Sunday, April 14, 2024

ವ್ಯಕ್ತಿಯನ್ನು ಹತ್ಯೆಗೈದು ಹೂತಿಟ್ಟ ಪ್ರಕರಣ : ಐವರು ಆರೋಪಿಗಳು ದೋಷಿಗಳು

ಮಂಗಳೂರು: ಮಂಗಳೂರು ನಗರದ ಪಾವೂರು ಗ್ರಾಮದ ಮಲಾರ್ ಅರಸ್ತಾನದಲ್ಲಿ ವ್ಯಕ್ತಿಯೊಬ್ಬರನ್ನು ಹತ್ಯೆಗೈದು ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರ ಮೇಲಿನ ಆರೋಪ ಸಾಬೀತಾಗಿದ್ದು, ಐವರು ಆರೋಪಿಗಳು ಕೂಡ ದೋಷಿಗಳು ಎಂದು ಮಂಗಳೂರಿನ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ತೀರ್ಪು ನೀಡಿದೆ.

ಮಲಾ‌ರ್ ಅಕ್ಷರ ನಗರ ನಿವಾಸಿ ಹಂಝ ಅಬ್ಬಾಸ್, ಮಲಾರ್ ಅರಸ್ತಾನ ಸೈಟ್ ನಿವಾಸಿ ಅಝರುದ್ದೀನ್, ಸಜಿಪನಡು ಕಂಚಿನಡ್ಕಪದವು ನಿವಾಸಿಗಳಾದ ಅಮೀರ್ ಶೇಖ್ ಯಾನೆ ಅಮ್ಮಿ, ಅರ್ಫಾಝ್ ಅಬ್ದುಲ್ ರಝಾಕ್ ಹಾಗೂ ಅಥಾವುಲ್ಲ ಯಾನೆ ಅಲ್ತಾಫ್ ಅಪರಾಧಿಗಳು ಎಂದು ನ್ಯಾಯಾಲಯ ತೀರ್ಪು ನೀಡಿದೆ.

ಪಾವೂರು ಗ್ರಾಮದ ಮಲಾರ್‌ನಿಂದ ಪಲ್ಲಿಯಬ್ಬ ಯಾನೆ ಪಲ್ಲಿಯಾಕ ನಾಪತ್ತೆಯಾದ ಬಗ್ಗೆ 2020ರ ಅ.29ರಂದು ಕೊಣಾಜೆ ಠಾಣೆಯಲ್ಲಿ ನಾಪತ್ತೆ ದೂರು ದಾಖಲಾಗಿತ್ತು. ಬಳಿಕ ಪಲ್ಲಿಯಬ್ಬ ಎಂಬವರ ಮೃತದೇಹವು ಇರಾ ಗ್ರಾಮದ ಪದವು ಬಳಿ ಹೂತಿಟ್ಟ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಹಣದ ವಿಚಾರದಲ್ಲಿ ಇವರನ್ನು ವ್ಯವಸ್ಥಿತವಾಗಿ ಹತ್ಯೆಗೈದು ಹೂತು ಹಾಕಲಾಗಿತ್ತು ಎಂದು ಪೊಲೀಸರ ತನಿಖೆಯಿಂದ ತಿಳಿದುಬಂದಿತ್ತು.

ಈ ಬಗ್ಗೆ ಕೊಣಾಜೆ ಪೊಲೀಸರು ಕೊಲೆ ಪ್ರಕರಣ ದಾಖಲಿಸಿ ತನಿಖೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದರು. ನ್ಯಾಯಾಧೀಶ ಬಸಪ್ಪಬಾಳಪ್ಪ ಜಕಾತಿ ಅವರು ಶಿಕ್ಷೆಯ ಪ್ರಮಾಣವನ್ನು ಮಾರ್ಚ್ 3ರಂದು ನೀಡಲಿದ್ದಾರೆ.

More from the blog

ಮಂಗಳೂರು: ರೋಡ್​ಶೋ ಮೂಲಕ ಪ್ರಧಾನಿ ಮೋದಿ ಚುನಾವಣಾ ಪ್ರಚಾರ

ಮಂಗಳೂರು: ರಾಜ್ಯದ ಲೋಕಸಭಾ ಚುನಾವಣೆ ಅಖಾಡಕ್ಕೆ ಇಳಿದಿರುವ ಪ್ರಧಾನಿ ನರೇಂದ್ರ ಮೋದಿ, ಮೈಸೂರಿನಿಂದ ತಮ್ಮ ಯಾತ್ರೆ ಆರಂಭಿಸಿದ್ದಾರೆ. ಇದೀಗ ಮಂಗಳೂರಿನಲ್ಲಿ ರೋಡ್​ಶೋ ಮೂಲಕ ಚುನಾವಣಾ ಪ್ರಚಾರ ಆರಂಭಿಸಿದ್ದಾರೆ. ಮೈಸೂರಿನಲ್ಲಿ ಅದ್ದೂರಿ...

ನೆತ್ತರಕೆರೆ: ನವೋದಯ ಮಿತ್ರ ಕಲಾ ವೃಂದ (ರಿ.) 37ನೇ ವಾರ್ಷಿಕೋತ್ಸವ ಸಮಾರಂಭ

ಬಂಟ್ವಾಳ : ಈ ಮಣ್ಣಿನ ಸಂಸ್ಕೃತಿ, ಮೌಲ್ಯವನ್ನು ಮುಂದಿನ ತಲೆಮಾರಿಗೆ ತಲುಪಿಸುವ ಮಹತ್ತರವಾದ ಜವಾಬ್ದಾರಿ ಸಂಘ ಸಂಸ್ಥೆಗಳ ಮೇಲಿದೆ, ಈ ನಿಟ್ಟಿನಲ್ಲಿ ನವೋದಯ ಮಿತ್ರ ಕಲಾ ವೃಂದವು ಸಮಾಜಕ್ಕೆ ಪೂರಕವಾಗಿ ಸಮಾಜಮುಖಿ ಕಾರ್ಯಗಳನ್ನು...

ಲೋಕಸಭಾ ಚುನಾವಣೆ : ‘ಸಂಕಲ್ಪ ಪತ್ರ’ ಹೆಸರಿನಲ್ಲಿ ಬಿಜೆಪಿ ಪ್ರಣಾಳಿಕೆ ಬಿಡುಗಡೆ

ನವದೆಹಲಿ: ದೆಹಲಿಯಲ್ಲಿರುವ ಬಿಜೆಪಿಯ ಪ್ರಧಾನ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಲೋಕಸಭೆ ಚುನಾವಣೆಗಾಗಿ ಬಿಜೆಪಿ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ. ‘ಸಂಕಲ್ಪ ಪತ್ರ’ ಹೆಸರಲ್ಲಿ ದೇಶದ ಜನರಿಗೆ ಪ್ರಧಾನಿ ಮೋದಿ ಆಶ್ವಾಸನೆಗಳನ್ನು ನೀಡಿದ್ದು ಮೊದಲ ಸಂಕಲ್ಪ...

ಬಾಲಿವುಡ್ ನಟ ಸಲ್ಮಾನ್​ ಖಾನ್ ಮನೆ ಮುಂದೆ ಗುಂಡಿನ ದಾಳಿ

ಮುಂಬೈ: ಬಾಲಿವುಡ್ ಆ್ಯಕ್ಟರ್​ ಸಲ್ಮಾನ್ ಖಾನ್ ಅವರ ನಿವಾಸದ ಮೇಲೆ ಇಂದು ಬೆಳಗಿನ ಜಾವ 5 ಗಂಟೆಗೆ ದುಷ್ಕರ್ಮಿಗಳು ಬೈಕ್​ನಲ್ಲಿ ಬಂದು 5 ಸುತ್ತು ಫೈರಿಂಗ್ ಮಾಡಿ ಎಸ್ಕೇಪ್ ಆಗಿದ್ದಾರೆ. ಮುಂಬೈನ ಬಾಂದ್ರಾ ಪ್ರದೇಶದಲ್ಲಿರುವ...