಗಿ ಬಂಟ್ವಾಳದ ಬಡಗಕಜೆಕಾರು, ತೆಂಕಕಜೆಕಾರು ಗ್ರಾಮದಲ್ಲಿ ಮತದಾರರ ಮನೆಗೆ...