Saturday, April 6, 2024

ಜೂಜು ಅಡ್ಡೆಗೆ ಧರ್ಮಸ್ಥಳ ಪೊಲೀಸರ ದಾಳಿ : ನಾಲ್ವರು ಆರೆಸ್ಟ್‌

ಧರ್ಮಸ್ಥಳ: ಸರಕಾರಿ ಗುಡ್ಡದಲ್ಲಿ ಜುಗಾರಿ ಆಟವಾಡುತ್ತಿದ್ದ ಅಡ್ಡೆಗೆ ಪೊಲೀಸರು ದಾಳಿ ನಡೆಸಿ ನಾಲ್ವರನ್ನು ಬಂಧಿಸಿದ ಘಟನೆ ತೋಟತ್ತಾಡಿ ಗ್ರಾಮದ ಮುಂಡಾಯಿಲು ಎಂಬಲ್ಲಿ ನಡೆದಿದೆ.

ಚಾರ್ಮಾಡಿ ಗ್ರಾಮದ ಅರೆಕಲ್ ಮನೆ ನಿವಾಸಿ ರಹೀಂ, ಮುಂಡಾಜೆ ಗ್ರಾಮದ ದೇವಗುಡಿ ಮನೆಯ ಫಯಾಜ್‌ ಪಾಷಾ, ‌‌ಕಡಿರುದ್ಯಾವರ ಗ್ರಾಮದ, ಕಾನರ್ಪ ನಿವಾಸಿ ರಾಜೇಶ್‌, ತೋಟತ್ತಾಡಿ ಗ್ರಾಮದ‌ ಮುಂಡಾಯಿಲ್‌ ಮನೆಯ ಅನೀಲ್ ಬಂಧಿತರಾಗಿದ್ದು, ಸಿದ್ದಿಕ್‌ ಯಾನೆ ಅರೆಕಲ್‌ ಸಿದ್ದಿಕ್‌, ಕೃಷ್ಣ ಯಾನೆ ಕಿಟ್ಟ ಗಾಂಧಿನಗರ, ಸಂತೋಷ್‌ ಗಾಂಧಿನಗರ, ಸುಧಾಕರ ಕೊಯಿಕುರಿ ಪೊಲೀಸರ ದಾಳಿ ವೇಳೆ ತಪ್ಪಿಸಿಕೊಂಡಿದ್ದಾರೆ.

ತೋಟತ್ತಾಡಿ ಗ್ರಾಮದ ಮುಂಡಾಯಿಲು ಎಂಬಲ್ಲಿ ಸರಕಾರಿ ಗುಡ್ಡದಲ್ಲಿ ಕೆಲವರು ಹಣವನ್ನು ಪಣವಾಗಿಟ್ಟು ಇಸ್ಪೀಟ್‌ ಜುಗಾರಿ ಆಟ ಆಡುತ್ತಿದ್ದಾರೆ ಎಂಬ ಖಚಿತ ಮಾಹಿತಿಯನ್ವಯ ಮಾ.12ರಂದು ಬೆಳಗ್ಗಿನ ಜಾವ ಜುಗಾರಿ ಅಡ್ಡೆಗೆ ದಾಳಿ ನಡೆಸಿದಾಗ ಆಟ ಆಡುತ್ತಿದ್ದವರು ಅಲ್ಲಿಂದ ಓಡಿ ಹೋಗಲು ಪ್ರಯತ್ನಿಸಿದ್ದು ಓಡಿ ಹೋಗುತ್ತಿದ್ದವರನ್ನು ಪೊಲೀಸರು ಬೆನ್ನಟ್ಟಿ ನಾಲ್ಕು ಮಂದಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಸ್ಥಳದಲ್ಲಿದ್ದ ಪ್ಲಾಸ್ಟಿಕ್‌ ಚಾಪೆ, ಮೇಣದ ಬತ್ತಿ , ಲೈಟರ್‌ , ವಿವಿಧ ಜಾತಿಯ ಇಸ್ಪೀಟ್‌ ಎಲೆಗಳು, ಒಟ್ಟು ರೂ 7,070 ನಗದು, ಒಂದು ಟಚ್‌ ಸ್ಕ್ರೀನ್‌ ಮೊಬೈಲ್‌, ನಾಲ್ಕು ಚಿಕ್ಕ ಮೊಬೈಲ್‌ ಪೋನ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ವಶಪಡಿಸಿಕೊಂಡ ಸೋತ್ತುಗಳ ಒಟ್ಟು ಮೌಲ್ಯ ರೂ. 11,870 ಎಂದು ಅಂದಾಜಿಸಲಾಗಿದೆ. ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

More from the blog

ನೀತಿ ಸಂಹಿತೆ ಉಲ್ಲಂಘನೆ : ಕೋಟಾ ಶ್ರೀನಿವಾಸ್‌ ಪೂಜಾರಿಗೆ ಕೋರ್ಟ್‌ ಸಮನ್ಸ್‌

ಬೆಂಗಳೂರು: ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ್‌ ಪೂಜಾರಿ ಅವರಿಗೆ ಕೋರ್ಟ್‌ ಸಮನ್ಸ್‌ ಜಾರಿ ಮಾಡಿದೆ. ಕೋಟಾ ಶ್ರೀನಿವಾಸ ಪೂಜಾರಿ, ಗುರ್ಮೆ ಸುರೇಶ್ ಶೆಟ್ಟಿ, ಲಾಲಾಜಿ ಮೆಂಡನ್ ಹಾಗೂ ಶಾಲಾ ಆಡಳಿತ ಮಂಡಳಿಗೆ ಜನಪ್ರತಿನಿಧಿಗಳ ವಿಶೇಷ...

ಸರ್ಕಾರದ ಕೋವಿ ಠೇವಣಿ ಕ್ರಮ: ಪರವಾನಿಗೆ ಪಡೆದ ರೈತರಿಂದ ಚುನಾವಣೆ ಬಹಿಷ್ಕಾರ 

ವಿಟ್ಲ: ಕರ್ನಾಟಕ ರಾಜ್ಯ ರೈತ ಸಂಘ ಹಸಿರುಸೇನೆಯ ದ.ಕ.ಜಿಲ್ಲಾ ಸಮಿತಿ ಮತ್ತು ಕೋವಿ ಪರವಾನಿಗೆ ಪಡೆದ ರೈತ ಬಳಕೆದಾರರ ಸಂಘವು ಈ ಬಾರಿ ಚುನಾವಣೆ ಬಹಿಷ್ಕರಿಸುತ್ತದೆ ಎಂದು ರೈತ ಸಂಘದ ಜಿಲ್ಲಾಧ್ಯಕ್ಷ ಶ್ರೀಧರ...

ಟ್ರಾಫಿಕ್ ಪೊಲೀಸ್ ಠಾಣೆಯ ಕಾಮಗಾರಿಯನ್ನು ಪೊಲೀಸ್ ಹೌಸಿಂಗ್ ಕಾರ್ಪೋರೇಸನ್ ಎಡಿಜಿಪಿ ರಾಮಚಂದ್ರರಾವ್ ವೀಕ್ಷಣೆ

ಬಂಟ್ವಾಳ; ಬಿಸಿರೋಡಿನ ಪಾಣೆಮಂಗಳೂರಿನಲ್ಲಿ ಅಂದಾಜು ರೂ.3.18 ಕೋಟಿ ವೆಚ್ಚದಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಟ್ರಾಫಿಕ್ ಪೋಲೀಸ್ ಠಾಣೆಯ ಕಾಮಗಾರಿಯನ್ನು ಪೋಲಿಸ್ ಹೌಸಿಂಗ್ ಕಾರ್ಪೋರೇಸನ್ ಎಡಿಜಿಪಿ ರಾಮಚಂದ್ರರಾವ್ ವೀಕ್ಷಣೆ ನಡೆಸಿದರು. ಉತ್ತಮ ಗುಣಮಟ್ಟದಲ್ಲಿ ಠಾಣೆಯ ಕೆಲಸವನ್ನು ಮಾಡುವ...

ಸೌಜನ್ಯ ಹೋರಾಟ ಸಮಿತಿಯಿಂದ ನೋಟ ಅಭಿಯಾನ

ಮಂಗಳೂರು: ರಾಜಕೀಯ ಪಕ್ಷಗಳು ಮತ್ತು ನ್ಯಾಯಾಂಗ ವ್ಯವಸ್ಥೆಯ ಗಮನ ಸೆಳೆಯುವ ಉದ್ದೇಶದಿಂದ ಸೌಜನ್ಯ ಪರ ಹೋರಾಟ ಸಮಿತಿ ವತಿಯಿಂದ ಮುಂಬರುವ‌ ಲೋಕಸಭಾ ಚುನಾವಣೆಯಲ್ಲಿ ನೋಟಕ್ಕೆ ಮತ ಚಲಾಯಿಸಲು ಜನ ಸಾಮಾನ್ಯರನ್ನು ಪ್ರೇರೇಪಿಸಲು ನೋಟ...